ವಜ್ರಮಹೋತ್ಸವಕ್ಕೆ ವಿಧಾನಸೌಧ ಸಜ್ಜು
Team Udayavani, Oct 25, 2017, 6:00 AM IST
ಬೆಂಗಳೂರು: ವಿಧಾನಸೌಧ ವಜ್ರ ಮಹೋತ್ಸವ ಅಂಗವಾಗಿ ಬುಧವಾರ ರಾಜ್ಯ ವಿಧಾನ ಮಂಡಲದ ವಿಶೇಷ ಜಂಟಿ ಅಧಿವೇಶನ ನಡೆಯ ಲಿದ್ದು, ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿಯವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದು, ಅನಂತರ ವಿಧಾನ ಪರಿಷತ್ ಸಭಾಂಗಣ ವೀಕ್ಷಿಸಲಿ ದ್ದಾರೆ. ಬಳಿಕ ಉಭಯ ಸದನಗಳ ಸದಸ್ಯರೊಂದಿಗೆ ಫೋಟೋ ಸೆಷನ್ ನಡೆಯಲಿದೆ. ಅಪರಾಹ್ನ° 1.30ಕ್ಕೆ ಬ್ಯಾಂಕ್ವೆಟ್ ಸಭಾಂಗಣಕ್ಕೆ ಹೊಂದಿಕೊಂಡಿರುವ ಹುಲ್ಲು ಹಾಸಿನ ಮೇಲೆ ಭೋಜನ ವ್ಯವಸ್ಥೆ ಮಾಡಲಾಗಿದೆ.
ಮಧ್ಯಾಹ್ನ 3 ಗಂಟೆಗೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಿರ್ದೇಶಕ ಗಿರೀಶ್ ಕಾಸರವಳ್ಳಿ ನಿರ್ದೇಶನದ “ವಿಧಾನಸೌಧ ಕಟ್ಟಡ ನಿರ್ಮಾಣ’ ಸಾಕ್ಷ್ಯಾಚಿತ್ರ ಪ್ರದರ್ಶನ ಅನಂತರ ಟಿ.ಎನ್.ಸೀತಾರಾಂ ನಿರ್ದೇಶನದ “ಕರ್ನಾಟಕ ವಿಧಾನಮಂಡಲ ಶಾಸನಸಭೆ ನಡೆದು ಬಂದ ಹಾದಿ’ ಸಾಕ್ಷ್ಯಾಚಿತ್ರ ಪ್ರದರ್ಶನ ಹಾಗೂ ಮಾಸ್ಟರ್ ಕಿಶನ್ ನಿರ್ದೇಶನದ “ವಿಧಾನಸೌಧ 3 ಡಿ ವಚ್ಯುìಯಲ್ ರಿಯಾಲಿಟಿ ವಿಡಿಯೋ ಪ್ರದರ್ಶನ ನಡೆಯಲಿದೆ.
ಸಂಜೆ 5ರಿಂದ 6 ಗಂಟೆವರೆಗೆ ವಿಧಾನಸೌಧ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಾಡು-ನುಡಿ, ಕಲೆ ಸಂಸ್ಕೃತಿ, ಪರಂಪರೆ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಸಂಜೆ 6 ಗಂಟೆಗೆ ರಾಜ್ಯದ ಮಾಜಿ ಮುಖ್ಯಮಂತ್ರಿ ಗಳಾದ ಕೆ.ಸಿ.ರೆಡ್ಡಿ, ಕೆಂಗಲ್ ಹನುಮಂತಯ್ಯ, ಕಡಿದಾಳ್ ಮಂಜಪ್ಪ ಅವರ ಕುಟುಂಬ ಸದಸ್ಯರಿಗೆ ಗೌರವ ಸಮರ್ಪಣೆ. ಕಾರ್ಯಕ್ರಮದ ಅನಂತರ ವಿಧಾನಸೌಧ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ಸಂಗೀತ ನಿರ್ದೇಶಕ ಹಂಸಲೇಖ ತಂಡದಿಂದ ರಸಮಂಜರಿ ಕಾರ್ಯಕ್ರಮ ಹಾಗೂ ವಿಧಾನಸೌಧ ಕಟ್ಟಡದ ಮೇಲೆ 3ಡಿ ಮ್ಯಾಪಿಂಗ್ ಮೂಲಕ ಸರ್ಕಾರದ ಜನಪರ ಯೋಜನೆಗಳ ಚಿತ್ರ ಪ್ರದರ್ಶನ ನಡೆಯಲಿದೆ. ರಾಷ್ಟ್ರಪತಿಯವ ಉಪಸ್ಥಿತಿ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್ ಶಾಸಕರ ಪಟ್ಟು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ
Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.