ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ದಿನೇಶ್ ಹೊಳ್ಳ
Team Udayavani, Oct 20, 2017, 10:52 AM IST
ಕೊಡಿಯಾಲ್‌ಬೈಲ್: ರಾಗತರಂಗ ಮಂಗಳೂರು ಸಂಸ್ಥೆಯ ವಾರ್ಷಿಕೋತ್ಸವವು ಎಸ್‌ಡಿಎಂ ಕಾನೂನು ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ಜರಗಿತು. ಮುಖ್ಯ ಅತಿಥಿ, ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಚಿತ್ರ ಕಲಾವಿದ ದಿನೇಶ್ ಹೊಳ್ಳ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ಬೆಟ್ಟ, ಗುಡ್ಡ, ನದಿ, ವೃಕ್ಷಗಳ ರಕ್ಷಣೆ ಮಹತ್ವದ್ದಾಗಿದೆ. ಅದನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದರು.
ಸಂರಕ್ಷಣೆಗೆ ಅರಿವು ಮುಖ್ಯ
ಅಧ್ಯಕ್ಷತೆ ವಹಿಸಿದ್ದ ಕೆ. ಸದಾನಂದ ಉಪಾಧ್ಯಾಯ ಮಾತನಾಡಿ, ಪರಿಸರ ಸಂರಕ್ಷಣೆ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಬೇಕು. ಸಮಾಜಕ್ಕೆ ನಾವು ಉಪಕೃತರಾದ ಕೃತಾರ್ಥತೆಗೆ ಏನನ್ನಾದರೂ ನೀಡಬೇಕು.ಸಂಸ್ಕಾರಯುತ ಸಹಜೀವನದ ಬಗ್ಗೆ ಪೋಷಕರು ಮಕ್ಕಳಲ್ಲಿ ಎಳವೆಯಿಂದಲೇ ಜ್ಞಾನ ಮೂಡಿಸಬೇಕು ಎಂದು ಹೇಳಿದರು.
ವೃಕ್ಷೋಪಾಸಕ ಮಾಧವ ಉಳ್ಳಾಲ ಅವರನ್ನು ಅಭಿನಂದಿಸಲಾಯಿತು.ನಿಕಟಪೂರ್ವ ಅಧ್ಯಕ್ಷ ಡಾ| ದೇವರಾಜ್ ಸ್ವಾಗತಿಸಿದರು. ಕಾರ್ಯದರ್ಶಿ ಜಿ. ಕೆ. ಉಡುಪ ವಂದಿಸಿದರು. ಹೇಮಲತಾ, ಪೂರ್ಣಿಮಾ ರಾವ್, ಆಶಾ ಹೆಗ್ಡೆ ನಿರೂಪಿಸಿದರು. ಖಜಾಂಚಿ ವಾಮನ್ ಮೈಂದನ್ ಸಮನ್ವಯಕರಾಗಿದ್ದರು. ಜಯಶ್ರೀ ಅರವಿಂದ್, ಸೌಮ್ಯಾ ರಾವ್, ಜನಾರ್ದನ ಹಂದೆ ಸಹಕರಿಸಿದರು. ಅನಂತರ ರಾಗತರಂಗದ ಸದಸ್ಯರು ಹಾಗೂ ಮಕ್ಕಳಿಂದ ಮನೋರಂಜನ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.