ಸಚಿವ ರೋಷನ್‌ ಬೇಗ್‌ ವಿರುದ್ಧ   ಪ್ರತಿಭಟನೆ 


Team Udayavani, Oct 15, 2017, 3:12 PM IST

15-Mng-1.jpg13.jpg

ಪುತ್ತೂರು: ದೇಶದ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ರಾಜ್ಯ ನಗರಾಭಿವೃದ್ಧಿ ಸಚಿವ ರೋಷನ್‌ ಬೇಗ್‌ ನೀಡಿರುವ ಅವಹೇಳನಕಾರಿ ಹೇಳಿಕೆಯ ವಿರುದ್ಧ ಪುತ್ತೂರು ಬಿಜೆಪಿ ವತಿಯಿಂದ ಶನಿವಾರ ನಗರದ ಗಾಂಧಿ ಕಟ್ಟೆಯ ಬಳಿ ಪ್ರತಿಭಟನೆ ಸಭೆ ನಡೆಯಿತು.

ಅವನತಿಗೆ ಹಾದಿ
ಪ್ರತಿಭಟನ ಸಭೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಸಾರ್ವಜನಿಕ ಸಭೆಯಲ್ಲಿ ರಾಜ್ಯ ಸಚಿವ ರೋಷನ್‌ ಬೇಗ್‌ ಅವರು ಪ್ರದಾನಿ ನರೇಂದ್ರ ಮೋದಿಯವರ ಕುರಿತು ಕೀಳು ಮಟ್ಟದ ಶಬ್ದವನ್ನು ಪ್ರಯೋಗಿಸಿ ಪಕ್ಷದ ಭಾಷೆ, ಸಂಸ್ಕೃತಿಯನ್ನು ಜಗಜ್ಜಾಹೀರು ಮಾಡಿದ್ದಾರೆ. ಪ್ರಧಾನಿಯವರು ದೇಶದ 125 ಕೋಟಿ ಜನರ ಪ್ರತಿನಿಧಿ ಎಂಬುದನ್ನೂ ಅವರು ಮರೆತಿದ್ದಾರೆ. ಈ ಹಿಂದೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಚಕ್ರವರ್ತಿ ಸೂಲಿಬೆಲೆ ವಿರುದ್ಧವೂ ಇದೇ ರೀತಿ ಕೀಳು ಭಾಷೆ ಪ್ರಯೋಗಿಸಿದ್ದರು. ಇದು ಕಾಂಗ್ರೆಸ್‌ ಪಕ್ಷದ ಅವನತಿಯ ಸೂಚಕವಾಗಿದೆ. ಇಂಥವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಬೇಕು ಎಂದು ಆಗ್ರಹಿಸಿದರು.

ಪ್ರತಿಕೃತಿಗೆ ಬೆಂಕಿ
ಪ್ರತಿಭಟನ ಸಭೆಯ ಬಳಿ ರಾಜ್ಯ ಸಚಿವ ರೋಷನ್‌ ಬೇಗ್‌ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಘೋಷಣೆ ಕೂಗುವ ಮೂಲಕ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ನಗರ ಮಂಡಲ ಅಧ್ಯಕ್ಷ ಜೀವಂಧರ್‌ ಜೈನ್‌, ನಗರ ಮಂಡಲದ ಕಾರ್ಯದರ್ಶಿಗಳಾದ ರಾಮದಾಸ್‌ ಹಾರಾಡಿ, ಗೌರಿ ಬನ್ನೂರು, ಡಿ. ಶಂಭು ಭಟ್‌, ಪ್ರಮುಖರಾದ ಅರುಣ್‌ ಕುಮಾರ್‌ ಪುತ್ತಿಲ, ಅಶೋಕ್‌ ಕುಮಾರ್‌ ಕೋಡಿಂಬಾಡಿ, ಶಿವರಂಜನ್‌, ವಿಶ್ವನಾಥ ಗೌಡ, ಬೂಡಿಯಾರು ರಾಧಾಕೃಷ್ಣ ರೈ, ಉಷಾ ನಾರಾಯಣ, ಹರಿಣಿ ಪುತ್ತೂರಾಯ, ಮೀನಾಕ್ಷಿ ಮಂಜುನಾಥ, ನಿತೀಶ್‌ ಕುಮಾರ್‌ ಶಾಂತಿವನ, ಪುಯಿಲ ಕೇಶವ ಗೌಡ, ಲಕ್ಷ್ಮಣ ಗೌಡ ರಾಜೇಶ್‌ ಬನ್ನೂರು, ಹರೀಶ್‌ ಬಿಜತ್ರೆ, ಸುನೀಲ್‌ ದಡ್ಡು, ಪುರುಷೋತ್ತಮ ಮುಂಗ್ಲಿಮನೆ, ಭರತ್‌ ಈಶ್ವರಮಂಗಲ, ಯತಿರಾಜ್‌ ರೈ ನೀರ್ಮಾಡಿ, ಸುರೇಶ್‌ ಆಳ್ವ, ಸಂದೀಪ್‌ ಹೊಸಮನೆ ಮೊದಲಾದವರು ಉಪಸ್ಥಿತರಿದ್ದರು. ಬಿಜೆಪಿ ಯುವ ಮೋರ್ಚಾ ನಗರ ಮಂಡಲ ಅಧ್ಯಕ್ಷ ಅನೀಶ್‌ ಬಡೆಕ್ಕಿಲ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.