ಮಿಜೋರಾಂ: ಅಕ್ರಮ ವಿದೇಶಿ ವಲಸಿಗರ ಗಡಿಪಾರಿಗೆ ಬಿಜೆಪಿ ಆಗ್ರಹ
Team Udayavani, Oct 23, 2017, 4:56 PM IST
ಐಜಾಲ್ : ನೆರೆಯ ದೇಶಗಳಿಂದ ರಾಜ್ಯವನ್ನು ಅಕ್ರಮವಾಗಿ ಪ್ರವೇಶಿಸಿರುವ ವಿದೇಶೀಯರನ್ನು ಪತ್ತೆ ಹಚ್ಚಿ ಗಡಿಪಾರು ಮಾಡುವಂತೆ ಮಿಜೋರಾಂ ನ ಕಾಂಗ್ರೆಸ್ ಸರಕಾರವನ್ನು ಬಿಜೆಪಿ ರಾಜ್ಯ ಘಟಕ ಆಗ್ರಹಿಸಿದೆ.
ಯಾವುದೇ ದಾಖಲೆ ಪತ್ರ ಇಲ್ಲದೆ ಅಕ್ರಮವಾಗಿ ರಾಜ್ಯವನ್ನು ಪ್ರವೇಶಿಸಿ ನೆಲೆಯೂರಿರುವ ವಿದೇಶೀಯರನ್ನು ತತ್‌ಕ್ಷಣವೇ ಪತ್ತೆ ಹಚ್ಚಿ ಗಡಿಪಾರು ಮಾಡಬೇಕೆಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ದಿಲೀಪ್ ಕುಮಾರ್ ಅವರು ಕಳೆದ ಆಗಸ್ಟ್ 8ರಂದು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ಆದರೆ ಕೇಂದ್ರ ಸರಕಾರದ ಈ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯೋನ್ಮುಖವಾಗುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಬಿಜೆಪಿ ಪತ್ರಿಕಾ ಹೇಳಿಕೆಯಲ್ಲಿ ಖಂಡಿಸಿದೆ.
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿನ ತನ್ನ ವೋಟ್ ಬ್ಯಾಂಕ್ ಬಲಪಡಿಸುವ ದಿಶೆಯಲ್ಲಿ ಅಕ್ರಮ ವಿದೇಶೀಯರಿಗೆ ಆಸರೆ ನೀಡಿ ರಾಜಕೀಯ ಲಾಭ ಪಡೆಯುತ್ತಿದೆ ಎಂದು ಬಿಜೆಪಿ ದೂರಿದೆ.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲ ಅಕ್ರಮ ವಿದೇಶಿ ವಲಸೆಗಾರರನ್ನು ಗಡಿಪಾರು ಮಾಡುವುದಾಗಿ ಬಿಜೆಪಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ
Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
Perla: ರಸ್ತೆ ವಿಸ್ತರಣೆ, ನೇತ್ರಾವತಿ ನದಿ ತಡೆಗೋಡೆ ದುರಸ್ತಿಗೆ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.