ಟಿಪ್ಪು ಜಯಂತಿ ರಾಜಕೀಯ ಲಾಭ ಪಡೆಯಲು ಬಿಜೆಪಿ ಯತ್ನ
Team Udayavani, Oct 20, 2017, 3:27 PM IST
ಬೆಂಗಳೂರು: ರಾಜ್ಯ ಸರಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆಗೆ ಮೊದಲಿ ನಿಂದಲೂ ವಿರೋಧ ವ್ಯಕ್ತಪಡಿಸುತ್ತಾ ಬಂದಿರುವ ವಿಪಕ್ಷ ಬಿಜೆಪಿ, ಈಗ ಈ ವಿವಾದವನ್ನು ಮುಂಬ ರುವ ವಿಧಾನಸಭೆ ಚುನಾವಣೆಗೆ ರಾಜಕೀಯ ಲಾಭ ಪಡೆದುಕೊಳ್ಳಲು ಪ್ರಯತ್ನ ನಡೆಸುತ್ತಿದೆ.
ಸರಕಾರದಿಂದ ಟಿಪ್ಪು ಜಯಂತಿ ಆಚರಣೆಗೆ ರಾಜ್ಯದ ಕೆಲವು ಭಾಗಗಳಲ್ಲಿ ವ್ಯಕ್ತವಾಗುತ್ತಿರುವ ಆಕ್ಷೇಪವನ್ನೇ ರಾಜಕೀಯ ಲಾಭವಾಗಿ ಪರಿವರ್ತಿಸಿಕೊಳ್ಳಲು ಮುಂದಾಗಿರುವ ಬಿಜೆಪಿ, ಟಿಪ್ಪು ಜಯಂತಿ ಆಚರಣೆ ಕಾಂಗ್ರೆಸ್‌ನ ಮುಸ್ಲಿಂ ವೋಟ್‌ಬ್ಯಾಂಕ್ ರಾಜಕಾರಣ ಎಂದು ಬಿಂಬಿಸಲು ಮುಂದಾಗಿದೆ.
ಈ ನಿಟ್ಟಿನಲ್ಲಿ ಅ. 23ರಂದು ಬಿಜೆಪಿ ಸಹಿತ ಸಂಘ ಪರಿವಾರದ ಮುಖಂಡರ ಸಭೆಯನ್ನು ಬೆಂಗಳೂರಿ ನಲ್ಲಿ ಕರೆಯಲಾಗಿದ್ದು, ಇದಕ್ಕೆ ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸುತ್ತಿರುವ ವಿವಿಧ ಸಂಘಟನೆಗಳನ್ನೂ ಆಹ್ವಾನಿಸಲು ನಿರ್ಧರಿಸಿದೆ. ಈ ಸಭೆಯಲ್ಲಿ ಟಿಪ್ಪು ಜಯಂತಿ ಆಚರಿಸುತ್ತಿರುವ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟದ ರೂಪುರೇಷೆಗಳನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
2013ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ 2014ರಿಂದ ಸರಕಾರದ ವತಿಯಿಂದ ನ.10ರಂದು ಟಿಪ್ಪು ಜಯಂತಿ ಆಚರಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಇದಕ್ಕೆ ಆಗಲೇ ಆಕ್ಷೇಪ ಎದುರಾಗಿತ್ತು. ಆದರೆ, 2015ರಲ್ಲಿ ಈ ಆಕ್ಷೇಪ ಹೋರಾಟದ ಸ್ವರೂಪಕ್ಕೆ ತಿರುಗಿದ್ದು, ಮಡಿಕೇರಿಯಲ್ಲಿ ಹಿಂಸಾಚಾರ ನಡೆದು ಕುಟ್ಟಪ್ಪ ಎಂಬವರು ಬಲಿಯಾಗಿದ್ದರು. 2016ರಲ್ಲೂ ಸಾಕಷ್ಟು ವಿರೋಧ ವ್ಯಕ್ತವಾಗಿತ್ತಾದರೂ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ.
ಈಗ ಮುಂದಿನ ನ.10ರಂದು ಮತ್ತೆ ಟಿಪ್ಪು ಜಯಂತಿಯನ್ನು ಆಚರಿಸಲು ಸಿದ್ಧತೆ ಆರಂಭವಾಗುತ್ತಿದೆ. ಕೊಡಗು ಜಿಲ್ಲಾ ಪಂಚಾಯತ್‌ನಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡದೇ ಇರಲು ನಿರ್ಧಾರ ಕೈಗೊಳ್ಳುವ ಮೂಲಕ ಅಲ್ಲಿನ ಬಿಜೆಪಿ ಆಡಳಿತ ಸರಕಾರಕ್ಕೆ ಸಡ್ಡು ಹೊಡೆದಿದೆ. ಆದರೆ, ಟಿಪ್ಪು ಜಯಂತಿ ಆಚರಿಸದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸರಕಾರ ಎಚ್ಚರಿಕೆ ನೀಡಿದೆ.
ಸರಕಾರದ ಈ ಎಚ್ಚರಿಕೆಯನ್ನೇ ಮುಂದಿಟ್ಟು ಕೊಂಡು ಟಿಪ್ಪು ಜಯಂತಿ ವಿರೋಧಿಗಳೊಂದಿಗೆ ಸೇರಿ ಬಿಜೆಪಿ ವಿವಿಧ ರೀತಿಯ ಹೋರಾಟಗಳನ್ನು ಆಯೋಜಿಸಲು ಚಿಂತನೆ ನಡೆಸಿದೆ. ಟಿಪ್ಪು ಜಯಂತಿಗೆ ವಿರೋಧ ಇರುವ ಭಾಗಗಳಲ್ಲಿ ಟಿಪ್ಪು ಸುಲ್ತಾನ್ ಆಳ್ವಿಕೆಯಲ್ಲಿ ವಿವಿಧ ಸಮುದಾಯದ ಮೇಲಾದ ದಾಳಿ, ಜಯಂತಿ ಆಚರಣೆಯ ಹಿಂದೆ ಇರುವ ಕಾಂಗ್ರೆಸ್‌ನ ವೋಟ್‌ಬ್ಯಾಂಕ್ ರಾಜಕಾರಣ ಮುಂತಾದ ವಿಚಾರಗಳ ಬಗ್ಗೆ ವಿಚಾರ ಸಂಕಿರಣ ಆಯೋಜಿಸಲು ಯೋಚಿಸಿದೆ. ಈ ಮೂಲಕ ಆ ಭಾಗದಲ್ಲೇ ಮುಸ್ಲಿಂಮೇತರ ಮತಗಳನ್ನು ಪಕ್ಷದ ಪರ ಸೆಳೆದುಕೊಳ್ಳಲು ಕಸರತ್ತು ಮಾಡಲಿದೆ ಎಂದು ತಿಳಿದುಬಂದಿದೆ.
ಪ್ರಸ್ತುತ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ ಸಹಿತ ಟಿಪ್ಪು ಸುಲ್ತಾನ್ ಆಡಳಿತ ವ್ಯಾಪ್ತಿಗೆ ಬರುತ್ತಿದ್ದ ಕೆಲವು ಪ್ರದೇಶಗಳಲ್ಲಿ ಸರಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಈ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸುತ್ತಿರುವುದಕ್ಕೆ ಆಕ್ಷೇಪಿಸುತ್ತಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ಅ. 23ರಂದು ಕರೆಯಲಾಗಿರುವ ಸಭೆಯಲ್ಲಿ ಚರ್ಚಿಸಿ ಯಾವ ರೀತಿ ವಿರೋಧ ವ್ಯಕ್ತಪಡಿಸಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.