ಭಾರತ್‌ಮಾಲಾಗೆ ಅಸ್ತು

Team Udayavani, Oct 25, 2017, 6:00 AM IST

j.jpg

ಹೊಸದಿಲ್ಲಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ “ಭಾರತ್‌ಮಾಲಾ’ ಸಹಿತ ಬರೋಬ್ಬರಿ 7 ಲಕ್ಷ ಕೋಟಿ ರೂ. ಮೌಲ್ಯದ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. 

ಭಾರತ್‌ಮಾಲಾ ಯೋಜನೆಯ ಮೊದಲ ಹಂತದಲ್ಲಿ 20,000 ಕಿಲೋ ಮೀಟರ್‌ ಹೆದ್ದಾರಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಸಾರಿಗೆ ಸಚಿವ ನಿತಿನ್‌ ಗಡ್ಕರಿ ಈ ಹಿಂದೆಯೇ ಘೋಷಿಸಿದ್ದರು. ಈಗ ಈ ಪ್ರಸ್ತಾವ‌ಕ್ಕೆ ಕೇಂದ್ರ ಸಂಪುಟದ ಒಪ್ಪಿಗೆ ದೊರೆತಿದ್ದು, ಭಾರತ್‌ಮಾಲಾ ಯೋಜನೆ ಯಡಿ ಒಟ್ಟು 34,800 ಕಿಲೋ ಮೀಟರ್‌ ಹೆದ್ದಾರಿ ನಿರ್ಮಾಣ ಆಗಲಿದೆ. ಉಳಿದ ಹೆದ್ದಾರಿ ಯೋಜನೆಗಳೂ ಸೇರಿ ಒಟ್ಟು 83,677 ಕಿಲೋ ಮೀಟರ್‌ನಷ್ಟು ದೂರದ ಹೆದ್ದಾರಿ ನಿರ್ಮಾಣವು ಸರಕಾರದ ಗುರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಎನ್‌ಎಚ್‌ಡಿಪಿ) ಬಳಿಕ ಅತೀ ದೊಡ್ಡ ಹೆದ್ದಾರಿ ನಿರ್ಮಾಣ ಯೋಜನೆ ಇದಾಗಿದೆ.

ಇದಷ್ಟೇ ಅಲ್ಲ. ಈ ಯೋಜನೆ ಮೂಲಕ ದೇಶದಲ್ಲಿ ಎದುರಾಗಿರುವ ನಿರುದ್ಯೋಗ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲು ನಿರ್ಧರಿಸಲಾಗಿದೆ. ಈ ಯೋಜನೆಯಿಂದಾಗಿ 14.2 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಲಿದೆ ಎಂದು ವಿತ್ತ ಸಚಿವ ಅರುಣ್‌ ಜೇಟಿÉ ಹೇಳಿದ್ದಾರೆ.

ನಿರ್ಮಾಣ ಸಲಹೆ ಯಾರದ್ದು?
ಅಷ್ಟಕ್ಕೂ ಈ ಯೋಜನೆಗೆ ಸಲಹೆ ನೀಡಿದ್ದು ಜಾಗತಿಕ ಸಲಹಾ ಸಂಸ್ಥೆ ಎಟಿ ಕೀಯರ್ನಿ. ಭಲೇ ಇತಿಹಾಸ ಹೊಂದಿರುವ ಏಳೆಂಟು ದಶಕಗಳ ಹಿಂದಿನ ಅಮೆರಿಕ ಮೂಲದ ಕಂಪೆನಿ ಇದಾಗಿದ್ದು, ಭಾರತದಲ್ಲಿಯೂ ಶಾಖೆ ಹೊಂದಿದೆ. 2014ರ ಅಂಕಿ-ಅಂಶದ ಪ್ರಕಾರ ಈ ಸಂಸ್ಥೆಯ ವಾರ್ಷಿಕ ಆದಾಯ ಅಂದಾಜು 7,200 ಕೋಟಿ. ರೂ. ಕಂಪೆನಿ 3,500 ಸಿಬಂದಿ ಹೊಂದಿದೆ. ಚಿಕಾಗೋದ ಫ್ರಾಂಕ್ಲಿನ್‌ ಸೆಂಟರ್‌ನಲ್ಲಿ ಪ್ರಧಾನ ಕಚೇರಿ ಹೊಂದಿದೆ.

ಪಿಎಸ್‌ಯು ಬ್ಯಾಂಕುಗಳಿಗೆ 2.11 ಲಕ್ಷ ಕೋಟಿ ಬಂಡವಾಳ
ಅನುತ್ಪಾದಕ ಆಸ್ತಿಯ ಬಿಕ್ಕಟ್ಟಿನಲ್ಲಿ ಸಿಲುಕಿ ರುವ ಸಾರ್ವಜನಿಕ ವಲಯದ ಬ್ಯಾಂಕು (ಪಿಎಸ್‌ಯು)ಗಳಿಗೆ ಮರುಜೀವ ತುಂಬಲು ನಿರ್ಧರಿಸಿರುವ ಕೇಂದ್ರ ಸರಕಾರವು, ಮುಂದಿನ 2 ವರ್ಷಗಳಲ್ಲಿ 2.11 ಲಕ್ಷ ಕೋಟಿ ರೂ.ಗಳ ಬಂಡವಾಳವನ್ನು ಪೂರೈಸಲಿದೆ. ಈ ಪೈಕಿ 1.35 ಲಕ್ಷ ಕೋಟಿಯನ್ನು ಮರುಬಂಡವಾಳೀಕರಣ ಬಾಂಡ್‌ಗಳ ರೂಪದಲ್ಲಿ ಹಾಗೂ ಉಳಿದ 76 ಸಾವಿರ ಕೋಟಿಯನ್ನು ಬಜೆಟ್‌ ನೆರವಿನ ರೂಪದಲ್ಲಿ ನೀಡಲಿದೆ ಎಂದು ಹಣಕಾಸು ಸೇವಾ ಕಾರ್ಯದರ್ಶಿ ರಾಜೀವ್‌ ಕುಮಾರ್‌ ಘೋಷಿಸಿದ್ದಾರೆ. ಮಂಗಳವಾರ ದಿಲ್ಲಿಯಲ್ಲಿ ದೇಶದ ಆರ್ಥಿಕತೆಗೆ ಸಂಬಂಧಿಸಿ ವಿವರ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಚಾರ ತಿಳಿಸಿದ್ದಾರೆ. ಬಾಂಡ್‌ಗಳ ಸ್ವರೂಪ ಮತ್ತಿತರ ವಿವರಗಳನ್ನು ಮುಂದಿನ ದಿನಗಳಲ್ಲಿ ಬಹಿರಂಗಪಡಿಸಲಾಗುವುದು ಎಂದೂ ಕುಮಾರ್‌ ಹೇಳಿದ್ದಾರೆ. ಜತೆಗೆ, ಇಂಧ್ರಧನುಷ್‌ ಯೋಜನೆಯನ್ವಯ ಬ್ಯಾಂಕುಗಳು 18 ಸಾವಿರ ಕೋಟಿ ರೂ.ಗಳನ್ನು ಪಡೆಯಲಿದೆ ಎಂದು ವಿತ್ತ ಸಚಿವ ಜೇಟಿÉ ತಿಳಿಸಿದ್ದಾರೆ.

ಜಿಎಸ್‌ಟಿ ದಂಡದಿಂದ ವಿನಾಯಿತಿ
ಇನ್ನೊಂದೆಡೆ ಕೇಂದ್ರ ಸರಕಾರವು ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ನಿಯಮವನ್ನು ಇನ್ನಷ್ಟು ಸಡಿಲಿಕೆ ಮಾಡಿದೆ. ಆಗಸ್ಟ್‌ ಹಾಗೂ ಸೆಪ್ಟಂಬರ್‌ ತಿಂಗಳ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಕೆ ವಿಳಂಬ ಮಾಡಿದವರಿಗೆ ದಂಡದಿಂದ ವಿನಾಯಿತಿ ನೀಡಲಾಗಿದೆ. ಅಲ್ಲದೆ ಈಗಾಗಲೇ ಪಡೆಯಲಾಗಿರುವ ದಂಡದ ಮೊತ್ತವನ್ನು ಮರುಪಾವತಿ ಮಾಡುವುದಾಗಿ ಕೇಂದ್ರ ವಿತ್ತ ಸಚಿವ ಅರುಣ್‌ ಜೇಟಿÉ ತಿಳಿಸಿದ್ದಾರೆ. ಈ ಹಿಂದೆ ಜುಲೈ ತಿಂಗಳ ದಂಡಕ್ಕೂ ವಿನಾಯಿತಿ ನೀಡಲಾಗಿತ್ತು. ಜಿಎಸ್‌ಟಿ ಕಾನೂನಿನನ್ವಯ ರಿಟರ್ನ್ಸ್ ಸಲ್ಲಿಕೆ ವಿಳಂಬವಾದರೆ ದಿನಕ್ಕೆ 100 ರೂ.ಗಳಂತೆ ದಂಡ ಪಡೆಯಲಾಗುತ್ತಿತ್ತು.

ಟಾಪ್ ನ್ಯೂಸ್

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.