ಮುಂದುವರಿದ ಕರ ನಿರಾಕರಣೆ ಸತ್ಯಾಗ್ರಹ
Team Udayavani, Oct 16, 2017, 10:53 AM IST
ಬೆಂಗಳೂರು: ಕೈ ಉತ್ಪನ್ನಗಳ ಮೇಲಿನ ಸುಂಕ ರದ್ದು ಮಾಡಲು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಆಗ್ರಹಿಸಿ ಹಿರಿಯ ರಂಗಕರ್ಮಿ ಕೆ.ಪ್ರಸನ್ನ ನೇತೃತ್ವದಲ್ಲಿ ನಿಡುಮಾಮಿಡಿ ಮಠದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಭಾನುವಾರವೂ ಮುಂದುವರಿದಿತ್ತು. ರಾಜ್ಯದಲ್ಲಿ ಶೇ.60ರಷ್ಟು ಮಂದಿ ಗಾಣಿಗರು, ಕುರುಬರು, ಕುಂಬಾರರು ಸೇರಿದಂತೆ ಹಲವು ಉಪಜಾತಿಗಳ ಜನರು ಕೈ ಉತ್ಪನ್ನಗಳನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಿಎಸ್‌ಟಿ ನೀತಿಯು ಈ ಉಪಜಾತಿಗಳನ್ನು ಬೀದಿಗೆ ತರಲಿದೆ.
ಆದ್ದರಿಂದ ರಾಜಕೀಯ ಪಕ್ಷಗಳು, ಮುಖಂಡರು ಪಕ್ಷಾತೀತವಾಗಿ ಕೈಉತ್ಪನ್ನಗಳ ಮೇಲಿನ ಸುಂಕ ರದ್ದು ಮಾಡಲು ಜಿಎಸ್‌ಟಿ ಕೌನ್ಸಿಲ್‌ಗೆ ಪತ್ರ ಬರೆಯಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದ್ದಾರೆ. ಕೈ ಉತ್ಪನ್ನಗಳ ಮೇಲೆ ಜಿಎಸ್‌ಟಿ ವಿಧಿಸಿರುವ ವಿಚಾರ ವನ್ನು ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಗಮನಕ್ಕೆ ತರಲಾಗುವುದು ಎಂದು ಪ್ರತಿಭಟನಾಕಾರರು ತಿಳಿಸಿದ್ದು, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಜಿಎಸ್‌ಟಿ ಕೌನ್ಸಿಲ್‌ನ ಸದಸ್ಯರು ಮೊದಲು ಈ ಹೋರಾಟಕ್ಕೆ ಸ್ಪಂದಿಸಬೇಕು. ಆದರೆ, ಇದುವರೆಗೂ ಯಾವ ಸದಸ್ಯರು ಭೇಟಿ ನೀಡಿ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಿದರು.
ಭಾನುವಾರ ಹಿರಿಯ ಚಿಂತಕ ಕೆ.ಮರುಳಸಿದ್ದಪ್ಪ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮಾಧ್ಯಮ ವಕ್ತಾರ ಪ್ರೊ. ರಾಜೀವ್‌ಗೌಡ, ಲೇಖಕ ಮುಡ್ನಾಕೊಡು ಚಿನ್ನಸ್ವಾಮಿ, ರಂಗಕರ್ಮಿ ಮಲ್ಲಿಕಾ ಗಣೇಶ್, ಹೋರಾಟಗಾರ ಎಸ್. ಆರ್.ಹಿರೇಮಠ, ಬ್ರಿಜೇಶ್ ಕಾಳಪ್ಪ, ಆಂಜನೇಯರೆಡ್ಡಿ, ಮಾಜಿ ಸಚಿವ ಎಂ.ಚಂದ್ರಶೇಖರ್ ಅವರ ಪತ್ನಿ ಸರೋಜಾ ಚಂದ್ರಶೇಖರ್ ಸೇರಿದಂತೆ ಹಲವರು ಪ್ರತಿ ಭಟನಾ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಗ್ರಾಮಸೇವಾ ಸಂಘದಿಂದ ನಡೆಯುತ್ತಿರುವ ಹೋರಾಟಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ, ಸಂಬಂಧಪಟ್ಟ ಜಿಎಸ್‌ಟಿ ಕೌನ್ಸಿಲ್ ಸದಸ್ಯರು, ಕೇಂದ್ರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.