ಉಗ್ರತ್ವ ಬಿಡಿ: ಪಾಕ್ಗೆ ಅಮೆರಿಕ
Team Udayavani, Oct 26, 2017, 6:45 AM IST
ಹೊಸದಿಲ್ಲಿ: ಉಗ್ರರನ್ನು ಪೋಷಿಸಿದರೆ ಸಹಿಸಲಾಗದು ಎಂದು ಪಾಕಿಸ್ತಾನಕ್ಕೆ ಭಾರತ ಮತ್ತು ಅಮೆರಿಕ ಎಚ್ಚರಿಸಿದೆ. ಅಲ್ಲದೆ, ಪಾಕ್ ಸರಕಾರಕ್ಕೂ ಮಾರಕವಾಗಿರುವ ಉಗ್ರ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಅಮೆರಿಕದ ವಿದೇಶಾಂಗ ಸಚಿವ ರೆಕ್ಸ್ ಟಿಲ್ಲರ್ಸನ್ ಆಗ್ರಹಿಸಿದ್ದಾರೆ.
ಭಾರತ ಪ್ರವಾಸದಲ್ಲಿರುವ ಅಮೆರಿಕ ವಿದೇಶಾಂಗ ಸಚಿವ ನವದೆಹಲಿಯಲ್ಲಿ ಸ್ವರಾಜ್ ಜತೆಗಿನ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಒತ್ತಾಯ ಮಾಡಿದ್ದಾರೆ. ಇದಾದ ಬಳಿಕ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಎರಡೂ ದೇಶಗಳು ಸಮಾನವಾಗಿ ಅನುಭವಿಸುವ ಭಯೋತ್ಪಾದನೆ, ಉಗ್ರರಿಗೆ ನೆರವು ನೀಡುವ ಸಂಸ್ಥೆಗಳ ಬಗ್ಗೆ ನಿಗ್ರಹಿಸಲು ಕ್ರಮ ಕೈಗೊಳ್ಳಬೇಕಾದ್ದು ಅಗತ್ಯ ಎಂದರು ಪ್ರಧಾನಿ. ಸಚಿವರಾದ ನಂತರ ಇದೇ ಮೊದಲ ಬಾರಿಗೆ ಟಿಲ್ಲರ್ಸನ್ ಭಾರತಕ್ಕೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.