ನಾರಿಯರಿಗೆ ಸಿಗುವುದೇ ಎರಡು ಉನ್ನತ ಹುದ್ದೆ ?

Team Udayavani, Oct 19, 2017, 1:01 PM IST

kp-p[olice-logo.jpg

ಬೆಂಗಳೂರು: ರಾಜ್ಯ ಸರ್ಕಾರದ ಎರಡು ಮಹತ್ವದ ಹುದ್ದೆಗಳಿಗೆ ಇಬ್ಬರು ಮಹಿಳೆಯರ ಹೆಸರುಗಳು ಮುಂಚೂಣಿಯಲ್ಲಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಹುದ್ದೆಗೆ ಏಕಕಾಲಕ್ಕೆ ಇಬ್ಬರೂ ಮಹಿಳೆಯರೇ ನೇಮಕ ಮಾಡುವ ಅವಕಾಶ ರಾಜ್ಯ ಸರ್ಕಾರಕ್ಕೆ ಒದಗಿ ಬಂದಿದೆ.

ಅ. 31 ರಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ರೂಪಕ್‌ ಕುಮಾರ್‌ ದತ್ತಾ ನಿವೃತ್ತಿ ಹೊಂದಲಿದ್ದು, ಅವರ ನಂತರ 1983 ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಜಿಪಿ ನೀಲಮಣಿ ರಾಜು ಸೇವಾ ಹಿರಿತನದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಅವರ ಸೇವಾ ಅವಧಿ ಇನ್ನೂ ಮೂರು ವರ್ಷ ಇದ್ದು, 2020 ಜನವರಿ 17 ರವರೆಗೂ ಸೇವಾವಧಿ ಇದೆ. ಅವರ ನಂತರ 1984 ರ ಬ್ಯಾಚ್‌ನ ಸಿಐಡಿ ಡಿಜಿ ಎಚ್‌.ಸಿ. ಕಿಶೋರ ಚಂದ್ರ ಇದ್ದು, ಅವರ ಸೇವಾವಧಿ ಎರಡೂ ವರೆ ವರ್ಷ ಇದ್ದು, ಎಸಿಬಿ ಮುಖ್ಯಸ್ಥ ಎಂ.ಎನ್‌. ರೆಡ್ಡಿ ಕೂಡ ಪೊಲೀಸ್‌ ಮುಖ್ಯಸ್ಥರ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿದ್ದಾರೆ. 

ಸಿಎಂ ಮೇಲೆ ಒತ್ತಡ: ಕಿಶೋರ ಚಂದ್ರ ಮೈಸೂರು ಮೂಲದ, ಒಕ್ಕಲಿಗ ಸಮುದಾಯದವರಾಗಿದ್ದಾರೆ. ಹೀಗಾಗಿ ಅವರನ್ನೇ ರಾಜ್ಯದ ಪೊಲೀಸ್‌ ಮುಖ್ಯಸ್ಥರ ಹುದ್ದೆಗೆ ನೇಮಕ ಮಾಡುವಂತೆ ಒಕ್ಕಲಿಗ ಸಮುದಾಯದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಎಸಿಬಿ ಮುಖ್ಯಸ್ಥ ಎಂ.ಎನ್‌. ರೆಡ್ಡಿ ಪರವಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಮುಖ್ಯಮಂತ್ರಿ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. 

ಆದರೆ, ಈ ಹಿಂದೆಯೇ ಪೊಲೀಸ್‌ ಮಹಾನಿರ್ದೇಶಕರ ಹುದ್ದೆ ನೀಡುವ ಕಾರಣಕ್ಕಾಗಿಯೇ ಕೇಂದ್ರ ಸೇವೆಯಿಂದ ರಾಜ್ಯ ಸೇವೆಗೆ ನೀಲಮಣಿ ರಾಜು ಅವರನ್ನು ವಾಪಸ್‌ ಕರೆಸಲಾಗಿದೆ ಎಂಬ ಮಾತುಗಳೂ ಇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸೇವಾ ಹಿರಿತನದ ಆಧಾರದಲ್ಲಿಯೇ ಪೊಲೀಸ್‌ ಮುಖ್ಯಸ್ಥರ ನೇಮಕ ಮಾಡುವ ಆಲೋಚನೆ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಆದ್ಯತೆ: ಇನ್ನು ರಾಜ್ಯ ಸರ್ಕಾರದ ಆಡಳಿತ ಮುಖ್ಯಸ್ಥರಾದ ಮುಖ್ಯ ಕಾರ್ಯದರ್ಶಿ ಸುಭಾಸ್‌ ಚಂದ್ರ ಕುಂಟಿಯಾ ನ. 11ಕ್ಕೆ ನಿವೃತ್ತಿಯಾಗಲಿದ್ದು, ಆ ಹುದ್ದೆಗೂ 1981 ರ ಐಎಎಸ್‌ ಬ್ಯಾಚ್‌ನ ರತ್ನ ಪ್ರಭಾ ಅವರ ಹೆಸರು ಮುಂಚೂಣಿಯಲ್ಲಿದೆ. ಆರು ತಿಂಗಳು ಮಾತ್ರ ಅವರ ಸೇವಾವಧಿ ಉಳಿದಿದ್ದು, ಮಾ. 13 ಕ್ಕೆ ನಿವೃತ್ತಿ ಹೊಂದಲಿದ್ದಾರೆ.

ಅವರ ನಂತರದ ಸ್ಥಾನದಲ್ಲಿ 1982 ನೇ ಬ್ಯಾಚ್‌ನ ಸದ್ಯ ಕೇಂದ್ರ ಸರ್ಕಾರದ ಸೇವೆಯಲ್ಲಿರುವ ಎಸ್‌.ಕೆ. ಪಟ್ಟನಾಯಕ್‌ ಅವರ ಹೆಸರೂ ಕೂಡ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಕೇಳಿ ಬರುತ್ತಿದ್ದು, ಆದರೆ, ದಲಿತ ಸಮುದಾಯಕ್ಕೆ ಸೇರಿರುವ ಮತ್ತು ಮಹಿಳೆಯಾಗಿರುವ ಕಾರಣಕ್ಕೆ ರತ್ನಪ್ರಭಾ ಅವರನ್ನೆ ಪರಿಗಣಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಹೀಗಾಗಿ ಎರಡೂ ಅತ್ಯುನ್ನತ ಹುದ್ದೆಗಳಿಗೆ ಮಹಿಳೆಯರೇ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.

ಟಾಪ್ ನ್ಯೂಸ್

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.