2018ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ
Team Udayavani, Oct 16, 2017, 1:33 PM IST
ಮೈಸೂರು: ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, 2018ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ಕೆ.ಆರ್.ನಗರದ ರೇಡಿಯೋ ಮೈದಾನದಲ್ಲಿ ಆಯೋಜಿಸಿದ್ದ ಕೃಷ್ಣರಾಜ ನಗರ ವಿಧಾನಸಭಾ ಕ್ಷೇತ್ರದ ಬೂತ್‌ಮಟ್ಟದ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಮುಖ್ಯಮಂತ್ರಿಯಾಗಿ 5 ಬಜೆಟ್ ಸೇರಿದಂತೆ ಈವರೆಗೆ 12 ಬಜೆಟ್ ಮಂಡಿಸಿದ್ದೇನೆ. 2018ರ ಫೆಬ್ರವರಿಯಲ್ಲಿ 13ನೇ ಬಜೆಟ್ ಮಂಡಿಸುತ್ತೇನೆ. 2018ರ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬಂದು 6 ಬಜೆಟ್ ಮಂಡಿಸುತ್ತೇವೆಂದರು.
ಮುಂಬರುವ ವಿಧಾನಸಭೆ ಚುನಾವಣೆಗೆ ನಮ್ಮ ಕಾರ್ಯಕರ್ತರಿಗೆ ಉತ್ಸಾಹ ತುಂಬಿ ಸಜ್ಜುಗೊಳಿಸಲು ಇಂತಹ ಸಮಾವೇಶಗಳನ್ನು ಆಯೋಜಿಸಲಾಗುತ್ತಿದೆ. ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಹಿಂದಿನ 2 ಚುನಾವಣೆಗಳಲ್ಲಿ ಜೆಡಿಎಸ್ ಗೆಲ್ಲಿಸಿದ್ದೀರಿ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕೆಂದರು.
ಕಾರ್ಯಕರ್ತರೇ ಯಾವುದೇ ರಾಜಕೀಯ ಪಕ್ಷದ ಶಕ್ತಿ. ಅದಕ್ಕಾಗಿಯೇ ರಾಜ್ಯದಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ರೂಪಿಸಿದ್ದೇವೆ. ಬಿಜೆಪಿ, ಜೆಡಿಎಸ್ ನವರಂತೆ ಕಾಂಗ್ರೆಸ್ ಕಾರ್ಯಕರ್ತರು ಸುಳ್ಳು ಹೇಳಬೇಕಿಲ್ಲ. ದಲಿತರು, ಹಿಂದುಳಿದವರು, ಬಡವರು, ರೈತರು, ಮಹಿಳೆಯರು, ಮಕ್ಕಳು, ಅಲ್ಪಸಂಖ್ಯಾತರು ಸೇರಿದಂತೆ ರಾಜ್ಯದ 6.5 ಕೋಟಿ ಜನರಿಗೆ ಸರ್ಕಾರದ ಒಂದಲ್ಲಾ ಒಂದು ಕಾರ್ಯಕ್ರಮ ಕೊಟ್ಟಿದ್ದೇವೆ.
ನಮ್ಮ ಸರ್ಕಾರ ಕಳೆದ 4 ವರ್ಷ 5 ತಿಂಗಳ ಅವಧಿಯಲ್ಲಿ ಜಾರಿಗೆ ತಂದಿರುವ ಜನಪರ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕೆಂದರು. ಈ ಹಿಂದಿನ ಯಾವುದೇ ಸರ್ಕಾರ ಚುನಾವಣೆ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಈಡೇರಿಸಿಲ್ಲ. ಆದರೆ, ನಮ್ಮ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ ಈಗಾಗಲೇ 155 ಭರವಸೆ ಈಡೇರಿಸಿ ನೂರಕ್ಕೆ ನೂರರಷ್ಟು ನುಡಿದಂತೆ ನಡೆದಿದ್ದೇವೆಂದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್, ಸಚಿವೆ ಡಾ.ಗೀತಾ, ಸಂಸದ ಆರ್.ಧ್ರುವನಾರಾಯಣ್, ಶಾಸಕರಾದ ಕೆ.ವೆಂಕಟೇಶ್, ಎಚ್.ಪಿ.ಮಂಜುನಾಥ್, ಕೆ.ಆರ್.ನಗರದ ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮೇಗೌಡ, ಜಿಪಂ ಮಾಜಿ ಸದಸ್ಯ ಎಂ.ಟಿ.ಕುಮಾರ್ ಮಾತನಾಡಿದರು.
ಶಾಸಕ ಕಳಲೆ ಕೇಶವಮೂರ್ತಿ, ಮೈಲ್ಯಾಕ್ ಅಧ್ಯಕ್ಷ ಎಚ್.ಎ.ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಜಿಪಂ ಸದಸ್ಯರಾದ ಡಿ.ರವಿಶಂಕರ್, ಡಾ.ಪುಷ್ಪಾ, ಕಾಂಗ್ರೆಸ್ ಮುಖಂಡರಾದ ಅನುರಾಧಾ, ಐಶ್ವರ್ಯ ಮಹದೇವು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹದೇವ್, ಉದಯ ಕುಮಾರ್, ನಂದಿನಿ ಮತ್ತಿತರರಿದ್ದರು.
ನ.15ರಿಂದ ಎಲ್ಲರಿಗೂ ಆರೋಗ್ಯ ಭಾಗ್ಯ
ನ.15ರಿಂದ ಯೂನಿವರ್ಸಲ್ ಹೆಲ್ತ್ ಸ್ಕೀಂ ಆರೋಗ್ಯ ಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ಡಿ.1ರಿಂದ ಅನಿಲಭಾಗ್ಯ ಯೋಜನೆ ಜಾರಿ ಮಾಡಿ ರಾಜ್ಯದ 15 ಲಕ್ಷ ಕುಟುಂಬಗಳಿಗೆ ಉಚಿತ ಅನಿಲ ಭಾಗ್ಯ ಮಾತ್ರವಲ್ಲ, ಗ್ಯಾಸ್‌ಸ್ಟೌ, ರೀಫಿಲ್ ಎಲ್ಲಾ ಸೌಲಭ್ಯವನ್ನೂ ಕಲ್ಪಿಸುತ್ತೇವೆ. ಆ ಮೂಲಕ ರಾಜ್ಯದ ಎಲ್ಲಾ ಕುಟುಂಬಗಳೂ ಸೀಮೆಎಣ್ಣೆ ಬಿಟ್ಟು ಗ್ಯಾಸ್‌ನಿಂದ ಅಡುಗೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
R Ashok ಮ್ಯಾಚ್ ಫಿಕ್ಸಿಂಗ್ ಎಂದು ಹೇಳಿರುವುದು ಸಂವಿಧಾನಾತ್ಮಕ ಹುದ್ದೆಗೆ ಮಾಡಿದ ಅವಮಾನ
Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು
BBK11: ಅನುಷಾಗೆ ಕಾಲಿನಲ್ಲಿ ಒದ್ದ ಗೋಲ್ಡ್ ಸುರೇಶ್; ಬಿಗ್‌ಬಾಸ್ ಆಟದಲ್ಲಿ ರಾದ್ಧಾಂತ
Katpadi: ಅಂಚಿಗೆ ಬ್ಯಾರಿಕೇಡ್ ಇರಿಸಿ ರಿಬ್ಬನ್ ಅಳವಡಿಕೆ
MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.