143 ಯೋಜನೆಗಳಿಗೆ ಧನಸಹಾಯ
Team Udayavani, Oct 17, 2017, 12:05 PM IST
ಬೆಂಗಳೂರು: ವಿಜ್ಞಾನ ಮತ್ತು ತಂತ್ರಜ್ಞಾನದ ದಾರ್ಶನಿಕ ಸಮೂಹ ಕಾರ್ಯ ಚಟುವಟಿಕೆಗಳಿಗೆ 2016-17ನೇ ಸಾಲಿನ ಆಯವ್ಯಯದಲ್ಲಿ 17 ಕೋಟಿ ರೂ.ನೀಡಲಾಗಿದ್ದು, ರಾಜ್ಯಾದ್ಯಂತ 143 ಯೋಜನೆಗಳಿಗೆ ಧನಸಹಾಯ ನೀಡಲಾಗುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಯೋಜನಾ ಸಚಿವ ಎಂ.ಆರ್. ಸೀತಾರಾಂ ತಿಳಿಸಿದರು.
ದಾರ್ಶನಿಕ ಸಮೂಹದ ಚಟುವಟಿಕೆಗಳಿಗಾಗಿ ರಾಜ್ಯದ ವಿವಿಧ ಭಾಗಗಳಿಂದ 1,260 ಪ್ರಸ್ತಾವನೆಗಳು ಬಂದಿದ್ದವು. ಅವುಗಳನ್ನು ತಜ್ಞ ವಿಜ್ಞಾನಿಗಳು ಪರಿಶೀಲನೆ ನಡೆಸಿ, 143 ಯೋಜನೆಗಳನ್ನು ಅಂತಿಮಗೊಳಿಸಿದ್ದಾರೆ. ಅವುಗಳಿಗೆ ಏಳು ವಿಭಾಗಗಳಲ್ಲಿ ಧನಸಹಾಯ ನೀಡಲಾಗುತ್ತಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿವಿಧ ಯೋಜನೆಗಳಿಗೆ ಮೊದಲ ಹಂತದಲ್ಲಿ 10 ಕೋಟಿ ರೂ. ಹಾಗೂ ಎರಡನೇ ಹಂತದಲ್ಲಿ 6 ಕೋಟಿ, ಮೂರನೇ ಹಂತದಲ್ಲಿ 1 ಕೋಟಿ ಬಿಡುಗಡೆ ಆಗಲಿದೆ ಎಂದರು. ಈ ಪೈಕಿ ವಿಜ್ಞಾನ, ಎಂಜಿನಿಯರಿಂಗ್ ಮತ್ತು ವೈದ್ಯಕೀಯದ ಶ್ರೇಷ್ಠ ಕೇಂದ್ರಗಳ ಸ್ಥಾಪನೆಗೆ 1.80 ಕೋಟಿ, ವಿಜ್ಞಾನ ಶಿಕ್ಷಣದ ಸೃಜನಶೀಲ ಕೇಂದ್ರಗಳ ಸ್ಥಾಪನೆಗೆ 2.40 ಕೋಟಿ, ಯುವ ವಿಜ್ಞಾನಿಗಳಿಗೆ ಸಂಶೋಧನೆಗಾಗಿ ಮೂಲಧನ 2 ಕೋಟಿ, ಶ್ರೇಷ್ಠ ಸಂಶೋಧನಾ ಪ್ರಬಂಧಗಳಿಗೆ ಪ್ರಶಸ್ತಿಗೆ 5 ಲಕ್ಷ ರೂ.,
ಎಂಜಿನಿಯರಿಂಗ್ ಕಾಲೇಜುಗಳ ಬೋಧಕರಿಗೆ ತರಬೇತಿ ಕಾರ್ಯಾಗಾರಗಳಿಗೆ 30 ಲಕ್ಷ, ವಿಜ್ಞಾನ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರತಿಭಾವಂತ ಶಿಕ್ಷಕರ ಸಂಶೋಧನಾ ನಿಧಿಗೆ 1 ಕೋಟಿ, ಕರ್ನಾಟಕ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಮೂಲಸೌಕರ್ಯ ಅಭಿವೃದ್ಧಿ ನಿಧಿಗೆ 11 ಕೋಟಿ ರೂ. ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.