ನ.8: ಬಿಜೆಪಿಯಿಂದ ಎಲ್ಲ ರಾಜ್ಯಗಳಲ್ಲಿ ಕಾಳಧನ ವಿರೋಧಿ ದಿನಾಚರಣೆ
Team Udayavani, Oct 25, 2017, 7:04 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು 500 ಹಾಗೂ 1,000 ರೂ. ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿದ ಒಂದು ವರ್ಷದ ತರುವಾಯ ಭಾರತೀಯ ಜನತಾ ಪಕ್ಷ ನವೆಂಬರ್ 8ರಂದು ಎಲ್ಲ ರಾಜ್ಯಗಳಲ್ಲಿ ಕಪ್ಪು ಹಣ ವಿರೋಧಿ ದಿನವನ್ನು ಆಚರಿಸಲಿದೆ.
“ಕಾಂಗ್ರೆಸ್ ಸರಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯಲು ಸಾಕಷ್ಟು ಅವಕಾಶಗಳಿದ್ದವು. ಆದರೆ ಅದು ಕಪ್ಪು ಹಣದ ವಿರುದ್ಧ ಯಾವುದೇ ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ” ಎಂದು ಹಣಕಾಸು ಸಚಿವ ಅರುಣ್ ಜೇತ್ಲಿ ಅವರು ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು.
ನವೆಂಬರ್ 8ರಂದು ನೋಟು ಅಮಾನ್ಯ ಒಂದು ವರ್ಷ ಪೂರೈಸಲಿದ್ದು ಅಂದು ವಿರೋಧ ಪಕ್ಷಗಳು ದೊಡ್ಡ ಮಟ್ಟದಲ್ಲಿ ಸರಕಾರದ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸುವ ಸಿದ್ಧತೆಯಲ್ಲಿವೆ. ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ದಿಲ್ಲಿಯಲ್ಲಿ ಅಂದು ಸರಕಾರದ ಆರ್ಥಿಕ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಲಿವೆ.
ಈ ಬಗ್ಗೆ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕರಾಗಿರುವ ಗುಲಾಂ ನಬಿ ಆಜಾದ್ ಅವರನ್ನು ಕಾಂಗ್ರೆಸ್ ಪಕ್ಷ, ವಿರೋಧ ಪಕ್ಷೀಯರೊಡನೆ ಸಮಾಲೋಚನೆ ನಡೆಸಿ ಪ್ರತಿಭಟನೆ ಕಾರ್ಯಕ್ರಮ ವೈಖರಿಯನ್ನು ಅಂತಿಮಗೊಳಿಸಿ ಗುರುವಾರ ಬೆಳಗ್ಗೆ 11.30ಕ್ಕೆ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
Scientists: ಕೋಳಿ ಮೊದಲಾ, ಮೊಟ್ಟೆ ಮೊದಲಾ?: ಇಲ್ಲಿದೆ ಉತ್ತರ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.