ಪೇಜಾವರ ಶ್ರೀ ಮಾರ್ಗದರ್ಶನ ಅವಶ್ಯವಿಲ್ಲ: ಸಚಿವ ವಿನಯ
Team Udayavani, Oct 20, 2017, 3:33 PM IST
ಧಾರವಾಡ: “ಲಿಂಗಾಯತ ಸಮಾಜದ ಬಗ್ಗೆ ನಮಗೆ ಅರಿವಿದೆ. ಪೇಜಾವರ ಶ್ರೀಗಳು ಈ ಸಂಬಂಧ ಪದೇ ಪದೆ ಹೇಳಿಕೆ ನೀಡುವ ಆವಶ್ಯಕತೆ ಇಲ್ಲ’ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ವಿನಯ ಕುಲಕರ್ಣಿ ಹೇಳಿದರು.
ನ.5ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಲಿಂಗಾಯತ ರ್ಯಾಲಿಯ ಪೋಸ್ಟರನ್ನು ನಗರದ ಮುರುಘಾ ಮಠದಲ್ಲಿ ಬಿಡುಗಡೆಗೊಳಿಸಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, “ಪೇಜಾವರ ಶ್ರೀಗಳು ಲಿಂಗಾಯತ ಧರ್ಮದ ಬಗ್ಗೆ ಅನಾ ವಶ್ಯಕ ಹೇಳಿಕೆಯಿಂದ ಗೊಂದಲ ಉಂಟು ಮಾಡುತ್ತಿರುವುದು ಸರಿಯಲ್ಲ. ಶ್ರೀಗಳ ಮಾರ್ಗದರ್ಶನದ ಅವಶ್ಯಕತೆ ನಮಗಿಲ್ಲ. ವೀರಶೈವ ಎಂಬುದು ಲಿಂಗಾಯತದ ಒಳ ಪಂಗಡ ಹೊರತು ಪ್ರತ್ಯೇಕ ಧರ್ಮ ವಲ್ಲ. ವೀರಶೈವ ಹಾಗೂ ಲಿಂಗಾಯತ ಒಂದೇ ಆಗಲು ಸಾಧ್ಯವೇ ಇಲ್ಲ. ವೀರಶೈವ ಪದದ ಪ್ರತಿಪಾದಕರು ತಮ್ಮ ಶಾಲೆ ದಾಖಲೆಗಳಲ್ಲಿ ವೀರಶೈವ ಎಂದು ಇದ್ದರೆ ತಂದು ತೋರಿಸಲಿ’ ಎಂದು ಸವಾಲು ಹಾಕಿದರು.
ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಸ್ವಾಮೀಜಿ ಮಾತನಾಡಿ, “ಪೇಜಾವರ ಶ್ರೀಗಳ ಬಗ್ಗೆ ಗೌರವವಿದೆ. ಆದರೆ, ಒಂದು ಮತ, ಸಿದ್ಧಾಂತದ ಗುರುಗಳಾಗಿರುವ ಅವರು ಇಡೀ ಸಮಾಜದ ಗುರುಗಳಲ್ಲ. ಲಿಂಗಾಯತ ಪ್ರತ್ಯೇಕ ಧರ್ಮವಾಗಲು ಅದಕ್ಕೆ ತನ್ನದೆ ಆದ ಸಿದ್ಧಾಂತಗಳಿವೆ. ಹೀಗಾಗಿ ಪೇಜಾವರ ಶ್ರೀಗಳ ಮಾರ್ಗದರ್ಶನದ ಆವಶ್ಯಕತೆ ಇಲ್ಲ. ಸತ್ಯದ ಪ್ರತಿಪಾದಕರಾಗಿರುವ ಪೇಜಾವರ ಶ್ರೀಗಳು ಲಿಂಗಾಯತ ಧರ್ಮದ ಸತ್ಯತೆ ಬಗ್ಗೆ ತಿಳಿಸುವ ಕೆಲಸ ಮಾಡಬೇಕೇ ಹೊರತು ಗೊಂದಲ ಸೃಷ್ಟಿಸಬಾರದು. ಲಿಂಗಾ ಯತ ಧರ್ಮದ ಹೋರಾಟಕ್ಕೆ ಬೆಂಬಲ ನೀಡಿ, ಅದಕ್ಕೆ ಒತ್ತಾಯ ವ್ಯಕ್ತಪಡಿಸಬೇಕು. ಇಲ್ಲವೇ ಈ ವಿಷಯದಲ್ಲಿ ತಲೆ ಹಾಕಬಾರದು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.