ದಿಲ್ಲಿ ಕರೋಲ್ ಬಾಗ್‌ನಲ್ಲಿ 12 ಕೋಟಿ ರೂ. ಚಿನ್ನಾಭರಣ ಕಳವು
Team Udayavani, Oct 23, 2017, 12:21 PM IST
ಹೊಸದಿಲ್ಲಿ : ಮಧ್ಯ ದಿಲ್ಲಿಯ ಕರೋಲ್ ಬಾಗ್‌ನಲ್ಲಿರುವ ಎರಡು ಚಿನ್ನಾಭರಣ ಉತ್ಪಾದನಾ ಘಟಕದಿಂದ ಸುಮಾರು 12 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳು ಕಳವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳ್ಳತನದ ಕೃತ್ಯವು ಸಿಸಿಟಿವಿ ಯಲ್ಲಿ ದಾಖಲಾಗಿದ್ದು ಆರೋಪಿಗಳನ್ನು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ದೀಪಾವಳಿಯ ದಿನ ಈ ಕಳವು ನಡೆದಿದ್ದು ಮರುದಿನ ಮಾಲಕರು ಘಟಕಗಳಿಗೆ ಮರಳಿದಾಗ ಚಿನ್ನಾಭರಣಗಳು ಕಳವಾಗಿರುವುದು ಗೊತ್ತಾಯಿತು.
ಚಿನ್ನಾಭರಣ ತಯಾರಿ ಘಟಕ ಇರುವ ಕಟ್ಟಡದ ಮೊದಲ ಮಹಡಿಯಲ್ಲಿ ವಾಸವಾಗಿರುವ ಬಾಡಿಗೆದಾರರೇ ಈ ಕೃತ್ಯ ಎಸಗಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿನ್ನಾಭರಣ ಇಡುವ ಲಾಕರನ್ನು ಗ್ಯಾಸ್ ಕಟರ್ ಬಳಸಿ ಕತ್ತರಿಸಿ ತೆರೆದು 6.80 ಕೋಟಿ ರೂ. ಮೌಲ್ಯದ ಒಡವೆಗಳನ್ನು ಕಳವು ಮಾಡಲಾಗಿದೆಯಾದರೆ ಇನ್ನೊಂದು ಘಟಕದಲ್ಲಿನ ಲಾಕರ್‌ನ ಬೀಗ ಮುರಿದು 5.20 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರುತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.