ನಾದಮಯ


Team Udayavani, Oct 20, 2017, 11:14 AM IST

naadamaya.jpg

ಬರ್ತಾ ಇದ್ದಾರೆ, ಹೊರಟೇ ಬಿಟ್ರಾ, ಬಂದೇ ಬಿಟ್ರಾ … ಹೀಗೆ ಚಿತ್ರತಂಡದವರು ಆಗಾಗ್ಗೆ ಹೇಳುತ್ತಲೇ ಇದ್ದರು. ಆದರೆ, ಸುದೀಪ್‌ ಬರಲಿಲ್ಲ. ಚಿತ್ರತಂಡದವರು ಕಾಯುವುದು, ಕಾಯಿಸುವುದು ಬಿಡಲಿಲ್ಲ. ಕೊನೆಗೆ 12ರ ನಂತರ ಕೊನೆಗೂ ಸುದೀಪ್‌ ಕಾರಿನಿಂದ ಇಳಿದರು. ಅಲ್ಲಿಯವರೆಗೂ ಅರ್ಧ ತುಂಬಿದ್ದ ಸಭಾಂಗಣ ತುಂಬಿ ಹೋಯಿತು. ಮಾತು, ಹಾಡು, ಚಪ್ಪಾಳೆ, ಫೋಟೋ … ಎಲ್ಲವೂ ಸಾಂಗವಾಗಿ ಮುಗಿಯಿತು.

ಇದು “ಶಂಖನಾದ’ ಚಿತ್ರದ ಹಾಡುಗಳ ಸಮಾರಂಭದ ವರದಿ. ಸಣ್ಣ ಕವನಗಳನ್ನು ಬರೆದು, ಇದುವರೆಗೂ ಕೆಲವು ಚಿತ್ರಗಳ ಸಹ ನಿರ್ದೇಶನ ಮಾಡಿದ ಅನುಭವ ಇರುವ ವಿಶ್ವನಾಥ ಬಸಪ್ಪ ಕಾಳಗಿ ನಿರ್ದೇಶಿಸಿರುವ “ಶಂಖನಾದ’ ಚಿತ್ರದ ಹಾಡುಗಳ ಬಿಡುಗಡೆ ಇತ್ತೀಚೆಗೆ ನಡೆಯಿತು. ವಿಶ್ವನಾಥ ಅವರೇ ಈ ಚಿತ್ರಕ್ಕೆ ಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ವಿಜಯ ರೆಡ್ಡಿ ಚೌಧರಿ ಎನ್ನುವವರು ಈ ಚಿತ್ರವನ್ನು ನಿರ್ಮಿಸಿದ್ದು ಶಾಂತರೆಡ್ಡಿ ನಾಗಣ್ಣಗೌಡ ಪಾಟೀಲ್‌ ಈ ಚಿತ್ರದಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ.

ಇನ್ನು ನಾಯಕಿಯರಾಗಿ ನಯನ ಮತ್ತು ರಶ್ಮಿತಾ ನಟಿಸಿದ್ದಾರೆ. ಚಿತ್ರಕ್ಕೆ ವಿನು ಮನಸು ಸಂಯೋಜಿಸಿರುವ ಹಾಡುಗಳನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಹಾರೈಸಿ ಮಾತನಾಡಿದ ಸುದೀಪ್‌, “ಒಂದು ಚಿತ್ರ ನೂರು ದಿನ ಪ್ರದರ್ಶನ ಕಂಡರೆ ಅದನ್ನು ಹಿಟ್‌ ಅಂತ ಹೇಳಲು ಬರುವುದಿಲ್ಲ. ಜನ ಮೆಚ್ಚಿದರೆ ಮಾತ್ರ ಅದೊಂದು ಯಶಸ್ಸು ಎಂದು ಕರೆಯಬಹುದು. ಈ ಚಿತ್ರತಂಡದಲ್ಲಿ ಮುಗ್ಧತೆ ಕಾಣುತ್ತಿದೆ. ಈ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಹೇಳಿದರು.

ಹಲವು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದೆ “ಶಂಖನಾದ’ ಚಿತ್ರದ ಅರವಿಂದ್‌ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. “ಆಗ ನನಗೆ “ಶಂಖನಾದ’ ಚಿತ್ರದಲ್ಲಿ ದಾಸಯ್ಯನ ಪಾತ್ರ ನೀಡಿದಾಗ ಬೇಸರವಾಗಿತ್ತು. ಅಲ್ಲದೆ ಬೈಗುಳದ ಸಂಭಾಷಣೆಗಳನ್ನು ಹೇಳುವಾಗ ಇಂತಹ ಚಿತ್ರವನ್ನು ಜನ ನೋಡುತ್ತಾರಾ ಎಂಬ ಗೊಂದಲವೂ ಇತ್ತು.

ಮುಂದೆ ಚಿತ್ರ ಯಶಸ್ವಿಯಾಗಿದ್ದಷ್ಟೇ ಅಲ್ಲ, ಪ್ರಶಸ್ತಿ ಬಂದು “ಶಂಖನಾದ’ ಅರವಿಂದ್‌ ಹೆಸರಿನಲ್ಲಿ ಗುರುತಿಸಿಕೊಂಡಿದ್ದೇನೆ’ ಎಂದು ಹೇಳುತ್ತಾರೆ. ಅಂದು ಶಾಸಕ ರಾಜು ಗೌಡ ಸಹ ಬಂದಿದ್ದರು. “ನಾವು ಉತ್ತರ ಕರ್ನಾಟಕದವರು ಸಿನಿಮಾ ಮಾಡುವುದು ಕಡಿಮೆ, ನೋಡುವುದು ಜಾಸ್ತಿ. ಈ ತಂಡವು ನಮ್ಮ ಭಾಗದಿಂದ ಬಂದವರಾಗಿದ್ದಾರೆ. ಈ ಚಿತ್ರತಂಡದವರಿಗೆ ಒಳ್ಳೆಯದಾಗಲೀ’ ಎಂದು ಹಾರೈಸಿದರು.

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.