ದೀಪ ಬೆಳಗಿ ದೀಪಾವಳಿ ಆಚರಿಸಿದ ಟ್ರಂಪ್, ಪುತ್ರಿ ಇವಾಂಕಾ
Team Udayavani, Oct 18, 2017, 11:38 AM IST
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದಲ್ಲಿ ಭಾರತೀಯ ಬೆಳಕಿನ ಹಬ್ಬವಾದ ದೀಪಾವಳಿಯನ್ನು ಸಂಭ್ರಮೋಲ್ಲಾಸದಿಂದ ಆಚರಿಸಿದ್ದಾರೆ.
ಟ್ರಂಪ್ ಹಾಗೂ ಅವರ ಪುತ್ರಿ ಇವಾಂಕಾ ಅವರು ದೀಪ ಬೆಳಗಿಸಿ, ಅಜ್ಞಾನದ ಕತ್ತಲನ್ನು ದೂರ ಮಾಡುವ ಬೆಳಕಿನ ಹಬ್ಬ ದೀಪಾವಳಿಗೆ ಸಡಗರದ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನೆರೆದ ಗಣ್ಯರನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಉದ್ಯಮ ಮತ್ತು ಶಿಕ್ಷಣವೇ ಮುಂತಾಗಿ ಹಲವಾರು ಕ್ಷೇತ್ರಗಳಲ್ಲಿ ಅಸಾಮಾನ್ಯ ಕೊಡುಗೆ ನೀಡುತ್ತಿರುವ ಮತ್ತು ಅಮೆರಿಕದ ಅಭಿವೃದ್ಧಿಯಲ್ಲಿ ತಮ್ಮ ಯೋಗದಾನ ಸಲ್ಲಿಸುತ್ತಿರುವ ಭಾರತೀಯ ಅಮೆರಿಕನ್ನರ ಅತ್ಯಮೂಲ್ಯ ಕೊಡುಗೆಯನ್ನು ಬಹುವಾಗಿ ಪ್ರಶಂಸಿಸಿದರು.
ಶ್ವೇತ ಭವನದಲ್ಲಿ ನಡೆದ ಈ ದೀಪಾವಳಿ ಹಬ್ಬದಾಚರಣೆಯ ಸಂದರ್ಭದಲ್ಲಿ ಟ್ರಂಪ್‌ಗೆ ಅವರ ಆಡಳಿತೆಯಲ್ಲಿರುವ ಹಿರಿಯ ಭಾರತೀಯ ಅಮೆರಿಕನ್ ಸದಸ್ಯೆ ಹಾಗೂ ವಿಶ್ವಸಂಸ್ಥೆಯಲ್ಲಿನ ಅಮೆರಿಕದ ರಾಯಭಾರಿಯಾಗಿರುವ ನಿಕ್ಕಿ ಹ್ಯಾಲಿ, ಅಮೆರಿಕದ ಮೇಡಿಕೇರ್ ಮತ್ತು ಮೆಡಿಕೇಡ್ ಸೇವಾ ಕೇಂದ್ರದ ಮುಖ್ಯಸ್ಥೆಯಾಗಿರುವ ಸೀಮಾ ವರ್ಮಾ ಮುಂತಾಗಿ ಹಲವರು ಜತೆ ನೀಡಿ, ದೀಪಾವಳಿ ಸಂಭ್ರಮವನ್ನು ಹಂಚಿಕೊಂಡರು.
ಯುಎಸ್ ಫೆಡರಲ್ ಕಮ್ಯುನಿಕೇಶನ್ಸ್ ಕಮಿಷನ್‌ನ ಅಧ್ಯಕ್ಷರಾಗಿರುವ ಅಜಿತ್ ಪೈ ಮತ್ತು ಮುಖ್ಯ ಉಪ ಮಾಧ್ಯಮ ಕಾರ್ಯದರ್ಶಿಯಾಗಿರುವ ರಾಜ್ ಶಾ ಅವರೂ ದೀಪಾವಳಿ ಹಬ್ಬದಾಚರಣೆಯಲ್ಲಿ ಭಾಗಿಗಳಾದರು.
ಟ್ರಂಪ್ ಅವರು ಈ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ತನ್ನ ಬಲವಾದ ಸಂಬಂಧಕ್ಕೆ ತಾನು ಅತ್ಯಂತ ಮಹತ್ವದ ಮೌಲ್ಯ ನೀಡುವುದಾಗಿ ಹೇಳಿದರು.
ಶ್ವೇತಭವನದಲ್ಲಿ ದೀಪಾವಳಿ ಹಬ್ಬದಾಚರಣೆಯನ್ನು ಆರಂಭಿಸಿದವರು ಅಧ್ಯಕ್ಷ ಜಾರ್ಜ್ ಬುಶ್. ಆದರೆ ಅವರು ವೈಯಕ್ತಿಕವಾಗಿ ಎಂದೂ ಶ್ವೇತಭವನದ ದೀಪಾವಳಿ ಆಚರಣೆಯಲ್ಲಿ ಪಾಲ್ಗೊಂಡಿರಲಿಲ್ಲ.
ಬರಾಕ್ ಒಬಾಮಾ ಅವರು ತಮ್ಮ ಮೊದಲ ವರ್ಷದ ಅಧ್ಯಕ್ಷೀಯ ಸಂದರ್ಭದಲ್ಲಿ ಶ್ವೇತಭವನದ ಪೂರ್ವ ಕೊಠಡಿಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.