ಪಂಚಮಸಾಲಿ “2 ಎ’ಗೆ ಸೇರಿಸಲು ಕ್ರಮ: ಸಿಎಂ


Team Udayavani, Oct 24, 2017, 12:06 PM IST

siddu-cm.jpg

ಬೆಂಗಳೂರು: ರಾಜ್ಯದಲ್ಲಿ 80 ಲಕ್ಷ ಜನಸಂಖ್ಯೆ ಹೊಂದಿರುವ ಪಂಚಮಸಾಲಿ ಜನಾಂಗವನ್ನು ಪ್ರವರ್ಗ 2ಎ ಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಧಾನಸೌಧ ಆವರಣದ ಬೃಹತ್‌ ಮೆಟ್ಟಿಲುಗಳ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. 

ಪಂಚಮಸಾಲಿ ಜನಾಂಗವನ್ನು 2ಎಗೆ ಸೇರಿಸಬೇಕು ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಯಬಸವ ಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಸಮಾಜದ ಇತರ ಮುಖಂಡರು ಇಟ್ಟ ಬೇಡಿಕೆಗೆ ತಮ್ಮ ಭಾಷಣದಲ್ಲಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದೇ ಜಾತಿಯನ್ನು ಪ್ರವರ್ಗದ ಪಟ್ಟಿಗೆ ಸೇರಿಸಬೇಕಾದರೆ,

ಅದಕ್ಕೆ ಅದರದೇ ಆದ ಪದ್ದತಿ ಅನುಸರಿಸಿ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಶಿಫಾರಸು ಮಾಡಬೇಕಾಗುತ್ತದೆ. ಆ ಪ್ರಕಾರ ಪಂಚಮಸಾಲಿ ಜನಾಂಗವನ್ನು 2ಎ ಗೆ ಸೇರಿಸಬೇಕು ಎಂದು ಕೊಟ್ಟಿರುವ ಮನವಿಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ತಕ್ಷಣ ಕಳಸಿಕೊಡುತ್ತೇನೆ ಎಂದು ಹೇಳಿದರು. 

ಅಲ್ಲದೇ ಇಂಗ್ಲೆಂಡಿನಲ್ಲಿರುವ ಕಿತ್ತೂರುರಾಣಿ ಚೆನ್ನಮ್ಮನ ಖಡ್ಗವನ್ನು ವಾಪಸ್‌ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಕೇಂದ್ರ ವಿದೇಶಾಂಗ ಸಚಿವರಿಗೆ ಕೂಡಲೇ ಪತ್ರ ಬರೆಯತ್ತೇನೆ. ಮುಂದಿನ ಕೆಲಸ ಕೇಂದ್ರ ಸರ್ಕಾರ ಮಾಡಬೇಕು. ಕೇಂದ್ರದಲ್ಲಿ ನಿಮ್ಮದೇ ಪಕ್ಷದ ಸರ್ಕಾರ ಇದೆ. ಹಾಗಾಗಿ ಅಲ್ಲಿ ಒತ್ತಡ ತರುವ ಕೆಲಸ ನೀವು ಮಾಡಿ ಎಂದು ವೇದಿಕೆಯಲ್ಲಿದ್ದ ಮಾಜಿ ಸಚಿವ ಮುರಗೇಶ ನಿರಾಣಿ ಅವರಿಗೆ ಸಿದ್ದರಾಮಯ್ಯ ಹೇಳಿದರು.

ಪಂಚಮಸಾಲಿ ಪೀಠಕ್ಕೆ ಅನುದಾನ: ಅನುದಾನ ಕೊಡಿ ಎಂದು ಈ ಹಿಂದೆ ಯಾವತ್ತೂ ಜಯಮೃತ್ಯುಂಜಯ ಸ್ವಾಮೀಜಿ ಕೇಳಿರಲಿಲ್ಲ. ಆದರೆ ಪಂಚಮಸಾಲಿ ಪೀಠಕ್ಕೆ ಅನುದಾನ ಕೊಡಿ ಎಂದು ಈ ಬಾರಿ ಮನವಿ ಮಾಡಿದ್ದಾರೆ. ಅದರಂತೆ ಪೀಠದ ಅಭಿವೃದ್ಧಿಗೆ ಅನುದಾನ ಕೊಡುತ್ತೇನೆ. ಜೆ.ಎಚ್‌. ಪಟೇಲ್‌ ಮುಖ್ಯಮಂತ್ರಿ ಆಗಿದ್ದಾಗ ನಾನು ಹಣಕಾಸು ಮಂತ್ರಿಯಾಗಿ ಕೂಡಲಸಂಗಮ ಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನ ಕೊಟ್ಟಿದ್ದೆ.

ಈಗ ನಮ್ಮ ಸರ್ಕಾರ ಬಂದ ಮೇಲೆ ಕೂಡಲಸಂಗಮ ಕ್ಷೇತ್ರದ ಅಭಿವೃದ್ಧಿಗೆ 250 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಮಠಗಳು, ಧಾರ್ಮಿಕ ಕ್ಷೇತ್ರಗಳು ನಡೆಸುವ ಶಿಕ್ಷಣ ಸಂಸ್ಥೆಗಳು ಮತ್ತು ಇನ್ನಿತರ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ನೀಡುವುದನ್ನು “ರಾಜಕೀಯ ಕನ್ನಡಕ’ದಿಂದ ನೋಡಬಾರದು ಎಂದು ಇದೇ ವೇಳೆ ಸಿದ್ದರಾಮಯ್ಯ ಹೇಳಿದರು. 

ಇದಕ್ಕೂ ಮೊದಲು ಮಾತನಾಡಿದ ಜಯಬಸವ ಮೃತ್ಯುಂಜಯ ಸ್ವಾಮೀಜಿ, ಸಚಿವ ವಿನಯ್‌ ಕುಲಕರ್ಣಿ, ಮಾಜಿ ಸಚಿವ ಮುರಗೇಶ ನೀರಾಣಿ, ಶಾಸಕ ವಿಜಯಾನಂದ ಕಾಶಪ್ಪನವರ್‌ ಅವರು ಪಂಚಮಸಾಲಿ ಜನಾಂಗವನ್ನು 2ಎ ಗೆ ಸೇರಿಸಬೇಕು. ಇಂಗ್ಲೆಂಡ್‌ನ‌ಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮನ ಖಡ್ಗವನ್ನು ವಾಪಸ್‌ ತರಿಸಬೇಕು. ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೋಳ್ಳಿ ರಾಯಣ್ಣನ ಪ್ರತಿಮೆಯನ್ನು ವಿಧಾನಸೌಧದ ಮುಂದೆ ಸ್ಥಾಪಿಸಬೇಕು.

ಬೈಲಹೊಂಗಲದ ಚೆನ್ನಮ್ಮ ಸಮಾಧಿ ಮತ್ತು ರಾಯಗಢದಲ್ಲಿರುವ ಸಂಗೊಳ್ಳಿ ರಾಯಣ್ಣ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡಬೇಕು. ಧಾರವಾಡದ ಕರ್ನಾಟಕ ಕಾನೂನು ವಿವಿಗೆ ಸರ್‌ ಸಿದ್ದಪ್ಪ ಕಾಂಬ್ಳೆ ಹೆಸರಿಡಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು. 

ಇತಿಹಾಸ ಬದಲಿಸಬೇಕು: ಈ ವೇಳೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ, ಸ್ವಾತಂತ್ರ್ಯ ಸಂಗ್ರಾಮ ಪ್ರಾರಂಭವಾಗಿದ್ದು 1857 ಎಂದು ಇತಿಹಾಸಕಾರರು ಹೇಳುತ್ತಾರೆ. ಆದರೆ, ಅಸಲಿಗೆ ಸ್ವಾತಂತ್ರ್ಯ ಸಂಗ್ರಾಮ ಆರಂಭವಾಗಿದ್ದು 1824ರಲ್ಲಿ ಅದು ನಮ್ಮ ನಾಡಿನ ಕಿತ್ತೂರಿನಲ್ಲಿ ರಾಣಿ ಚೆನ್ನಮ್ಮನ ಮೂಲಕ. ಹಾಗಾಗಿ ಇತಿಹಾಸವನ್ನು ಬದಲಿಸಬೇಕಾಗಿದೆ.

ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ದಿಟ್ಟ ನಿಲುವು ಕೈಗೊಳ್ಳಲಿದೆ ಎಂದರು. ಅಲ್ಲದೇ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ  ವಿಶ್ವವಿದ್ಯಾಲಯದಲ್ಲಿ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅಧ್ಯಯನ ಪೀಠಗಳನ್ನು ಸ್ಥಾಪಿಸಲಾಗಿದ್ದು, ಕ‌ಟ್ಟಡ ನಿರ್ಮಾಣಕ್ಕಾಗಿ  5 ಕೋಟಿ ಮತ್ತು ಸಂಶೋಧನೆ ಮತ್ತು ಅಧ್ಯಯನ ಚಟುವಟಿಕೆಗಳಿಗೆ ಪ್ರತಿ ವರ್ಷ 2 ಕೋಟಿ ರೂ. ಅನುದಾನ ನೀಡಲಾಗುವುದು ಎಂದರು.

ನಿರಾಣಿ ಕಾಲೆಳೆದ ಸಿಎಂ: ಮಾಜಿ ಸಚಿವ ಮುರಗೇಶ ನಿರಾಣಿ ಮಾತನಾಡುತ್ತ, “ನಿಮ್ಮ ಸರ್ಕಾರದ ಅವಧಿ ಇನ್ನು 6 ತಿಂಗಳು ಮಾತ್ರ ಇದೆ. ಅದಕ್ಕಾಗಿ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ವಿಧಾನಸೌಧದ ಮುಂದೆ ಸ್ಥಾಪಿಸಲು ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು. ಇದಕ್ಕೆ ವಾಜಪೇಯಿ ಪ್ರಧಾನಿ ಆಗಿದ್ದಾಗ, ಆಗ ಕೇಂದ್ರ ಸಚಿವರಾಗಿದ್ದ ಬಸವನಗೌಡ ಪಾಟೀಲ್‌ ಯತ್ನಾಳ ಅವರ ಪ್ರಯತ್ನದಿಂದ ಪಾರ್ಲಿಮೆಂಟ್‌ನಲ್ಲಿ ರಾಣಿ ಚೆನ್ನಮ್ಮ ಪ್ರತಿಮೆ ಸ್ಥಾಪಿಸಲಾಗಿದೆ ಎಂದು ಉದಾಹರಣೆ ಕೊಟ್ಟರು.

ಇದಕ್ಕೆ ತಮ್ಮ ಭಾಷಣದಲ್ಲಿ ತಿರುಗೇಟು ನೀಡಿದ ಸಿದ್ದರಾಮಯ್ಯ, ನಿಮಗೆ ಅನುಮಾನ ಬೇಡ, ಮುಂದಿನ ಬಾರಿಯೂ ಜನ ನಮಗೇನೆ ಅವಕಾಶ ಕೊಡುತ್ತಾರೆ. ಅಷ್ಟಕ್ಕೂ ಪಾರ್ಲಿಮೆಂಟ್‌ನಲ್ಲಿ ರಾಣಿ ಚೆನ್ನಮ್ಮಳ ಪ್ರತಿಮೆ ಸ್ಥಾಪಿಸಿದ್ದು, ಮನಮೋಹನ್‌ಸಿಂಗ್‌ ಅವರು ಪ್ರಧಾನಿ ಆಗಿದ್ದಾಗ, ಶಿವರಾಜಪಾಟೀಲ್‌ ಗೃಹ ಸಚಿವರಾಗಿದ್ದಾಗ 2007ರಲ್ಲಿ ಆಯಿತು. ಜಯಬಸವ ಮೃತ್ಯುಂಜಯ ಸ್ವಾಮೀಜಿ ಇದಕ್ಕೆ ಸಾಕ್ಷಿ ಇದ್ದಾರೆ. ನೀವು ಏನೇ ಹೇಳಬಹುದು.

ಆದರೆ, ವಾಸ್ತವವನ್ನು ಮರೆಮಾಚಲು ಸಾಧ್ಯವಿಲ್ಲ ಎಂದರು. ಕಾರ್ಯಕ್ರಮದಲ್ಲಿ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಮಹಸ್ವಾಮಿ, ಸಚಿವರಾದ ಎಂ.ಬಿ. ಪಾಟೀಲ್‌, ಉಮಾಶ್ರೀ, ರೋಷನ್‌ಬೇಗ್‌, ಎಚ್‌.ಎಂ. ರೇವಣ್ಣ, ಸಂಸದರಾದ ಪ್ರಕಾಶ್‌ ಹುಕ್ಕೇರಿ, ಕರಡಿ ಸಂಗಣ್ಣ, ಶಾಸಕಅಪ್ಪಾಜಿ ನಾಡಗೌಡ, ವಿಧಾನಪರಿಷತ್‌ ಸದಸ್ಯ ಬಸವನಗೌಡ ಪಾಟೀಲ್‌ ಯತ್ನಾಳ್‌, ಮಾಜಿ ವಿಧಾನಪರಿಷತ್‌ ಸದಸ್ಯ ಡಾ. ಎಂ.ಪಿ. ನಾಡಗೌಡ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.