ಬಿಜೆಪಿ ನಾಯಕರದು ಎರಡು ನಾಲಿಗೆ
Team Udayavani, Oct 25, 2017, 9:41 AM IST
ಬೆಂಗಳೂರು: “ಈ ಹಿಂದೆ ಟಿಪ್ಪು ವೇಷ ಹಾಕಿ ಫೋಟೊ ತೆಗೆಸಿಕೊಂಡು ಟಿಪ್ಪುನನ್ನು ಹೊಗಳಿರುವ ಬಿಜೆಪಿ ನಾಯಕರಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಅಶೋಕ್ ಅವರು ಈಗ ಟಿಪ್ಪು ದೇಶದ್ರೋಹಿ ಎನ್ನುತ್ತಿರುವುದೇಕೆ’ ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಬಿಜೆಪಿಯವರಿಗೆ ಎರಡು ನಾಲಿಗೆ ಇದೆ’ ಎಂದು ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ವಿಧಾನಸಭೆಗೆ ಚುನಾವಣೆ ಬರುತ್ತಿದೆ ಎಂಬ ಕಾರಣಕ್ಕೆ ಬಿಜೆಪಿಯವರು ಟಿಪ್ಪು ಜಯಂತಿಗೆ ವಿರೋಧ ಮಾಡುತ್ತಿದ್ದಾರೆ. ರಾಜ್ಯದ ಜನತೆ ಇದನ್ನು ಅರ್ಥ ಮಾಡಿಕೊಳ್ಳುವುದಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ. ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಟಿಪ್ಪು ವೇಷ ಹಾಕಿಕೊಂಡು, ಖಡ್ಗ ಹಿಡಿದು, ಅಲ್ಲಾನ ಮೇಲಾಣೆ ನಾನು ಮತ್ತೆ ಬಿಜೆಪಿಗೆ ಹೋಗುವುದಿಲ್ಲ ಎಂದು ಕೂಗಿದ್ದೇ ಕೂಗಿದ್ದು. ಇಂತಹ ರಾಜಕೀಯ ಇಬ್ಬಂದಿತನ ಜನರಿಗೂ ಗೊತ್ತಾಗುತ್ತದೆ.
ಆಗೊಂದು, ಈಗೊಂದು ನಾಟಕವಾಡುವ ಯಡಿಯೂರಪ್ಪ ಅವರ ಮಾತಿಗೆ ಕಿಮ್ಮತ್ತಿಲ್ಲ ಎಂದು ಹೇಳಿದರು.
ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿ ಅಶೋಕ್ ಉಪ ಮುಖ್ಯಮಂತ್ರಿಯಾಗಿ ಟಿಪ್ಪು ವೇಷ ಧರಿಸಿ ಹಾಡಿ ಹೊಗಳಿದ್ದರು. ಅಷ್ಟೇ ಅಲ್ಲ ಶೆಟ್ಟರ್, ಟಿಪ್ಪು ಪುಸ್ತಕಕ್ಕೆ ಮುನ್ನುಡಿ ಬರೆದಿದ್ದರು. ಈಗ ಟಿಪ್ಪುವನ್ನು ವಿರೋಧಿ ಸುತ್ತಿರುವುದು ರಾಜಕೀಯ ಪ್ರೇರಿತ ಎಂದರು. ರಾಜಕೀಯ ಕಾರಣಕ್ಕೆ ಟಿಪ್ಪು ಜಯಂತಿ ವಿರೋಧಿಸುವ ಬಿಜೆಪಿಯವರು ಹಿಂದು ಮುಸ್ಲಿಮರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ನಾಯಕರ ಈ ನಡವಳಿಕೆ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನವಾಗಿದ್ದು, ಕಾನೂನು ಕೈಗೆ ತೆಗೆದು
ಕೊಳ್ಳಲು ನಾವು ಬಿಡುವುದಿಲ್ಲ ಎಂದರು.
ಟಿಪ್ಪು ಜಯಂತಿ ಆಚರಣೆ ಸರ್ಕಾರದ ತೀರ್ಮಾನ. ಅದನ್ನು ವಿರೋಧಿಸುವವರಿಗೆ ಸಂವಿಧಾನ ಗೊತ್ತಿಲ್ಲ. ಜನಪ್ರತಿನಿಧಿಗಳಾಗಿ ಪ್ರಮಾಣ ವಚನ ಸ್ವೀಕಾರ ಮಾಡುವಾಗ ಸಂವಿಧಾನಕ್ಕೆ ಗೌರವ ನೀಡುವುದಾಗಿ ಹೇಳುತ್ತಾರೆ. ಈಗ ಈ ರೀತಿ ಅಗೌರವ ತೋರುತ್ತಾರೆ ಎಂದು ಹೇಳಿದರು.
ದೊಡ್ಡದು ಮಾಡೋದು ಸಲ್ಲ
ಹೂವಿನಹಡಗಲಿ: “ಟಿಪ್ಪು ಜಯಂತಿ ಆಚರಣೆ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಮಧ್ಯೆ ನಡೆಯುತ್ತಿರುವ ವಾಕ್ಸಮರ ಸರಿಯಲ್ಲ. ವಿನಾಕಾರಣ ಈ ವಿಷಯವನ್ನು ದೊಡ್ಡದು ಮಾಡಲಾಗುತ್ತಿದೆ’ ಎಂದು ಮಾಜಿ ಪ್ರಧಾನಿ ಎಚ್ .ಡಿ.ದೇವೇಗೌಡ ವಿಷಾದಿಸಿದರು. ಮಂಗಳವಾರ ಸುದ್ದಿಗಾರ ರೊಂದಿಗೆ ಮಾತನಾಡಿ, ಈ ಹಿಂದೆ ಕೆಜೆಪಿಯಲ್ಲಿದ್ದಾಗ ಬಿ.ಎಸ್. ಯಡಿಯೂರಪ್ಪ ಅವರು ಟಿಪ್ಪು ಜಯಂತಿ ಆಚರಿಸಿದರೆ ತಪ್ಪೇನಿಲ್ಲ ಎಂದು ಹೇಳಿದ್ದರು. ಈಗ ಕಾಂಗ್ರೆಸ್ನವರು ಅದನ್ನು ಆಚರಣೆ ಮಾಡುತ್ತಿದ್ದಾರೆ. ಈಗ
ಬಿಜೆಪಿಯವರು ಅದನ್ನೇ ದೊಡ್ಡದು ಮಾಡುತ್ತಿರುವುದು ಸರಿಯಲ್ಲ ಎಂದರು.
ಬಿಜೆಪಿಯಿಂದ ಆಯ್ಕೆಯಾದ ಕೇಂದ್ರದ ಮಂತ್ರಿಯೊಬ್ಬರು ನಾನು ಇಸ್ಲಾಂ ಧರ್ಮದ ಮತ ಕೇಳುವುದಿಲ್ಲ. ನನಗೆ ಅದರ
ಅವಶ್ಯಕತೆಯೂ ಇಲ್ಲ ಎಂದು ಹೇಳಿಕೆ ನೀಡಿರುವುದು ಸಂವಿಧಾನ ವಿರೋಧಿ ಕ್ರಮ. ಯಾರಾದರೂ ಸುಪ್ರೀಂಕೋಟ್ನಲ್ಲಿ ಈ ಕುರಿತು ಪ್ರಕರಣ ದಾಖಲಿಸಿದರೆ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಪರೋಕ್ಷವಾಗಿ ಕುಟುಕಿದರು.
ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಡಿ, ತನ್ನ ಮಕ್ಕಳನ್ನೇ ಒತ್ತೆ ಇಟ್ಟಿದ್ದ. ಬಿಜೆಪಿಯವರು ಸಮಾಜದಲ್ಲಿ ಜಗಳ ಹಚ್ಚುವ ಕೆಲಸವನ್ನು ಮಾಡುತ್ತಿದ್ದಾರೆ. 224 ಕ್ಷೇತ್ರಗಳಲ್ಲಿ ಬಿಜೆಪಿ ಒಂದು ಕಡೆಗೂ ಮುಸ್ಲಿಮರಿಗೆ ಟಿಕೆಟ್ ಕೊಟ್ಟಿಲ್ಲ. ಹಾಗಾಗಿ, ಅಲ್ಪಸಂಖ್ಯಾತರು ತಮ್ಮನ್ನು ಯಾರು ರಕ್ಷಣೆ ಮಾಡುತ್ತಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.
●ರುದ್ರಪ್ಪ ಲಮಾಣಿ, ಜವಳಿ ಹಾಗೂ ಮುಜರಾಯಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.