ಉತ್ತರಪ್ರದೇಶ: ಗುಂಡಿಕ್ಕಿ RSS ನಾಯಕನ ಬರ್ಬರ ಹತ್ಯೆ
Team Udayavani, Oct 21, 2017, 11:36 AM IST
ಗಾಜೀಪುರ : ಇಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ನಡೆದ ಬೆಚ್ಚಿ ಬೀಳುವ ಘಟನೆಯೊಂದರಲ್ಲಿ ಆರ್ಎಸ್ಎಸ್ ನಾಯಕ, ಸ್ಥಳೀಯ ಪತ್ರಕರ್ತನಾಗಿದ್ದ ರಾಜೇಶ್ ಮಿಶ್ರಾ ಎನ್ನುವವರನ್ನು ಕಚೇರಿಗೆ ನುಗ್ಗಿ ದುಷ್ಕರ್ಮಿಗಳು ಬರ್ಬರವಾಗಿ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ದುಷ್ಕರ್ಮಿಗಳ ದಾಳಿ ವೇಳೆ ಸœಳದಲ್ಲಿದ್ದ ರಾಜೇಶ್ ಸಹೋದರ ಗಂಭೀರವಾಗಿ ಗಾಯಗೊಂಡಿದ್ದಾರೆ.
ದುಷ್ಕರ್ಮಿಗಳು ದಾಳಿ ನಡೆಸಿ ಪರಾರಿಯಾಗಿದ್ದು, ರಾಜೇಶ್ ಮಿಶ್ರಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಸಹೋದರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಸೇರಿದಂತೆ ಪೊಲೀಸರು ದೌಡಾಯಿಸಿ ಕೊಲೆಗಡುಕರ ಪತ್ತೆಗೆ ತಂಡಗಳನ್ನು ರಚಸಿದ್ದಾರೆ. ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ನಾಲ್ಕು ದಿನಗಳ ಹಿಂದೆ ಪಂಜಾಬ್ನ ಲೂಧಿಯಾನದಲ್ಲೂ ಆರ್ಎಸ್ಎಸ್ ಕಾರ್ಯಕರ್ತರೊಬ್ಬರ ಹತ್ಯೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.