ಹರಿಯಾಣ ಚುನಾವಣೆ: 68 ಅಭ್ಯರ್ಥಿಗಳ ಬಿಜೆಪಿ ಪಟ್ಟಿ ಬಿಡುಗಡೆ
Team Udayavani, Oct 19, 2017, 11:10 AM IST
ಹೊಸದಿಲ್ಲಿ : 2017ರ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ 68 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ಮುಂದಿನ ತಿಂಗಳು ನವೆಂಬರ್ 9ರಂದು ನಡೆಯಲಿದೆ. ಆದರೆ ಮತ ಎಣಿಕೆ ಕಾರ್ಯ ಸರಿಯಾಗಿ ಒಂದು ತಿಂಗಳ ಬಳಿಕ ಅಂದರೆ ಡಿಸೆಂಬರ್ 9ರಂದು ನಡೆಯಲಿದೆ.
ಮಾಜಿ ಮುಖ್ಯಮಂತ್ರಿ ಪ್ರೇಮ್ ಕುಮಾರ್ ಧುಮಾಲ್ ಸುಜಾನ್‌ಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ತಮ್ಮ ಈಗಿನ ಹಮೀರ್‌ಪುರ ಸೀಟನ್ನು ಧುಮಾಲ್ ಅವರು ಶಾಸಕ ನರೇಂದ್ರ ಠಾಕೂರ್ ಅವರೊಂದಿಗೆ ವಿನಿಮಯಿಸಿಕೊಂಡಿದ್ದಾರೆ. ಠಾಕೂರ್ ಅವರೀಗ ಪಕ್ಷದ ಅಭ್ಯಥಿಯಾಗಿ ಕಣಕ್ಕಿಳಿಯಲಿದ್ದಾರೆ.
ರಾಜೀವ್ ಬಿಂದಾಲ್, ನರೀಂದರ್ ಬ್ರಾಗ್‌ತಾ ಸೇರಿದಂತೆ ಹಲವಾರು ಮಾಜಿ ಸಚಿವರು ಪಟ್ಟಿಯಲ್ಲಿದ್ದಾರೆ. ಮೂರು ದಿನಗಳ ಹಿಂದಷ್ಟೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಿರುವ ಮಾಜಿ ಸಚಿವ ಅನಿಲ್ ಶರ್ಮಾ ಅವರನ್ನು ಮಂಡಿ ಕ್ಷೇತ್ರದಿಂದ ಕಣಕ್ಕಿಳಿಸಲಾಗುವುದು.
ಕಳೆದ ಬಾರಿಯ ವಿಧಾನಸಭಾ ಚುನಾವಣೆಯನ್ನು ವೀರಭದ್ರ ಸಿಂಗ್ ನೇತೃತ್ವದ ಕಾಂಗ್ರೆಸ್ ಪಕ್ಷ ಜಯಿಸಿತ್ತು.
ಬಿಜೆಪಿ ಈ ಬಾರಿ ಇನ್ನೂ ಮುಖ್ಯಮಂತ್ರಿ ಹುದ್ದೆಯ ಅಭ್ಯರ್ಥಿಯನ್ನು ಪ್ರಕಟಿಸಿಲ್ಲ. ಚುನಾವಣಾ ಪ್ರಚಾರದಲ್ಲಿ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಅಧ್ಯಕ್ಷ ಅಮಿತ್ ಷಾ ಅವರ ವರ್ಚಸ್ಸನ್ನು ಬಳಸಿಕೊಳ್ಳಲಿದೆ.
ಬಿಜೆಪಿ ಈಗಾಗಲೇ ತನ್ನ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯನ್ನು ಆರಂಭಿಸಿದೆ. ಅ.23 ನಾಮಪತ್ರ ಸಲ್ಲಿಕೆಯ ಕೊನೇ ದಿನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.