20 ವಿವಿಗಳ ವಿಶ್ವದರ್ಜೆಗೆ 10,000 ಕೋ. ರೂ. ಕೊಡುಗೆ
Team Udayavani, Oct 15, 2017, 11:55 AM IST
ಹೊಸದಿಲ್ಲಿ: ದೇಶದ 20 ಅತ್ಯುತ್ತಮ ವಿಶ್ವವಿದ್ಯಾಲಯಗಳ ಅಭಿವೃದ್ಧಿಗಾಗಿ 10 ಸಾವಿರ ಕೋಟಿ ರೂ. ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಶನಿವಾರ ಬಿಹಾರಕ್ಕೆ ಭೇಟಿ ನೀಡಿದ ಅವರು, ಹಲವಾರು ಯೋಜನೆಗಳಿಗೆ ಚಾಲನೆ ನೀಡಿದರಲ್ಲದೆ, ದೇಶದ 7ನೇ ಅತಿ ಹಳೆಯ ವಿ.ವಿ. ಗಳಲ್ಲೊಂದಾದ ಪಟ್ನಾ ವಿ.ವಿ.ಯ ಶತ ಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ದೇಶದ ಅಗ್ರ 20 ವಿ.ವಿ.ಗಳನ್ನು ಜಾಗತಿಕ ಮಟ್ಟದ ವಿವಿಗಳ ಮಟ್ಟಕ್ಕೆ ಏರಿಸುವ ಸಂಕಲ್ಪದೊಂದಿಗೆ 10 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಅವರು ತಿಳಿಸಿದರು. ಈ ಅಪೂರ್ವ ಅವಕಾಶ ಪಡೆಯ ಲಿರುವ 20 ವಿವಿಗಳಲ್ಲಿ 10 ಸರಕಾರಿ ಹಾಗೂ 10 ಖಾಸಗಿ ವಿವಿಗಳಾಗಿರಲಿವೆ ಎಂದು ಸ್ಪಷ್ಟಪಡಿಸಿದರು.
ಸೆಂಟ್ರಲ್ ಬೇಡ, ವಿಶ್ವಮಾನ್ಯ ಬೇಕು: ಸಮಾರಂಭ ದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪಟ್ನಾ ವಿಶ್ವವಿದ್ಯಾಲಯಕ್ಕೆ ಕೇಂದ್ರೀಯ ವಿಶ್ವವಿದ್ಯಾಲಯ ಸ್ಥಾನಮಾನ ನೀಡಬೇಕೆಂಬ ಮನವಿಗೆ ಪ್ರತಿಕ್ರಿಯಿಸಿದ ಮೋದಿ, “ಪ್ರತಿಷ್ಠಿತ ವಿವಿಗಳಿಗೆ ಕೇಂದ್ರೀಯ ಸ್ಥಾನಮಾನ ನೀಡುವ ಪದ್ಧತಿ ಹಳತಾಗಿದ್ದು, ಈಗ ದೇಶದ ಪ್ರತಿಷ್ಠಿತ ವಿವಿಗಳನ್ನು ಅಂತಾರಾಷ್ಟ್ರೀಯ ದರ್ಜೆಗೆ ಏರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಪಟ್ನಾ ವಿವಿಯೂ ಸವಾಲನ್ನು ಸ್ವೀಕರಿಸಿ, ವಿಶ್ವ
ದರ್ಜೆಗೇರುವ ನಿಟ್ಟಿನಲ್ಲಿ ಪ್ರಯತ್ನಶೀಲವಾ ಗಬೇಕು’ ಎಂದು ಕರೆ ನೀಡಿದರು.
ನಿತೀಶ್ ಕೊಂಡಾಡಿದ ಮೋದಿ: ಸಮಾರಂಭದಲ್ಲಿ ಸಿಎಂ ನಿತೀಶ್ ಕುಮಾರ್ ಅವರನ್ನು ಪ್ರಧಾನಿ ಮೋದಿ ಹಾಡಿ ಹೊಗಳಿದರು. ನಿತೀಶ್ ಅವರು ಬಿಹಾರದ ಅಭಿವೃದ್ಧಿಗಾಗಿ ತೀವ್ರವಾದ ಕಳಕಳಿ ಹೊಂದಿದ್ದಾರೆಂದು ಹೇಳಿದ ಮೋದಿ, ನಿತೀಶ್ ನಾಯಕತ್ವದಲ್ಲಿ ರಾಜ್ಯವು ನಿರೀಕ್ಷಿತ ಪ್ರಗತಿ ಸಾಧಿಸಲಿದೆ ಎಂದು ಆಶಿಸಿದರು. ಆರ್‌ಜೆಡಿ ಸಖ್ಯ ತೊರೆದು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಬಳಿಕ ಇದೇ ಮೊದಲ ಬಾರಿಗೆ ನಿತೀಶ್ ಅವರು ಮೋದಿ ಜತೆ ವೇದಿಕೆ ಹಂಚಿಕೊಂಡರು.
ಬಿಹಾರಕ್ಕೆ ದೀಪಾವಳಿಯ ಭರ್ಜರಿ ಕೊಡುಗೆ
ಮಹಾಘಟಬಂಧನ್‌ನಿಂದ ಹೊರಬಂದು ಬಿಜೆಪಿಯೊಂದಿಗೆ ಮೈತ್ರಿ ಬೆಳೆಸಿ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಪೂರ್ಣಪ್ರಮಾಣದಲ್ಲಿ ಬಿಹಾರಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ, ಆ ರಾಜ್ಯಕ್ಕೆ ಬರೋಬ್ಬರಿ 3,700 ಕೋಟಿ ರೂ. ವೆಚ್ಚದ ಯೋಜನೆಗಳ ಬಂಪರ್ ಕೊಡುಗೆ ನೀಡಿದರು.
ಮಂಗಳವಾರ ಪಟ್ನಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ, ಪಾಟ್ನಾ ಸಮೀಪದ ಮೊಕಾಮಕ್ಕೆ ತೆರಳಿ ನಮಾಮಿ ಗಂಗಾ ಯೋಜನೆಯಡಿ ಗಂಗಾ ನದಿಗೆ ಅಡ್ಡಲಾಗಿ ಕಟ್ಟಲಾಗುವ ಆರು ಲೇನ್‌ಗಳ ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದರು. ಆನಂತರ, ಮೊಕಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಚಾಲನೆ ನೀಡಿದ ಅವರು, ಬಿಹಾರದ ಅಭಿವೃದ್ಧಿಯಲ್ಲಿ ಹೆದ್ದಾರಿಗಳ ಪಾತ್ರ ಹಿರಿದಾಗಿದ್ದು, ಇದಕ್ಕೆ ಕೇಂದ್ರ ಸರಕಾರ ಸಂಪೂರ್ಣ ಸಹಕಾರ ನೀಡುತ್ತದೆ ಎಂದರು. ಇದಾದ ಮೇಲೆ, ಪಾಟ್ನಾದಲ್ಲಿ 738.14 ಕೋಟಿ ರು.ಗಳ ವೆಚ್ಚದಲ್ಲಿ ನಿರ್ಮಾಣವಾಗಲಿರುವ, ದಿನಪ್ರತಿ 140 ದಶಲಕ್ಷ ಲೀಟರ್ ತ್ಯಾಜ್ಯ ನೀರನ್ನು ಶುದ್ಧೀಕರಿಸಬಲ್ಲ ಘಟಕಕ್ಕೆ (ಎಸ್‌ಟಿಪಿ) ಚಾಲನೆ ನೀಡಿದರು.
ಯಾವೆಲ್ಲ ಯೋಜನೆಗಳು?
ಪಟ್ನಾ ಬಳಿಯ ಮೊಕಾಮದಲ್ಲಿ ಸುಮಾರು 3,700 ಕೋಟಿ ರೂ. ಮೊತ್ತದ ಆರು ಯೋಜನೆಗಳಿಗೆ ಚಾಲನೆ.
ಗಂಗಾ ನದಿಗೆ ಅಡ್ಡಲಾಗಿ ಕಟ್ಟಲಾಗುವ 1,200 ಕೋಟಿ ರೂ. ವೆಚ್ಚದ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ .
ಎನ್‌ಎಚ್ 30, ಎನ್‌ಎಚ್ 84, ಎನ್‌ಎಚ್ 31, ಎನ್‌ಎಚ್ 104, ಎನ್‌ಎಚ್ 106 ಹೆದ್ದಾರಿ ಯೋಜನೆಗಳಿಗೆೆ ಚಾಲನೆ.
ದೇಶದ 7ನೇ ಅತಿ ಹಳೆಯ ವಿಶ್ವವಿದ್ಯಾಲಯವಾದ ಪಟ್ನಾ ವಿವಿ ಶತ ಮಾನೋ ತ್ಸವ ಆಚರಣೆಯಲ್ಲಿ ಭಾಗಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.