ನಗರದಲ್ಲಿ ಹೆಗ್ಗಡೆಯವರ ಪಟ್ಟಾಭಿಷೇಕದ 50ನೇ ವರ್ಷಾಚರಣೆ
Team Udayavani, Oct 25, 2017, 3:17 PM IST
ನಗರ: ಅಮೋಘ ಸೇವಾ ಕೈಂಕರ್ಯಗಳೊಂದಿಗೆ ಸಾಮಾಜಿಕ ಸ್ವಾಸ್ಥವನ್ನು ಕಾಪಾಡಲು ಶಿಕ್ಷಣವು ಅಗತ್ಯಎಂಬುದನ್ನು ಅರಿತುಕೊಂಡ ಡಾ| ಹೆಗ್ಗಡೆ ಯವರು ಎಲ್ಲರಿಗೂ ಪ್ರಾತಃ ಸ್ಮರಣೀಯರು ಎಂದು ಪ್ರಗತಿ ಸ್ಟಡಿ ಸೆಂಟರ್‌ನ ಸಂಚಾಲಕ ಪಿ. ವಿ.ಗೋಕುಲ್‌ನಾಥ್ ಹೇಳಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 50ನೇ ವರ್ಷಾಚರಣೆಯ ಸಲುವಾಗಿ ಸಂಸ್ಥೆಯಲ್ಲಿ ಹಮ್ಮಿಕೊಂಡ ಕಾರ್ಯ ಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೂರಾರು ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ನೀಡುವ ಮೂಲಕ ಇಡೀ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ನೇತೃತ್ವ ವಹಿಸಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರಗತಿ ಸ್ಟಡಿ ಸೆಂಟರ್‌ನ ಪರವಾಗಿ ಶುಭ ಹಾರೈಸಿದರು.
ಪ್ರಗತಿ ಸಂಸ್ಥೆಯನ್ನು ಧರ್ಮಸ್ಥಳ ಬಿಲ್ಡಿಂಗ್‌ಗೆ ಸ್ಥಳಾಂತರಿಸುವ ಸಂದರ್ಭದಲ್ಲಿ ಹಾಗೂ ಇಂದಿನವರೆಗೂ ಅವರ ಅನುಗ್ರಹ,
ಮಾರ್ಗದರ್ಶನ ಹಾಗೂ ಸಹಕಾರಗಳಿಗಾಗಿ ಅವರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಭಾಗ್ಯಗಳು ಲಭಿಸುವಂತಾಗಲಿ ಎಂದು ಹಾರೈಸಿದರು.
ಈ ಸಂದರ್ಭ ಪ್ರಾಂಶುಪಾಲೆ ಕೆ. ಹೇಮಲತಾ ಗೋಕುಲ್‌ನಾಥ್ ಉಪಸ್ಥಿತರಿದ್ದರು. ಸಮಾಜಶಾಸ್ತ್ರ ಉಪನ್ಯಾಸಕಿ ರೇಣುಕಾ, ಆಂಗ್ಲಭಾಷಾ ಉಪನ್ಯಾಸಕಿ, ತನುಜಾ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ಪ್ರತಿಭಾ ವಂದಿಸಿದರು. ಗೀತಾ ಕೊಂಕೊಡಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕರು, ಸಿಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಹಕರಿಸಿದರು.
ಪರಿಸರ ಸ್ವಚ್ಛತೆ
ಪಟ್ಟಾಭಿಷೇಕದ ಅಂಗವಾಗಿ ಧರ್ಮಸ್ಥಳ ಬಿಲ್ಡಿಂಗ್, ಪರಿಸರದಲ್ಲಿ ಪ್ರಗತಿ ಸ್ಟಡಿ ಸೆಂಟರ್ ನ ಸಂಚಾಲಕ ಪಿ. ವಿ. ಗೋಕುಲ್‌ನಾಥ್ ಅವರ ನೇತೃತ್ವದಲ್ಲಿ, ಉಪನ್ಯಾಸಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಕಣ್ಣಿಗೆ ಕಾಣುವ ದೇವರು
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಕ್ಷೇ. ಧ. ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯ ಸಹಾಯಕ ಅಧಿಕಾರಿ ಶುಭಾ ಉದಯ ರೈ ಮಾತನಾಡಿ, ಕಣ್ಣಿಗೆ ಕಾಣುವ ದೇವರೆಂದೇ ಕರೆಸಿಕೊಳ್ಳುತ್ತಿರುವ ಖಾವಂದರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾವಿರಾರು ಬಡ ಕುಟುಂಬಗಳ ಮನೆಯ ಬೆಳಕಾದವರು. ಅವರು ನಮಗೆಲ್ಲ ಪ್ರೇರಣೆ, ಚೈತನ್ಯ ನೀಡುವಂತಾಗಲಿ ಎಂದು ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.