ಏಷ್ಯಾ ಕಪ್ ಹಾಕಿ: ಇಂದು ಭಾರತಕ್ಕೆ ಪಾಕ್ ಎದುರಾಳಿ
Team Udayavani, Oct 15, 2017, 7:00 AM IST
ಢಾಕಾ: ಭರ್ಜರಿ ಫಾರ್ಮ್ನಲ್ಲಿರುವ ಭಾರತ ತಂಡ ಏಷ್ಯಾಕಪ್ ಹಾಕಿ ಟ್ರೋಫಿಯಲ್ಲಿ ಭಾನುವಾರ ಪಾಕಿಸ್ತಾನ ತಂಡದ ಸವಾಲನ್ನು ಎದುರಿಸಲು ಸಜ್ಜಾಗಿದೆ.
ಎರಡೂ ತಂಡಗಳ ಬಲಾಬಲವನ್ನು ನೋಡಿದರೆ ಭಾರತವೇ ಗೆಲ್ಲುವ ಫೇವರಿಟ್ ತಂಡವಾಗಿದೆ. ಕೂಟದ “ಎ’ ಗುಂಪಿನಲ್ಲಿರುವ ಭಾರತ ಈಗಾಗಲೇ ಜಪಾನ್ ವಿರುದ್ಧ 5-1 ಗೋಲುಗಳಿಂದ ಮತ್ತು ಬಾಂಗ್ಲಾ ವಿರುದ್ಧ 7-0 ಗೋಲುಗಳಿಂದ ಜಯ ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 6 ಅಂಕ ಸಂಪಾದಿಸಿ ಅಗ್ರಸ್ಥಾನದಲ್ಲಿದೆ. ಜತಗೆ 2ನೇ ಸುತ್ತಿಗೆ ಪ್ರವೇಶಿಸಿದೆ. ಅದೇ ರೀತಿ ಪಾಕಿಸ್ತಾನ ತಂಡ ಬಾಂಗ್ಲಾ ವಿರುದ್ಧ 7-0 ಗೋಲುಗಳಿಂದ ಜಯ ಸಾಧಿಸಿದರೆ, ಜಪಾನ್ ವಿರುದ್ಧ 2-2ರಿಂದ ಡ್ರಾ ಮಾಡಿಕೊಂಡಿದೆ. ಹೀಗಾಗಿ ಪಾಕ್ 4 ಅಂಕ ಸಂಪಾದಿಸಿ 2ನೇ ಸುತ್ತಿಗೆ ಪ್ರವೇಶಿಸಿದೆ. ಒಮ್ಮೆ ಈ ಪಂದ್ಯದಲ್ಲಿ ಪಾಕ್ ಗೆದ್ದರೆ ಅಗ್ರಸ್ಥಾನದಲ್ಲಿಯೇ 2ನೇ ಸುತ್ತಿಗೆ ಲಗ್ಗೆ ಹಾಕುವ ಅವಕಾಶವಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರೀಡಾ ಸಂಬಂಧ ಹಳಸಿರುವ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳ ನಡುವಿನ ಪ್ರತಿ ಪಂದ್ಯವೂ ಅಭಿಮಾನಿಗಳಲ್ಲಿ ಭಾರೀ ಕ್ರೇಜ್ ಹುಟ್ಟಿಸಿರುತ್ತದೆ. ಈ ನಿಟ್ಟಿನಲ್ಲಿ ಇದು ಮಹತ್ವದ ಪಂದ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.