ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ದಿಢೀರ್ ರಾಜೀನಾಮೆ!
Team Udayavani, Oct 20, 2017, 3:16 PM IST
ನವದೆಹಲಿ: ಅಚ್ಚರಿಯ ಬೆಳವಣಿಗೆ ಎಂಬಂತೆ ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಏತನ್ಮಧ್ಯೆ ಈ ಬೆಳವಣಿಗೆಯನ್ನು ಅಡಿಷನಲ್ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಖಚಿತಪಡಿಸಿದ್ದಾರೆ.
ವೈಯಕ್ತಿ ಕಾರಣಗಳಿಂದ ಸಾಲಿಸಿಟರ್ ಜನರಲ್ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿ ಹೇಳಿದೆ. ಅಟಾರ್ನಿ ಜನರಲ್ ಸ್ಥಾನಕ್ಕೆ ಮುಕುಲ್ ರೋಹ್ಟಗಿ ಅವರು ರಾಜೀನಾಮೆ ನೀಡಿದ ಒಂದು ತಿಂಗಳ ಬಳಿಕ ರಂಜಿತ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಂಜಿತ್ ಕುಮಾರ್ ಅವರನ್ನು 2014ರ ಜೂನ್ ತಿಂಗಳಿನಲ್ಲಿ ಸಾಲಿಸಿಟರ್ ಜನರಲ್ ಆಗಿ ಕೇಂದ್ರ ಸರ್ಕಾರ ನೇಮಕ ಮಾಡಿತ್ತು. ಕುಮಾರ್ ಸಾಲಿಸಿಟರ್ ಜನರಲ್ ಆಗಿ ಅಧಿಕಾರ ಸ್ವೀಕರಿಸುವ ಮುನ್ನ ಗುಜರಾತ್ ಸರ್ಕಾರದ ಪರ ವಕೀಲರಾಗಿ ಹಾಗೂ ಸುಪ್ರೀಂಕೋರ್ಟ್ ನ ಹಲವು ಪ್ರಕರಣಗಳಲ್ಲಿ ಅಮಿಕಸ್ ಕ್ಯೂರಿ ಆಗಿ ಕಾರ್ಯನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.