ಸವಲತ್ತು ಕೊಟ್ಟ ಸರ್ಕಾರದಿಂದ ಮತ ಭಾಗ್ಯ ನಿರೀಕ್ಷೆ!


Team Udayavani, Oct 23, 2017, 1:09 PM IST

h2-siddappa].jpg

ಹುಬ್ಬಳ್ಳಿ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಹೆಚ್ಚುತ್ತಿದೆ. ವಿವಿಧ ರಾಜಕೀಯ ಪಕ್ಷಗಳು ಮತಬೇಟೆಯ ತಾಲೀಮು ಶುರುವಿಟ್ಟುಕೊಂಡಿವೆ. ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರ ತಾನು ಜಾರಿಗೊಳಿಸಿದ ವಿವಿಧ ಭಾಗ್ಯಗಳ ಫ‌ಲಾನುಭವಿಗಳ ಮನವೊಲಿಕೆ ಕಸರತ್ತಿಗೆ ಮುಂದಾಗಿದೆ.  

ಅನ್ನಭಾಗ್ಯದಿಂದ ಹಿಡಿದು ವಿವಿಧ ಭಾಗ್ಯಗಳೊಂದಿಗೆ ಸುಮಾರು 1.08 ಕೋಟಿ ಕುಟುಂಬಗಳಿಗೆ ಸೌಲಭ್ಯ ಕಲ್ಪಿಸಿದ್ದೇವೆ. ಮಾಡಿದ ಕೆಲಸಕ್ಕೆ ಕೂಲಿ ಕೇಳುತ್ತಿದ್ದೇವೆ ಎಂಬುದು ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದಿಯಾಗಿ ಕಾಂಗ್ರೆಸ್‌ ನಾಯಕರ ಹೇಳಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿಯೇ ರಾಜ್ಯದಲ್ಲಿ ವಿಭಾಗ ಮಟ್ಟದ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಹಲವು ಸಮಾವೇಶಗಳನ್ನು ಸರಣಿ ರೂಪದಲ್ಲಿ ಕೈಗೊಳ್ಳಲು ಕಾಂಗ್ರೆಸ್‌ ಮುಂದಾಗಿದೆ.

ಅ.23ರಂದು ಧಾರವಾಡದಲ್ಲಿ ನಡೆಯುತ್ತಿರುವ ಬೆಳಗಾವಿ ವಿಭಾಗ ಮಟ್ಟದ ಸಮಾವೇಶ ಇದರ ಭಾಗವಾಗಿಯೇ ನಡೆಯುತ್ತಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ತಾಸುಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನ್ಯಭಾಗ್ಯ ಯೋಜನೆ ಘೋಷಣೆ ಮಾಡುವ ಮೂಲಕ ಭಾಗ್ಯಗಳ ಪರ್ವಕ್ಕೆ ಶ್ರೀಕಾರ ಹಾಕಿದ್ದರು.

ಕಾಂಗ್ರೆಸ್‌ ಸರ್ಕಾರ ಅನ್ನಭಾಗ್ಯ, ಕ್ಷೀರಭಾಗ್ಯ, ಶೂ ಭಾಗ್ಯ, ಶಾದಿಭಾಗ್ಯ, ಕೃಷಿಭಾಗ್ಯ, ಸಾವಯವ ಭಾಗ್ಯ, ಮನಸ್ವಿನಿ, ಮೈತ್ರಿ, ಪಶುಭಾಗ್ಯ, ಕ್ಷೀರಧಾರೆ, ಶುದ್ಧ ಕುಡಿಯುವ ನೀರಿನ ಘಟಕ, ವಿದ್ಯಾಸಿರಿ, ಇಂದಿರಾ ಕ್ಯಾಂಟಿನ್‌, ನವೋದ್ಯಮ ಪೋತ್ಸಾಹಕ್ಕೆ ಎಲಿವೆಟ್‌ ಹೀಗೆ ವಿವಿಧ ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ, ಕಾಂಗ್ರೆಸ್‌ ನಾಯಕರು ಕಳೆದ ನಾಲ್ಕು ವರ್ಷಗಳಲ್ಲಿ ತಮ್ಮ ಸರ್ಕಾರ ವಿವಿಧ ಭಾಗ್ಯ ಹಾಗೂ ಯೋಜನೆಗಳೊಂದಿಗೆ ಸುಮಾರು 1.08 ಕೋಟಿ ಕುಟುಂಬಗಳಿಗೆ ಸೌಲಭ್ಯ ಒದಗಿಸಿದೆ. ಇದರಿಂದ ಕನಿಷ್ಠ 3-4 ಕೋಟಿ ಜನರಿಗೆ ಸರ್ಕಾರದ ಒಂದಲ್ಲ ಒಂದು ಸೌಲಭ್ಯ ತಲುಪಿದೆ. 

ಸರ್ಕಾರದ ಭಾಗ್ಯ-ಯೋಜನೆಗಳ ಸೌಲಭ್ಯ ಪಡೆದ ಅಂದಾಜು 3-4 ಕೋಟಿ ಫ‌ಲಾನುಭವಿಗಳ ಮನೆ, ಮನೆಗೆ ಸರ್ಕಾರದ ಸೌಲಭ್ಯಗಳ ಮನವರಿಕೆ ಹಾಗೂ ಮನವೊಲಿಕೆ ಕಾರ್ಯಕ್ಕೆ ಕಾಂಗ್ರೆಸ್‌ ಮುಂದಾಗಿದೆ. ಇದಕ್ಕೆ ಪೂರಕವಾಗಿಯೇ ಮನೆ ಮನೆಗೆ ಕಾಂಗ್ರೆಸ್‌ ಎಂಬ ಸುಮಾರು 30 ಪುಟಗಳ ಕಿರುಹೊತ್ತಿಗೆ ಮುದ್ರಿಸಿ ಅದನ್ನು ಜನರಿಗೆ ತಲುಪಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. 

ರೈತರ ಮನವೊಲಿಕೆಗೂ ಯತ್ನ: ಕಾಂಗ್ರೆಸ್‌ ಸರ್ಕಾರ ರೈತರ ಸಹಕಾರಿ ಸಂಘಗಳಲ್ಲಿನ 50 ಸಾವಿರ ರೂ.ವರೆಗಿನ ಸಾಲ ಮನ್ನಾ ಮಾಡಿದ್ದು, ಆ ಮೂಲಕ ರೈತರ ಮನವೊಲಿಕೆಗೂ ಮುಂದಾಗಿದೆ. ಸಹಕಾರಿ ಸಂಘಗಳಲ್ಲಿ 50 ಸಾವಿರ ರೂ.ವರೆಗಿನ ಅಂದಾಜು 8,000 ಕೋಟಿ ರೂ.ನಷ್ಟು ಸಾಲ ಮನ್ನಾ ಮಾಡುವ ಮೂಲಕ ಸುಮಾರು 22 ಲಕ್ಷ ರೈತರಿಗೆ ಪ್ರಯೋಜನವಾಗುವಂತೆ ಮಾಡಿದ್ದು,

ಈ ರೈತರ ಮನವೊಲಿಕೆ ಕಾರ್ಯಕ್ಕೆ ಕಾಂಗ್ರೆಸ್‌ ತನ್ನದೇ ಯೋಜನೆ ರೂಪಿಸಿದೆ. ಕಾಂಗ್ರೆಸ್‌ ಮೂಲಗಳ ಪ್ರಕಾರ ಸಹಕಾರಿ ಸಂಘಗಳ ಒಟ್ಟು ರೈತರ ಸಾಲ ಅಂದಾಜು 10,500 ಕೋಟಿ ರೂ.ನಷ್ಟು ಆಗಿದ್ದು, ಬಾಕಿ ಉಳಿದಿರುವ 2,500 ಕೋಟಿ ರೂ. ಸಾಲವನ್ನು ಸಹ ಮನ್ನಾ ಮಾಡುವ ಗಂಭೀರ ಚಿಂತನೆ ನಡೆದಿದ್ದು, ಶೀಘ್ರದಲ್ಲೇ ಮನ್ನಾ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

ಸಹಕಾರಿ ಸಂಘಗಳಲ್ಲಿನ ಎಲ್ಲ ಸಾಲವನ್ನು ಮನ್ನಾ ಮಾಡುವ ಮೂಲಕ ಕಾಂಗ್ರೆಸ್‌ ರೈತರಪರ ತಾವು ಎಂಬುದನ್ನು ತೋರಿಸಿಕೊಳ್ಳುವ ಹಾಗೂ ಕೇಂದ್ರ ಸರ್ಕಾರಕ್ಕೆ ವಾಣಿಜ್ಯ ಬ್ಯಾಂಕ್‌ ಗಳ ರೈತರ ಸಾಲ ಮನ್ನಾ ಒತ್ತಡ ಹೆಚ್ಚಿಸಲು ಮುಂದಾಗಿದೆ ಎನ್ನಲಾಗಿದೆ.

ರಾಜ್ಯ ಸರ್ಕಾರ ಮೊದಲು ರೈತರ ಸಾಲ ಮನ್ನಾ ಮಾಡಲಿ ಕೇಂದ್ರದ ಮೇಲೆ ಸಾಲ ಮನ್ನಾಕ್ಕೆ ನಾವು ಒತ್ತಡ ತರುತ್ತೇವೆ ಎಂದು ಅಬ್ಬರಿಸಿದ್ದ ಬಿಜೆಪಿ ನಾಯಕರ ಹೇಳಿಕೆಗಳನ್ನೇ ರೈತರ ಮುಂದಿಟ್ಟು, ಬಿಜೆಪಿ ನಾಯಕರನ್ನು ಮುಜಗರಕ್ಕೀಡು ಮಾಡಲು ಕಾಂಗ್ರೆಸ್‌ ಯೋಜಿಸಿದೆ. 

ಸರ್ಕಾರದ ಆಡಳಿತ, ಭಾಗ್ಯಗಳ ಬಗ್ಗೆ ವಿರೋಧ ಪಕ್ಷಗಳು  ಏನೇ ಟೀಕೆ ಮಾಡಿದರು, ಎಲ್ಲ ವರ್ಗಗಳಿಗೂ ಒಂದಲ್ಲ ಒಂದು ಭಾಗ್ಯದ ಸೌಲಭ್ಯ ತಲುಪಿಸಿದ್ದರಿಂದ ಅಂದಾಜು 3-4 ಕೋಟಿ ಫ‌ಲಾನುಭವಿಗಳ ಮನವೊಲಿಕೆಯಲ್ಲಿ ಯಶಸ್ವಿಯಾದರೆ ನಿರೀಕ್ಷೆಗೆ ಮೀರಿದ ಗೆಲುವು ನಮ್ಮದಾಗಬಲ್ಲದು ಎಂಬುದು ಕಾಂಗ್ರೆಸ್‌ ಲೆಕ್ಕಾಚಾರ. ಇದಕ್ಕೆ ಮತದಾರರು ಯಾವ ರೀತಿ ಸ್ಪಂದಿಸುತ್ತಾರೋ ಕಾದು ನೋಡಬೇಕಷ್ಟೆ. 

* ಅಮರೇಗೌಡ ಗೋನವಾರ

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.