ಗೋವಿಂದರಾಜನಗರಕ್ಕೆ ಶೀಘ್ರ ಅಭ್ಯರ್ಥಿ ಪ್ರಕಟ
Team Udayavani, Oct 16, 2017, 12:15 PM IST
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದ ಗೋವಿಂದರಾಜನಗರ ಕ್ಷೇತ್ರವನ್ನು ಈ ಬಾರಿ ಮತ್ತೆ ಬಿಜೆಪಿ ತೆಕ್ಕೆಗೆ ಸೆಳೆದುಕೊಳ್ಳುವ ನಿಟ್ಟಿನಲ್ಲಿ ಕೆಲವೇ ದಿನಗಳಲ್ಲಿ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿ ಹೆಸರು ಪ್ರಕಟಿಸುವುದಾಗಿ ಕೇಂದ್ರ ಸಚಿವ ಅನಂತಕುಮಾರ್ ಹೇಳಿದ್ದಾರೆ.
ಗೋವಿಂದರಾಜನಗರ ಕ್ಷೇತ್ರದಲ್ಲಿ ಭಾನುವಾರ ಬಿಜೆಪಿ ಕಚೇರಿ ಉದ್ಘಾಟಿಸಿದ ಮಾತನಾಡಿದ ಅವರು, ಈ ಕ್ಷೇತ್ರ ಬಿಜೆಪಿ ಸಂಸದರ ವ್ಯಾಪ್ತಿಗೆ ಬರುತ್ತದೆ. ಇರುವ ಬಹುತೇಕ ಕಾರ್ಪೊರೇಟರ್‌ಗಳು ಬಿಜೆಪಿಗೆ ಸೇರಿದವರು. ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಲು ಕ್ಷೇತ್ರದಲ್ಲಿ ಪಕ್ಷದ ಶಾಸಕರೂ ಇರಬೇಕಾದ ಅಗತ್ಯವಿದೆ.
ಹೀಗಾಗಿ ಕಾಂಗ್ರೆಸ್ ಶಾಸಕರನ್ನು ಸೋಲಿಸಲು ಸಿದ್ಧತೆ ನಡೆಸುವ ಉದ್ದೇಶದಿಂದ ಶೀಘ್ರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿ ಕಾರಿದ ಕೇಂದ್ರ ಸಚಿವರು, ಮಳೆ ಸಂದರ್ಭದಲ್ಲಿ ಸರ್ಕಾರ ಮತ್ತು ಬಿಬಿಎಂಪಿ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ವಿಫಲವಾಗಿದೆ.
ಇದರ ಪರಿಣಾಮ ರಾಜ್ಯಕ್ಕೆ ಹಲವಾರು ಭಾಗ್ಯಗಳನ್ನು ನೀಡಿದ ಮುಖ್ಯಮಂತ್ರಿಗಳು ಬೆಂಗಳೂರಿನ ನಾಗರಿಕರಿಗೆ ‘ರಸ್ತೆ ಗುಂಡಿ ಭಾಗ್ಯ’ ದಯಪಾಲಿಸಿದಂತಾಗಿದೆ ಎಂದು ವ್ಯಂಗ್ಯವಾಡಿದರು. ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಪಾಲಿಕೆ ಸದಸ್ಯ ಉಮೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ವಿ.ಸೋಮಣ್ಣ ಮತ್ತಿತತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.