ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತ್ಯೇಕ ಪ್ರತಿಭಟನೆ 


Team Udayavani, Oct 24, 2017, 12:53 PM IST

m3-bedi-protest.jpg

ಮೈಸೂರು: ವಿವಿಧ ಬೇಡಿಕಗಳ ಈಡೇರಿಕೆಗೆ ಒತ್ತಾಯಿಸಿ ಧರ್ಮಸಿಂಗ್‌ ಕಾಲೋನಿ ನಿವಾಸಿಗಳು, ಸರ್ಕಾರಿ ಶಾಲೆಗಳ ಆಯಾಗಳು, ಮೈಸೂರು ನಗರ ಮಹಿಳಾ ಮತ್ತು ಮಕ್ಕಳ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸೇವಾ ಸಮಿತಿ ಹಾಗೂ ಕೆ.ಆರ್‌.ಆಸ್ಪತ್ರೆ ಹೊರಗುತ್ತಿಗೆ ಕಾರ್ಮಿಕರು ಸೋಮವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು.

ಮನೆಗಳ ನೆಲಸಮಕ್ಕೆ ವಿರೋಧ: ನಗರದ ಧರ್ಮಸಿಂಗ್‌ ಕಾಲೋನಿಯ “ಬಿ’ ಬ್ಲಾಕ್‌ ಮನೆಗಳನ್ನು ನೆಲಸಮಗೊಳಿಸಿರುವ ಸರ್ಕಾರದ ನಿಲುವು ಖಂಡಿಸಿ ಸ್ಥಳೀಯ ನಿವಾಸಿಗಳು ಮಾಜಿ ಸಚಿವ ಎಸ್‌.ಎ.ರಾಮದಾಸ್‌ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈಗಾಗಲೇ ವಾಸವಿರುವ 38 ಫ‌ಲಾನುಭವಿಗಳಿಗೆ ಹಣ ನೀಡಿ ಮನೆ ನಿರ್ಮಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು ಮತ್ತು ಈ ಮನೆಗಳನ್ನು ಧ್ವಂಸಗೊಳಿಸುವ ನಿರ್ಧಾರ ಕೈಬಿಡಬೇಕೆಂದು ಒತ್ತಾಯಿಸಿ, ಜಿಲ್ಲಾಧಿಕಾರಿ ರಂದೀಪ್‌ರಿಗೆ ಮನವಿ ಸಲ್ಲಿಸಿದರು.

ಕನಿಷ್ಟ ವೇತನ ಒದಗಿಸಿ: ರಾಜ್ಯ ಸರ್ಕಾರದ ಪ್ರಾಥಮಿಕ ಶಾಲಾ ಆಯಾಗಳಿಗೆ ಕನಿಷ್ಟ ವೇತನ ನೀಡುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಆಯಾಗಳ ಸಂಘದ ಪದಾಧಿಕಾರಿಗಳು ನಗರದ ಜಿಪಂ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಸಿದರು.

ನ್ಯಾಯಾಲಯ ನೀಡಿದ್ದ ಸಮಯ ಮುಗಿದರೂ ಶಿಕ್ಷಣ ಇಲಾಖಾಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ಸರ್ಕಾರ ಗಮನವಹಿಸಿ ಕನಿಷ್ಟ ವೇತನ ಒದಗಿಸಿಕೊಡಬೇಕೆಂದು ಒತ್ತಾಯಿಸಿದರು. ಪ್ರಾಥಮಿಕ ಶಾಲಾ ಆಯಾಗಳ ಸಂಘದ ಕಮ್ಮಲಮ್ಮ ಜೈನಾಪುರ, ಸುಶೀಲಾದೇವಿ, ಮಹೇಶ್‌ಕುಮಾರ್‌ ಇದ್ದರು.

ಪರಿಷ್ಕೃತ ವೇತನಕ್ಕೆ ಆಗ್ರಹ: ಪರಿಷ್ಕೃತ ವೇತನ ಜಾರಿಗೆ ಆಗ್ರಹಿಸಿ ಕೆ.ಆರ್‌.ಆಸ್ಪತ್ರೆ ಹೊರಗುತ್ತಿಗೆ ಕಾರ್ಮಿಕರು ಆಸ್ಪತ್ರೆ ಎದುರು ಪ್ರತಿ¸‌ಟನೆ ನಡೆಸಿದರು. ಮೈಸೂರು ವೈದ್ಯಕೀಯ ಕಾಲೇಜು ವ್ಯಾಪ್ತಿಯ ಚೆಲುವಾಂಬ, ಕೆಆರ್‌ ಆಸ್ಪತ್ರೆಯಲ್ಲಿ ಹೊರಗುತ್ತಿಗೆಯಲ್ಲಿ ಅಂದಾಜು 200 ಕಾರ್ಮಿಕರು,

-ಆಯಾ, ನಾನ್‌ ಕ್ಲಿನಿಕಲ್‌, ಭದ್ರತಾ ಸಿಬ್ಬಂದಿ ಹಾಗೂ ಸ್ವತ್ಛತಾ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ವೇತನ ಪರಿಷ್ಕರಿಸಿ ರಾಜ್ಯ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದ್ದರೂ, ಅದನ್ನು ಜಾರಿಗೊಳಿಸದೆ, ಹಳೆ ವೇತನವನ್ನೇ ನೀಡಲಾಗುತ್ತಿದೆ ಎಂದು ದೂರಿದರು. 

ಅಂಗವಿಕಲರಿಗೆ ಮನೆ ನೀಡಿ: ಅಂಗವಿಕಲ ಫ‌ಲಾನುಭವಿಗಳಿಗೆ ಮನೆ ಕೊಡಿಸುವಂತೆ ಒತ್ತಾಯಿಸಿ ಮೈಸೂರು ನಗರ ಮಹಿಳಾ ಮತ್ತು ಮಕ್ಕಳ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸೇವಾ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಅಂಗವಿಕಲರ ಬಗ್ಗೆ ವಿಶೇಷ ಕಾಳಜಿಯನ್ನು ತೋರುವ ಜಿಲ್ಲಾಧಿಕಾರಿಗಳು ಕೂಡಲೆ ನಾಲ್ವರು ಫ‌ಲಾನುಭವಿಗಳಿಗೆ ಸೂರು ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು. ಸಮಿತಿ ಪದಾಧಿಕಾರಿಗಳಾದ ಯೂಸೆಫ್ ಮಿಜಾì, ಇಲಿಯಾಸ್‌ ಉಲ್ಲಾ ಬೇಗ್‌, ಇಮ್ರಾನ್‌, ವಜೀರ್‌ ಉಲ್ಲಾ ಷರೀಪ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.