ಸ್ವಚ್ಛತೆಗೆ ಆದ್ಯತೆ ನೀಡಿ ಪೌಷ್ಟಿಕ ಆಹಾರ ಸೇವಿಸಿ
Team Udayavani, Oct 21, 2017, 12:53 PM IST
ಹುಣಸೂರು: ಹೆಣ್ಣು ಮಕ್ಕಳು ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಿ ಪೌಷ್ಟಿಕ ಆಹಾರ ಸೇವಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಕಲ್ಕುಣಿಕೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮತಾ ಸಲಹೆ ನೀಡಿದರು. ನಗರದದ ಡಿ.ದೇವರಾಜೆ ಅರಸು ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಘಟಕದ ವತಿಯಿಂದ ಆಯೋಜಿಸಿದ್ದ ಮಹಿಳೆ ಮತ್ತು ಆರೋಗ್ಯ ಸಮಸ್ಯೆಗಳು ಕುರಿತಾದ ಉಪನ್ಯಾಸದಲ್ಲಿ ಮಾತನಾಡಿದರು.
ಯುವತಿಯರು, ಮಹಿಳೆಯರಲ್ಲಿ ಋತುಚಕ್ರ ಸಾಮಾನ್ಯ ಪ್ರಕ್ರಿಯೆಯಾಗಿದ್ದು, ಈ ವೇಳೆ ಹೊಟ್ಟೆನೋವು, ತಲೆನೋವು ಸಾಮಾನ್ಯ. ಇದಕ್ಕಾಗಿ ಮಾತ್ರೆ ತೆಗೆದುಕೊಳ್ಳುವುದು ಬೇಡ. ಮೂಢನಂಬಿಕೆ ಬಿಟ್ಟು ಶುಚಿತ್ವಕ್ಕೆ ಹೆಚ್ಚು ಗಮನ ನೀಡಬೇಕು. ಆದಷ್ಟು ಜಂಕ್‌ಫುಡ್‌ಗಳನ್ನು ತಿನ್ನಬಾರದು. ನಿತ್ಯ ಪೌಷ್ಟಿಕ ಆಹಾರ ಸೇವಿಸುವುದರಿಂದ ರಕ್ತ ಹೀನತೆ ತಪ್ಪಿಸಬಹುದು ಎಂದು ಸಲಹೆ ನೀಡಿದರು.
ಕಾಯಿಲೆಗಳು ಬಂದ ನಂತರ ಔಷಧೋಪಚಾರಕ್ಕಾಗಿ ಪರದಾಡುವ ಬದಲು ಕಾಯಿಲೆ ಬಾರದಂತೆ ಮುಂಜಾಗ್ರತೆ ವಹಿಸುವುದು ಅಗತ್ಯ. ನಿತ್ಯ ಎಳನೀರು, ಆಗಾಗ್ಗೆ ನೀರು ಕುಡಿಯುತ್ತಿರಬೇಕು. ಹದಿಹರೆಯದ ವಯಸ್ಸಿನಲ್ಲಿ ಮುಖದಲ್ಲಿ ಗುಳ್ಳೆಗಳು(ಮೊಡವೆ) ಬರುವುದು ಸಾಮಾನ್ಯ. ಸೌಂದರ್ಯಕ್ಕಾಗಿ ಯಾವುದೋ ಕ್ರೀಮ್ ಹಚ್ಚಬೇಡಿ, ಇದರಲ್ಲಿ ಸ್ಟಿರಾಯಿಡ್ ಅಂಶವಿದ್ದು ಚರ್ಮಕ್ಕೆ ಹಾನಿಕಾರಕವೆಂದು ಎಚ್ಚರಿಸಿದರು.
ಪ್ರಾಂಶುಪಾಲ ಡಾ.ವೆಂಕಟೇಶಯ್ಯ, ಇಂದಿನ ಆಹಾರ ಪದ್ಧತಿ ಹಾಗೂ ದೈಹಿಕ ಮತ್ತು ಮಾನಸಿಕ ಅಸಮತೋಲನದಿಂದಾಗಿ ಹೆಚ್ಚಾಗಿ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಪೌಷ್ಟಿಕಾಂಶ ಕೊರತೆಯೂ ಕಾಡುತ್ತಿದೆ. ಇದು ವಿದ್ಯಾರ್ಥಿಗಳ ಓದಿನ ಮೇಲೂ ಗಂಭೀರ ಪರಿಣಾಮ ಬೀರಲಿದೆ ಎಂದರು.
ವೇದಿಕೆಯಲ್ಲಿ ಎನ್‌ಎಸ್‌ಎಸ್ ಸಂಚಾಲಕರಾದ ಡಾ.ಸಿ.ಆರ್.ಕಿರಣ್‌ಕುಮಾರ್, ಜಿ.ವಿಜಯಲಕ್ಷಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಹದೇವ್, ಆರೋಗ್ಯ ನಿರೀಕ್ಷಕ ಮುತ್ತು, ಅರುಳಪ್ಪ, ಅರುಣ್, ಮಮತಾ, ಸ್ನಾತಕೋತ್ತರ ಹಾಗೂ ಪದವಿ ವಿದ್ಯಾರ್ಥಿನಿಯರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.