ಕರೋಪಾಡಿ ಜಲೀಲ್ ಕೊಲೆ ಪ್ರಕರಣ:8 ಆರೋಪಿಗಳಿಗೆ ಜಾಮೀನು
Team Udayavani, Oct 18, 2017, 11:35 AM IST
ಬೆಂಗಳೂರು: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾ.ಪಂ.ಉಪಾಧ್ಯಕ್ಷ ಅಬ್ದುಲ್ ಜಲೀಲ್ ಕೊಲೆ ಪ್ರಕರಣದ 7 ಮಂದಿ ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
11 ಮಂದಿ ಆರೋಪಿಗಳು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾ| ಕೆ.ಎಸ್. ಮುದ್ಗಲ್ ಅವರಿದ್ದ ಏಕಸದಸ್ಯ ಪೀಠ, ಎಂಟು ಮಂದಿ ಆರೋಪಿಗಳಿಗೆ ತಲಾ 1 ಲಕ್ಷ ರೂ ಬಾಂಡ್, ಒಬ್ಬರ ಶ್ಯೂರಿಟಿ, ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ಗಮನಕ್ಕೆ ತಾರದೆ ಹೊರರಾಜ್ಯಗಳಿಗೆ ತೆರಳುವಂತಿಲ್ಲ ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿತು.
ಆರೋಪಿಗಳಾದ ಪ್ರಜ್ವಲ್ ರೈ, ಪುಷ್ಪರಾಜ್, ಸಚಿನ್ , ರೋಶನ್, ಪುನೀತ್, ವಚನ, ಶ್ರೀ ಕೇಶವ, ಪ್ರಶಾಂತ್ ಅವರಿಗೆ ಜಾಮೀನು ಮಂಜೂರು ಮಾಡಿರುವ ನ್ಯಾಯಪೀಠ, ಪ್ರಕರಣದ ಒಂದನೇ ಆರೋಪಿ ರಾಜೇಶ್ ನಾಯಕ್, ನರಸಿಂಹ, ಸತೀಶ್ ರೈಗೆ ಜಾಮೀನು ನಿರಾಕರಿಸಿ ಆದೇಶಿಸಿದೆ. ಆರೋಪಿಗಳ ಪರ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.