ಎಂಎಂಎಲ್ ಹಣ ದುರ್ಬಳಕೆಯಾಗಿಲ್ಲ
Team Udayavani, Oct 15, 2017, 11:38 AM IST
ಬೆಂಗಳೂರು: ರೈತರ ಸಾಲಮನ್ನಾ ಮಾಡಿರುವ ಹಣದ ಬಾಬ್ತು ತೀರಿಸಲು ಅಪೆಕ್ಸ್ ಬ್ಯಾಂಕ್ನಲ್ಲಿ ಎಂಎಂಎಲ್ ಹಣ ಠೇವಣಿ ಇಡುವಂತೆ ಒತ್ತಡ ಹೇರಿದ್ದಾರೆಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪ ಸತ್ಯಕ್ಕೆ ದೂರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹಣ ಠೇವಣಿಗೆ ಸರ್ಕಾರ ಯಾವುದೇ ರೀತಿಯ ಒತ್ತಡ ಹಾಕಿಲ್ಲ. ಆದರೆ ಸಾಲ ಮನ್ನಾ ಯೋಜನೆಗೆ ಬಜೆಟ್ನಲ್ಲಿ ಹಣ ಮೀಸಲಿಟ್ಟಿಲ್ಲ. ರೈತರಿಗೆ ಸಾಲ ಮನ್ನಾ ಲಾಭ ಶೀಘ್ರವಾಗಿ ತಲುಪಿಸಲು ಸಂಪನ್ಮೂಲದ ಅಗ್ಯವಿತ್ತು. ಹೀಗಾಗಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಹಣ ಅಪೆಕ್ಸ್ ಬ್ಯಾಂಕಿನಲ್ಲಿ ಠೇವಣಿ ಇಡುವಂತೆ ಸೂಚಿಸಲಾಗಿತ್ತು. ಅದರಂತೆ ಮೈಸೂರು ಮಿನರಲ್ಸ್ ಆಡಳಿತ ಮಂಡಳಿ ಅಪೆಕ್ಸ್ ಬ್ಯಾಂಕ್ನಲ್ಲಿ 1,400 ಕೋಟಿ ರೂ. ಠೇವಣಿ ಇಡಲು ನಿರ್ಧರಿಸಿದ್ದು, ಆ ಹಣಕ್ಕೆ ಅಪೆಕ್ಸ್ ಬ್ಯಾಂಕ್ ಸೂಕ್ತ ಬಡ್ಡಿ ನೀಡಲಿದೆ.
ಎಂಎಂಎಲ್ ತನ್ನ ಹಣ ವಾಪಸ್ ಪಡೆಯಲು ಬಯಸಿದರೆ ಮುಂದಿನ ಆರ್ಥಿಕ ವರ್ಷದಲ್ಲಿ ಅಪೆಕ್ಸ್ ಬ್ಯಾಂಕ್ ವಾಪಸ್ ನೀಡಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾದ ಎಂಎಂಎಲ್ನಲ್ಲಿರುವ 1,400 ಕೋಟಿ ರೂ. ಅನ್ನು ಅಪೆಕ್ಸ್ ಬ್ಯಾಂಕ್ನಲ್ಲಿ ಠೇವಣಿ ಇಡುವುದರಿಂದ ಸಹಕಾರಿ ಬ್ಯಾಂಕ್ಗಳಿಗೆ ನೀಡಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.
ಸಾಲಮನ್ನಾದಿಂದ ಉಂಟಾದ ಆರ್ಥಿಕ ಹೊರೆ ನಿಭಾಯಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಹಕಾರ ಬ್ಯಾಂಕ್ಗಳಿಗೆ ಹಣ ಪಾವತಿಸಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.