ಮೇಲ್ಮನೆ ಚುನಾವಣೆ: ಕೋರ್‌ ಕಮಿಟಿಯಲ್ಲಿಂದು ಚರ್ಚೆ


Team Udayavani, Oct 14, 2017, 6:50 AM IST

BJP_symbol.jpg

ಬೆಂಗಳೂರು: ಮುಂದಿನ ವರ್ಷ ಜೂನ್‌ನಲ್ಲಿ ವಿಧಾನ ಪರಿಷತ್‌ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ತಲಾ 3 ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಈಗಿನಿಂದಲೇ ಸಜ್ಜಾಗುತ್ತಿದ್ದು, ಶುಕ್ರವಾರ ನಡೆಯುವ ಕೋರ್‌ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯಲಿದೆ.

ವಿಧಾನ ಪರಿಷತ್‌ ನೈಋತ್ಯ ಪದವೀಧರ ಕ್ಷೇತ್ರ ಪ್ರತಿನಿಧಿಸುತ್ತಿರುವ ಮೇಲ್ಮನೆ ಸಭಾಪತಿ ಡಿ.ಎಚ್‌. ಶಂಕರಮೂರ್ತಿ, ಬೆಂಗಳೂರು ಪದವೀಧರ ಕ್ಷೇತ್ರ ಪ್ರತಿನಿಧಿಸುತ್ತಿರುವ ರಾಮಚಂದ್ರಗೌಡ ಹಾಗೂ ಈಶಾನ್ಯ ಪದವೀಧರ ಕ್ಷೇತ್ರ ಪ್ರತಿನಿಧಿಸುತ್ತಿರುವ ಅಮರನಾಥ ಪಾಟೀಲ್‌ ಅವರ ಅವಧಿ 2018ರ ಜೂನ್‌ 18ಕ್ಕೆ ಮುಕ್ತಾಯಗೊಳ್ಳಲಿದೆ. ಈ ಮೂರೂ ಕ್ಷೇತ್ರಗಳು ಬಿಜೆಪಿ ವಶದಲ್ಲಿದೆ. ಅದೇ ರೀತಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್‌ನ ಮರಿತಿಬ್ಬೇಗೌಡ, ಈಶಾನ್ಯ ಶಿಕ್ಷಕರ ಕ್ಷೇತ್ರ ಪ್ರತಿನಿಧಿಸುತ್ತಿರುವ ಜೆಡಿಎಸ್‌ನ ರಮೇಶ್‌ಬಾಬು ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿಯ ಗಣೇಶ್‌ ಕಾರ್ಣಿಕ್‌
ಅವರ ಅವಧಿಯೂ ಇದೇ ವೇಳೆ ಮುಕ್ತಾಯಗೊಳ್ಳುತ್ತದೆ.

ಈ ಪೈಕಿ ಪದವೀಧರ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾನದ ಹಕ್ಕು ಪಡೆಯಲು ಪದವೀಧರರ ನೋಂದಣಿ ಕಾರ್ಯ ಆರಂಭವಾಗಿದ್ದು, ಮೊದಲ ಹಂತದ ನೋಂದಣಿ ಕಾರ್ಯ ನ. 7ಕ್ಕೆ ಕೊನೆಗೊಳ್ಳಲಿದೆ. ಡಿಸೆಂಬರ್‌ನಲ್ಲಿ 2ನೇ ಹಂತ ಮತ್ತು ಫೆಬ್ರವರಿಯಲ್ಲಿ 3ನೇ ಹಂತದ ನೋಂದಣಿ ಕಾರ್ಯ ನಡೆಯಲಿದ್ದು, ಸಾಮಾನ್ಯವಾಗಿ ಕಣದಲ್ಲಿರುವ ಅಭ್ಯರ್ಥಿಗಳೇ ಮುಂದೆ ನಿಂತು ಪದವೀಧರರನ್ನು ನೋಂದಣಿ ಮಾಡುತ್ತಾರೆ. ಈ ಕಾರಣಕ್ಕಾಗಿ ಮೊದಲ ಹಂತದ ನೋಂದಣಿ ಪ್ರಕ್ರಿಯೆ ಅಂತಿಮಗೊಳ್ಳುವ ಮುನ್ನವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಉದ್ದೇಶದಿಂದ ಶುಕ್ರವಾರದ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯಲಿದೆ.

2 ಕ್ಷೇತ್ರಗಳಿಗೆ ಭಾರೀ ಪೈಪೋಟಿ: ಮೂರು ಪದವೀಧರ ಕ್ಷೇತ್ರಗಳ ಪೈಕಿ ನೈಋತ್ಯ ಪದವೀಧರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಮತ್ತು ಬೆಂಗಳೂರು ಪದವೀಧರ ಕ್ಷೇತ್ರ ಪ್ರತಿನಿಧಿಸುತ್ತಿರುವ ರಾಮಚಂದ್ರಗೌಡ ಚುನಾವಣಾ ನಿವೃತ್ತಿ ಪಡೆಯಲು ನಿರ್ಧರಿಸಿದ್ದಾರೆ. ಹೀಗಾಗಿ ಈ ಎರಡು ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ ಕಾಣಿಸಿಕೊಂಡಿದೆ.

ನೈಋತ್ಯ ಪದವೀಧರ ಕ್ಷೇತ್ರದಿಂದ ತಮ್ಮ ಪುತ್ರ ಅರುಣ್‌ ಶಂಕರಮೂರ್ತಿ ಅವರನ್ನು ಕಣಕ್ಕಿಳಿಸಲು ಶಂಕರಮೂರ್ತಿ ತೀವ್ರ ಪ್ರಯತ್ನ ಮಾಡುತ್ತಿದ್ದಾರೆ. ಇದರ ಜತೆಗೆ ರಾಜ್ಯಸಭೆ ಸದಸ್ಯ ಆಯನೂರು ಮಂಜುನಾಥ್‌ ಮತ್ತು ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಕೂಡ ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಆಯನೂರು ಈ ಹಿಂದೆ ರಾಜ್ಯಸಭೆ ಸದಸ್ಯರಾಗಿದ್ದರಿಂದ ಸದ್ಯ ಅರುಣ್‌ ಮತ್ತು ಮಂಜುಳಾ ಹೆಸರು ಮುಂಚೂಣಿಯಲ್ಲಿದೆ. ಇನ್ನು ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಜ್ಯ ಬಿಜೆಪಿ ಸಹವಕ್ತಾರ ಎ.ಎಚ್‌.ಆನಂದ್‌ ಮತ್ತು ಕಲಾ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಜಯಶಂಕರ್‌ ಹೆಸರು ಕೇಳಿಬರುತ್ತಿದೆ. ಎಬಿವಿಪಿ ಮೂಲಕ ಬಿಜೆಪಿಗೆ ಪದಾರ್ಪಣೆ ಮಾಡಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿರುವ ಆನಂದ್‌ ಕಳೆದ ಬಾರಿಯೂ ಟಿಕೆಟ್‌ಗೆ ಪ್ರಯತ್ ಮಾಡಿದ್ದರಾದರೂ ರಾಮಚಂದ್ರಗೌಡ ಅವರೇ ಮತ್ತೆ ಕಣಕ್ಕಿಳಿದಿದ್ದರಿಂದ ಟಿಕೆಟ್‌ ಸಿಕ್ಕಿರಲಿಲ್ಲ. ಇನ್ನು ಜಯಶಂಕರ್‌ ಈಗಲೂ ಉಪನ್ಯಾಸಕ ವೃತ್ತಿಯಲ್ಲಿದ್ದಾರೆ. ಅಲ್ಲದೆ, ಅವರು ಎಡಪಂಥೀಯ ವಿಚಾರಧಾರೆ ಹೊಂದಿರುವವರೊಂದಿಗೆ ಗುರುತಿಸಿಕೊಂಡಿದ್ದರಿಂದ ಬಿಜೆಪಿಯ ಒಂದು ಬಣ ಇವರಿಗೆ ವಿರೋಧ ವ್ಯಕ್ತಪಡಿಸುತ್ತಿದೆ. ಆದರೆ, ರಾಮಚಂದ್ರಗೌಡರೇ ಇವರಿಗೆ ಟಿಕೆಟ್‌ ನೀಡಬೇಕೆಂದು ಒತ್ತಡ ಹೇರುತ್ತಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈಶಾನ್ಯ ಪದವೀಧರ ಕ್ಷೇತ್ರದಿಂದ ಮತ್ತೆ ಅಮರನಾಥ ಪಾಟೀಲ್‌ ಅವರೇ ಕಣಕ್ಕಿಳಿಯುವುದು ಬಹುತೇಕ ಖಚಿತ. 

ಶಿಕ್ಷಕರ ಕ್ಷೇತ್ರ: ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಈ ಹಿಂದೆ ವೈ.ಎ.ನಾರಾಯಣಸ್ವಾಮಿ ಪ್ರತಿನಿಧಿಸುತ್ತಿದ್ದ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಬಿಬಿಎಂಪಿ ‌ ವಾರ್ಡ್‌ ಸದಸ್ಯೆ ಗೌರಮ್ಮ ಪುತ್ರ ಚೇತನ್‌ ಹೆಸರ ಕೇಳಿಬರುತ್ತಿದೆ. ಇವರು ವೈ.ಎ.ನಾರಾಯಣಸ್ವಾಮಿರಿಗೆ ಆಪ್ತರೂ ಆಗಿರುವುದರಿಂದ ಚೇತನ್‌ನನ್ನು ಗೆಲ್ಲಿಸಿಕೊಂಡು ಬರುವುದಾಗಿ ನಾರಾಯಣಸ್ವಾಮಿ ಭರವಸೆ ನೀಡಿದ್ದಾರೆ. ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕ್ಯಾ.ಗಣೇಶ್‌ ಕಾರ್ಣಿಕ್‌ ಅವರನ್ನೇ ಪುನರಾಯ್ಕೆ ಮಾಡಲು ಬಿಜೆಪಿ ತೀರ್ಮಾನಿಸಿದೆ. ವಿಧಾನ ಪರಿಷತ್‌ ಉಪಸಭಾಪತಿ ಮರಿತಿಬ್ಬೇಗೌಡ ಪ್ರತಿನಿಧಿಸುತ್ತಿರುವ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇನ್ನೂ ಪ್ರಬಲ ಆಕಾಂಕ್ಷಿಗಳು ಕಾಣಿಸಿಕೊಂಡಿಲ್ಲ. ಹೀಗಾಗಿ ಶುಕ್ರವಾರ ನಡೆಯುವ ಕೋರ್‌ ಕಮಿಟಿ ಸಭೆಯಲ್ಲಿ ಪದವೀಧರ ಕ್ಷೇತ್ರದ ಅಭ್ಯರ್ಥಿಗಲ ಆಯ್ಕೆ ಕುರಿತಂತೆ ಹೆಚ್ಚಿನ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.