ಭಾರತ ಬಿಟ್ಟು ತೊಲಗಿ ಚಳವಳಿಯ 75ನೇ ವರ್ಷಾಚರಣೆ
Team Udayavani, Oct 15, 2017, 12:09 PM IST
ಮಂಗಳಗಂಗೋತ್ರಿ: ಭಾರತ ಬಿಟ್ಟು ತೊಲಗಿ ಚಳವಳಿ ಯುವ ಸಮುದಾಯ ಸಹಿತ ಕಾಲೇಜು ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡಿದ ಕ್ರಾಂತಿಕಾರಿ ಹೋರಾಟವಾಗಿದ್ದು, ಕರಾವಳಿಯಲ್ಲಿ ಅಮ್ಮೆಂಬಳ ಬಾಳಪ್ಪನಂತಹ ಹಲವಾರು ಯುವ ಸಮುದಾಯ ಈ ಹೋರಾಟದ ಮುಂಚೂಣಿಯಲ್ಲಿದ್ದರು ಎಂದು ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ| ಸುರೇಂದ್ರ ರಾವ್ ಅಭಿಪ್ರಾಯಪಟ್ಟರು.
ಭಾರತ ಬಿಟ್ಟು ತೊಲಗಿ ಚಳುವಳಿಯ 75ನೇ ವರ್ಷಾಚರಣೆಯ ಅಂಗವಾಗಿ ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಆಶ್ರಯದಲ್ಲಿ ವಿಶ್ವವಿದ್ಯಾಲಯದ ಹಳೆ ಸೆನೆಟ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬ್ರಿಟಿಷರ ವಿರುದ್ಧ 1857ರಲ್ಲಿ ನಡೆದ ದಂಗೆಯ ನಂತರ 1942ರ ವರೆಗೂ ಬ್ರಿಟಿಷರ ವಿರುದ್ಧ ಅಂತಹ ಪರಿಣಾಮಕಾರಿ ಹೋರಾಟಗಳು ನಡೆದಿರಲಿಲ್ಲ. ಆದರೆ ಕ್ವಿಟ್ ಇಂಡಿಯಾ ಚಳುವಳಿಗೆ ಮಹಾತ್ಮಾ ಗಾಂಧೀಜಿ ಅವರು ಕರೆ ಕೊಟ್ಟ ಬಳಿಕ ಆಗಸ್ಟ್ ನಲ್ಲಿ ಆರಂಭವಾದ ಚಳುವಳಿ ಕೇವಲ ಎರಡು ತಿಂಗಳ ಕಾಲವಷ್ಟೇ ನಡೆದರೂ ಸ್ವಾತಂತ್ರ ಹೋರಾಟದಲ್ಲಿ ಹಲವು ಫಲಿತಾಂಶ ತಂದಿತ್ತು ಎಂದರು.
ಭಾರತದಲ್ಲಿ ಸ್ವಾತಂತ್ರದ ಹೋರಾಟವು ಅಹಿಂಸಾತ್ಮಕವಾಗಿ ನಡೆದಿತ್ತು ಎನ್ನುತ್ತಾರೆ. ಆದರೆ ಇದರಲ್ಲಿ ನಡೆದ ಎಲ್ಲ ಹೋರಾಟಗಳು ಅಹಿಂಸಾತ್ಮಕವಾಗಿ ನಡೆದಿರಲಿಲ್ಲ ಎಂಬುದನ್ನು ನಾವು ಚಿಂತನೆ ನಡೆಸಬೇಕಾಗಿದೆ. ಅಲ್ಲದೆ ಸ್ವಾತಂತ್ರ್ಯ ಹೋರಾಟವನ್ನು ನಾವು ಕೇವಲ ವ್ಯಕ್ತಿಗತವಾಗಿ ನೋಡುವ ಬದಲು ಅದೊಂದು ಸಂಘಟಿತವಾದ ಹೋರಾಟವಾಗಿತ್ತು. ಗಾಂಧೀಜಿ ಹೋರಾಟಕ್ಕೆ ಇಳಿದ ಮರುದಿನವೇ ಬಂಧನವಾದರೂ ಅವರ ನಂತರ ಎರಡನೇ ಹಂತದ, ಮೂರನೇ ಹಂತದ ನಾಯಕರು ಮುಂಚೂಣಿಯಲ್ಲಿದ್ದು ಹೋರಾಟ ಮುಂದುವರಿಯಿತು ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ| ಉದಯ ಬಾರ್ಕೂರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ವಿದ್ಯಾರ್ಥಿ ಹನುಮಂತಪ್ಪ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.