ಲಾಲ್‌ಬಾಗ್ ಬಳಿ ಭೂಕುಸಿತ
Team Udayavani, Oct 19, 2017, 1:01 PM IST
ಬೆಂಗಳೂರು: ನಗರದ ಲಾಲ್‌ಬಾಗ್ ಮುಖ್ಯರಸ್ತೆಯ ಊರ್ವಶಿ ಚಿತ್ರಮಂದಿರದ ಎದುರು ಮಂಗಳವಾರ ರಾತ್ರಿ ದಿಢೀರ್ ಸಣ್ಣ ಪ್ರಮಾಣದ ಭೂಕುಸಿತ ಉಂಟಾಗಿ ಆತಂಕ ಸೃಷ್ಟಿಸಿತು. ಇದರಿಂದ ಆ ಮಾರ್ಗದಲ್ಲಿ ವಾಹನ ಸಂಚಾರ ಮಂದಗತಿಯಲ್ಲಿತ್ತು.
ಜಲಮಂಡಳಿಯ ಮುಖ್ಯ ಪೈಪ್‌ಲೈನ್ ತುಂಡಾಗಿದ್ದರಿಂದ ಸುಮಾರು 7ರಿಂದ 8 ಅಡಿ ಆಳ ಭೂಕುಸಿತ ಉಂಟಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. ವಾಹನ ಸಂಚಾರ ಹೆಚ್ಚಾಗಿರುವ ಅವಧಿಯಲ್ಲೇ ಈ ಅವಘಡ ನಡೆದಿರುವುದರಿಂದ ಸಂಚಾರದಟ್ಟಣೆ ಉಂಟಾಯಿತು.
ಸವಾರರಲ್ಲಿ ಆತಂಕ ವ್ಯಕ್ತವಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಸಂಚಾರ ಪೊಲೀಸ್ ಅಧಿಕಾರಿಗಳು, ಸುತ್ತ ಬ್ಯಾರಿಕೇಡ್‌ಗಳನ್ನು ಹಾಕಿ, ಆ ರಸ್ತೆಯ ಒಂದು ಬದಿಯಲ್ಲಿ ಸಂಚಾರ ಸ್ಥಗಿತಗೊಳಿಸಿದರು. ನಂತರ ಜಲಮಂಡಳಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.