ಇದು 1817 ಅಲ್ಲ, 2017 ರಾಜೇಗೆ ರಾಹುಲ್ ಟಾಂಗ್
Team Udayavani, Oct 23, 2017, 7:00 AM IST
ಹೊಸದಿಲ್ಲಿ: ಅಧಿಕಾರಿಗಳ ವಿರುದ್ಧ ಗುರುತರ ಆರೋಪಗಳಿದ್ದ ಹೊರತಾಗಿಯೂ ಅವರ ವಿರುದ್ಧ ತನಿಖೆಗೆ ಆದೇಶ ನೀಡುವುದು ರಾಜಸ್ಥಾನ ಸರಕಾರದ ಪರಾಮರ್ಶೆಗೆ ಬಿಟ್ಟ ವಿಚಾರ ಎಂಬ ಸುಗ್ರೀವಾಜ್ಞೆ ಬಗ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು “ಮೇಡಂ ಮುಖ್ಯಮಂತ್ರಿ. ನಾವು ಈಗ 1817ನೇ ಇಸ್ವಿಯಲ್ಲಿ ಅಲ್ಲ. ಬದಲಾಗಿ 2017ರಲ್ಲಿ ಇದ್ದೇವೆ ಎಂದು ವಿನಮ್ರವಾಗಿ ತಿಳಿಸಲು ಇಚ್ಛಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ. ಜತೆಗೆ ಮುಖ್ಯಮಂತ್ರಿ ವಸುಂಧರಾ ರಾಜೇ ನೇತೃತ್ವದ ಸರಕಾರ ಹೊರಡಿಸಿದ ಸುಗ್ರೀವಾಜ್ಞೆಯ ಬಗ್ಗೆ ಮಾಧ್ಯಮ ವರದಿಯ ಫೋಟೋವನ್ನು ಕೂಡ ಟ್ಯಾಗ್ ಮಾಡಿದ್ದಾರೆ.
ಹೆಚ್ಚು ಸಮಯ ಬಾಳದು: ಮತ್ತೂಂ ದೆಡೆ ಕಾಂಗ್ರೆಸ್ ನಾಯಕ ಶಶಿ ತರೂರ್ ಸಂದರ್ಶನವೊಂದರಲ್ಲಿ ಮಾತನಾಡಿ, ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಅತ್ಯಂತ ಜಾಗರೂ ಕತೆಯಿಂದ ಅಪಪ್ರ ಚಾರ ಮಾಡಿಕೊಂಡು ಬರು ತ್ತಿದೆ. ಇಂಥ ಕ್ರಮಗಳು ಹೆಚ್ಚು ಸಮಯ ಪರಿಣಾಮ ಬೀರಲಾರದು ಎಂದು ಹೇಳಿದ್ದಾರೆ. ಕೆಲ ಸಮಯ ದಿಂದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಸಾರ್ವಜನಿಕರು ಮುಕ್ತವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಜನರೂ ಬಿಜೆಪಿಗೆ ಪರ್ಯಾಯವಾಗಿ ಕಾಂಗ್ರೆಸ್ ಮತ್ತಷ್ಟು ಬಲಶಾಲಿಯಾ ಗಬೇಕೆಂದು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.