ಪೈ ಇಂಟರ್‌ನ್ಯಾಷನಲ್ ಮಳಿಗೆ ಶುರು
Team Udayavani, Oct 20, 2017, 12:02 PM IST
ಬೆಂಗಳೂರು: ಎಲೆಕ್ಟ್ರಾನಿಕ್, ಗೃಹ ಬಳಕೆ ಹಾಗೂ ಫರ್ನಿಚರ್ ವಸ್ತುಗಳ ಅತಿ ದೊಡ್ಡ “ಬಹು ಬ್ರಾಂಡ್’ ಮಾರಾಟ ಮಳಿಗೆಯಾದ ಗ್ರಾಹಕರ ನಂಬಿಕಸ್ಥ “ಪೈ ಇಂಟರ್‌ನ್ಯಾಷನಲ್; ತನ್ನ ಸೇವೆ ಮತ್ತು ಮಾರುಕಟ್ಟೆಯನ್ನು ವಿಸ್ತರಿಸಿಕೊಳ್ಳುತ್ತಿದ್ದು, ಇದೀಗ ಬೆಂಗಳೂರಿನ ಹೊಸೂರು ಮುಖ್ಯ ರಸ್ತೆಯಲ್ಲಿ ನೂತನ ಮಳಿಗೆ ಆರಂಭಗೊಂಡಿದೆ.
ಹೊಸೂರು ಮುಖ್ಯ ರಸ್ತೆಯ ಬೊಮ್ಮನಹಳ್ಳಿಯಲ್ಲಿರುವ ಗಾರೆಬಾವಿ ಪಾಳ್ಯದಲ್ಲಿ 21 ಸಾವಿರ ಚದರಡಿ ವಿಸ್ತೀರ್ಣದ ಬೃಹತ್ ಮಳಿಗೆಯಲ್ಲಿ ಗ್ರಾಹಕರ ಸೇವೆಗೆ ತೆರೆದುಕೊಂಡಿರುವ ಪೈ ಇಂಟರ್‌ನ್ಯಾಷನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಹೆಸರಿನ ಈ ಮಾರಾಟ ಮಳಿಗೆಯಲ್ಲಿ ಪೈ ಎಲೆಕ್ಟ್ರಾನಿಕ್ಸ್ ಮತ್ತು ಪೈ ಫರ್ನಿಚರ್ ವಸ್ತುಗಳು ಒಂದೇ ಸೂರಿನಡಿ ಲಭ್ಯವಾಗಲಿವೆ.
ನೂತನ ಮಳಿಗೆ ಉದ್ಘಾಟಿಸಿದ ಪೈ ಇಂಟರ್‌ನ್ಯಾಷನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ರಾಜಕುಮಾರ್ ಪೈ, ಗ್ರಾಹಕರಿಗೆ ಜಾಗತಿಕ ಗುಣಮಟ್ಟದ ಖರೀದಿ ಅನುಭವ ನೀಡುವುದು ನಮ್ಮ ಸಂಸ್ಥೆಯ ವಾಗ್ಧಾನವಾಗಿದ್ದು, ಅದನ್ನು ಎಲ್ಲ ಹಂತ ಮತ್ತು ಎಲ್ಲ ಸಂದರ್ಭಗಳಲ್ಲೂ ಪಾಲಿಸಿಕೊಂಡು ಬರಲಾಗಿದೆ. ನಮ್ಮ ವಾಗ್ಧಾನ ಮತ್ತು ಗ್ರಾಹಕರ ನಂಬಿಕೆ ಇಡೀ ದಕ್ಷಿಣ ಭಾರತದಲ್ಲಿ ನಮ್ಮ ಯಶಸ್ಸಿಗೆ ಕಾರಣವಾಗಿದೆ. ಹೊಸೂರು ರಸ್ತೆಯಲ್ಲಿ ಹೊಸ ಮಳಿಗೆ ಆರಂಭಿಸುವ ಮೂಲಕ ನಾವು ಗ್ರಾಹಕ ವಲಯವನ್ನು ವಿಸ್ತರಿಸಿಕೊಳ್ಳುತ್ತಿದ್ದೇವೆ ಎಂದರು.
ಆಕರ್ಷಕ ಆಫರ್; ಸ್ಪೇಷಲ್ ಬೋನಸ್: ಹೊಸೂರು ಮುಖ್ಯ ರಸ್ತೆಯಲ್ಲಿ ಆರಂಭವಾಗಿರುವ ಮಳಿಗೆಯಲ್ಲಿ ಅತ್ಯಾಕರ್ಷಕ ಆಫರ್‌ಗಳನ್ನು ಇಡಲಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆ ಮೆಗಾ ಫೆಸ್ಟಿವಲ್ ಸೇಲ್ ಹೆಸರಲ್ಲಿ 2 ಸಾವಿರ ರೂ. ಅಥವಾ ಅದಕ್ಕಿಂತ ಹೆಚ್ಚಿನ ಖರೀದಿ ಮಾಡಿದರೆ ಪೈ ವಿಶೇಷ ಲಕ್ಕಿ ಕೂಪನ್ ಮೂಲಕ ಗ್ರಾಹಕರು 30 ಕಾರುಗಳನ್ನು ಗೆಲ್ಲಬಹುದು.
ಅದೇ ಸ್ಪೆಷಲ್ ಬೋನಸ್ ರೂಪದಲ್ಲಿ ಗ್ರಾಹಕರು ಒಟ್ಟು 10 ಕೋಟಿ ರೂ. ಮೌಲ್ಯದ ಬಹುಮಾನಗಳು, ಜೊತೆಗೆ 82,270 ಇನ್ನುಳಿದ ಬಹುಮಾನಗಳನ್ನು ಪಡೆದುಕೊಳ್ಳಬಹುದು. ಅಲ್ಲದೇ 5 ಸಾವಿರ ಹಾಗೂ ಅದಕ್ಕಿಂತ ಮೇಲ್ಪಟ್ಟ ಮೊತ್ತದ ಮೊಬೈಲ್ ಖರೀದಿ ಮಾಡಿದ ಗ್ರಾಹಕರಿಗೆ ಸಾðಚ್ ಕಾರ್ಡ್ ಸಿಗಲಿದ್ದು, ಇದರಲ್ಲಿ ಗೆದ್ದರೆ ಶೇ.100ರಷ್ಟು ಹಣ ವಾಪಸ್ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.