“ಭಾರತಾಂಬೆಯ ಮಕ್ಕಳ ಬೆವರು, ರಕ್ತದ ಫಲವೇ ತಾಜ್’
Team Udayavani, Oct 18, 2017, 6:00 AM IST
ಲಕ್ನೋ: “ತಾಜ್ಮಹಲ್ ಅನ್ನು ನಿರ್ಮಿಸಿದ್ದು ಭಾರತ ಮಾತೆಯ ಮಕ್ಕಳು. ಅದರ ನಿರ್ಮಾಣಕ್ಕಾಗಿ ಅವರೆ ಲ್ಲರೂ ಬೆವರು ಮತ್ತು ರಕ್ತ ಹರಿಸಿದ್ದಾರೆ.ಹಾಗಾಗಿ, ಯಾರು ನಿರ್ಮಿಸಿದರು ಎನ್ನುವುದು ಮುಖ್ಯವಲ್ಲ. ಐತಿಹಾಸಿಕ ಸ್ಮಾರಕವಾದ ಅದನ್ನು ರಕ್ಷಿಸುವುದು ಸರಕಾರದ ಹೊಣೆ.’
ಹೀಗೆಂದು ಹೇಳಿರುವುದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್. ಇದೇ ರಾಜ್ಯದ ಬಿಜೆಪಿ ಶಾಸಕ ಸಂಗೀತ್ ಸೋಮ್ ಅವರು ತಾಜ್ಮಹಲ್ ಭಾರತದ ಇತಿಹಾಸದ ಕಪ್ಪುಚುಕ್ಕೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಸಿಎಂ ಯೋಗಿ ಅವರಿಂದ ಸಂಪೂರ್ಣ ತದ್ವಿರುದ್ಧ ಹೇಳಿಕೆ ಹೊರಬಿದ್ದಿದೆ. ಅಷ್ಟೇ ಅಲ್ಲ, ಇದೇ 26ರಂದು ಪ್ರೇಮಸೌಧಕ್ಕೆ ಭೇಟಿ ನೀಡಿ, ಅಲ್ಲಿನ ವಿವಿಧ ಯೋಜನೆಗಳ ಪರಿಶೀಲನೆ ನಡೆಸುವುದಾಗಿಯೂ ತಿಳಿಸಿದ್ದಾರೆ.
ಇದೇ ವೇಳೆ, ಶಾಸಕ ಸೋಮ್ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಜಂ ಖಾನ್, “ತಾಜ್ಮಹಲ್ ದಾಸ್ಯದ ಸಂಕೇತವೆಂದಾದರೆ, ಅದೊಂದನ್ನಷ್ಟೇ ಅಲ್ಲ, ಅದರ ಜೊತೆಗೆ ರಾಷ್ಟ್ರಪತಿ ಭವನ, ಸಂಸತ್ ಭವನ ಹಾಗೂ ಕೆಂಪು ಕೋಟೆಯಂಥ ಸ್ಮಾರಕಗಳನ್ನೂ ಧ್ವಂಸಗೊಳಿಸಬೇಕಾ ಗುತ್ತದೆ. ಇವುಗಳು ಕೂಡ ದಾಸ್ಯದ ಸಂಕೇತವೇ ಅಲ್ಲವೇ’ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.