ಪಟೇಲರ ಮೀಸಲಾತಿಗೆ “ಕೈ’ ಜೋಡಿಸಲಿದ್ದಾರಾ ಹಾರ್ದಿಕ್?
Team Udayavani, Oct 25, 2017, 7:35 AM IST
ಅಹ್ಮದಾಬಾದ್: ಪಟೇಲ್ ಸಮುದಾಯಕ್ಕೆ ಸರಕಾರಿ ಹುದ್ದೆಗಳಲ್ಲಿ ಮೀಸಲಾತಿ ನೀಡುವ ವಾಗ್ಧಾನ ನೀಡಿದರೆ ಮಾತ್ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪಟೇಲ್ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದೆ ಎಂದು ಪಟೇಲ್ ಮೀಸಲು ಹೋರಾಟಗಾರ ಹಾರ್ದಿಕ್ ಪಟೇಲ್ ಹೇಳಿದ್ದಾರೆ. ಈ ಷರತ್ತನ್ನು ಹಾರ್ದಿಕ್ ಅವರು ಸ್ವತಃ ಕಾಂಗ್ರೆಸ್ ಮುಂದೆ ಇಟ್ಟಿದ್ದಾರೆ.
ಗುಜರಾತ್‌ನಲ್ಲಿ ಚುನಾವಣೆಯ ಕಾವು ಏರುತ್ತಿದ್ದಂತೆ ಬೂದಿ ಮುಚ್ಚಿದ ಕೆಂಡದಂತಿದ್ದ “ಪಟೇಲ್ ಸಮುದಾಯದ ಕೋಟಾ’ ವಿಚಾರ ಮತ್ತೆ ಚಾಲ್ತಿಗೆ ಬಂದಿದೆ. ಈವರೆಗೆ ಬಿಜೆಪಿಯನ್ನು ಬೆಂಬಲಿಸುತ್ತಿದ್ದ ಪಟೇಲ ಸಮುದಾಯವನ್ನು ಈ ಬಾರಿಯ ಚುನಾವಣೆಯಲ್ಲಿ ತನ್ನ ತೆಕ್ಕೆಗೆ ಸೆಳೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ, ಅ. 23ರ ರಾತ್ರಿ ಗುಜರಾತ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಗೆಹೊÉàಟ್ ಹಾಗೂ ಹಾರ್ದಿಕ್ ಪಟೇಲ್ ಅವರಿಬ್ಬರ ನಡುವೆ ಮಾತುಕತೆ ನಡೆದಿದೆ. ಆ ಸಂದರ್ಭದಲ್ಲಿಯೇ, ಹಾರ್ದಿಕ್ ಅವರು ಗೆಹೊÉàಟ್‌ಗೆ ಮೀಸಲಾತಿ ಭರವಸೆಯ ಷರತ್ತನ್ನು ಮುಂದಿಟ್ಟಿದ್ದಾರೆಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.