ಮಾಲೀಕರಿಗೆ ಪಾಲಿಕೆ ನೋಟಿಸ್ ನೀಡಿತ್ತು!
Team Udayavani, Oct 17, 2017, 12:00 PM IST
ಬೆಂಗಳೂರು: ಈಜಿಪುರದಲ್ಲಿ ಸೋಮವಾರ ಸಿಲಿಂಡರ್ ಸ್ಫೋಟ ಪ್ರಕರಣ ಸಂಭವಿಸಿದ ಕಟ್ಟಡ ಸೇರಿ ಅಕ್ಕಪಕ್ಕದ ಶಿಥಿಲಗೊಂಡಿದ್ದ ಕಟ್ಟಡಗಳ ತೆರವಿಗೆ ಬಿಬಿಎಂಪಿ ಹಿಂದೆಯೇ ನೋಟಿಸ್ ನೀಡಿತ್ತು. ಸಿಲಿಂಡರ್ ಸ್ಫೋಟದಿಂದ ಈಗ ಕುಸಿದಿರುವ ಕಟ್ಟಡದ ಮಾಲೀಕರಿಗೂ ಅಧಿಕಾರಿಗಳು ನೋಟಿಸ್ ನೀಡಿ, ಮನೆಯಲ್ಲಿ ಯಾರೂ ವಾಸಿಸದಂಥೆ ಹಾಗೂ ಆದಷ್ಟು ಬೇಗ ತೆರವುಗೊಳಿಸುವಂತೆ ತಿಳಿಸಿದ್ದರು.
ಆದರೆ, ಮಾಲೀಕ ಕಟ್ಟಡ ತೆರವು ಮಾಡಿರಲಿಲ್ಲ, ಅಲ್ಲದೆ ಮನೆಯನ್ನು ಬಾಡಿಗೆಗೆ ನೀಡಿದ್ದರು ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ. ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈಜಿಪುರದ ಹಲವಾರು ಮನೆಗಳು ಶಿಥಿಲಗೊಂಡಿದ್ದು, ಆ ಹಿನ್ನೆಲೆಯಲ್ಲಿ ಮನೆಗಳು ವಾಸಕ್ಕೆ ಯೋಗ್ಯವಾಗಿಲ್ಲದ ಕಾರಣ ಮನೆಗಳನ್ನು ಖಾಲಿ ಮಾಡುವಂತೆ ಅಧಿಕಾರಿಗಳು ನೋಟಿಸ್ ನೀಡಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್, ನಗರದಲ್ಲಿನ ಪ್ರತಿಯೊಂದು ವಾರ್ಡ್ನಲ್ಲಿನ ಶಿಥಿಲಗೊಂಡ ಕಟ್ಟಡಗಳಿಗೆ ಪಾಲಿಕೆ ಅಧಿಕಾರಿಗಳು ನೋಟಿಸ್ ನೀಡುತ್ತಾರೆ. ಖಾಸಗಿ ಕಟ್ಟಡಗಳಿಗೆ ಅಧಿಕಾರಿಗಳು ಕೇವಲ ನೋಟಿಸ್ ನೀಡಬಹುದೇ ಹೊರತು ತೆರವುಗೊಳಿಸುವ ಅಧಿಕಾರ ಪಾಲಿಕೆಗಿಲ್ಲ ಎಂದು ತಿಳಿಸಿದರು.
ಮಾಹಿತಿ ಕೇಳಿದ ಮೇಯರ್: ಸೋಮವಾರ ಈಜಿಪುರದಲ್ಲಿ ಸಿಲಿಂಡರ್ ಸ್ಫೋಟದಿಂದ ಕಟ್ಟಡ ಕುಸಿದ ಬೆನ್ನಲ್ಲೇ ನಗರದ 198 ವಾರ್ಡ್ಗಳಲ್ಲಿರುವ ಶಿಥಿಲ ಕಟ್ಟಡಗಳ ಮಾಹಿತಿ ನೀಡುವಂತೆ ಮೇಯರ್ ಸಂಪತ್ರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾತನಾಡಿದರುವ ಮೇಯರ್, ಬೀಳುವ ಸ್ಥಿತಿಯಲ್ಲಿರುವ ಮನೆಗಳನ್ನು ಗುರುತಿಸಿ ವರದಿ ನೀಡುವಂತೆ ಹಾಗೂ ಅಂತಹ ಮನೆಗಳನ್ನು ಖಾಲಿ ಮಾಡಲು ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್
Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.