ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ನಿರಂತರ


Team Udayavani, Oct 26, 2017, 8:17 AM IST

26-7.jpg

ಬೆಂಗಳೂರು: ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನ್ಯ ಹೆಚ್ಚುತ್ತಲೇ ಇದೆ. 2016ರಲ್ಲಿ ಪ್ರತಿ 2 ದಿನಕ್ಕೆ ಒಬ್ಬ ದಲಿತ ಹಾಗೂ ಆದಿವಾಸಿ ಮಹಿಳೆ ಅತ್ಯಾಚಾರಕ್ಕೆ ಒಳಗಾಗುತ್ತಿದ್ದ ಆಘಾತಕಾರಿ ಅಂಶವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ದೌರ್ಜನ್ಯತಡೆ) ಕಾಯ್ದೆ 1989ರ ಅನುಷ್ಠಾನ -2016ರ ಸಾಲಿನ ರಾಜ್ಯ ವರದಿ ಬಹಿರಂಗಪಡಿಸಿದೆ.

ನಗರದಲ್ಲಿ ಬುಧವಾರ ಪರಿಶಿಷ್ಟಜಾತಿ ಮತ್ತು ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನೆ ಸಮಿತಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಟಿ ಭಾವನಾ ಈ ವರದಿ ಬಿಡುಗಡೆ ಮಾಡಿದರು. ರಾಜ್ಯದಲ್ಲಿ ಪ್ರತಿ 4 ಗಂಟೆಗೆ ಒಬ್ಬ ದಲಿತ ದೌರ್ಜನ್ಯಕ್ಕೆ ಒಳಗಾಗುತ್ತಿದ್ದು, ಪ್ರತಿ 5 ದಿನಕ್ಕೆ ಒಬ್ಬ ದಲಿತನ ಕೊಲೆ ನಡೆದಿದೆ. ಜಾತಿ ವಿಷಯವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 8 ಮಂದಿ ದಲಿತರು ಕೊಲೆಯಾಗಿರುವುದು ರಾಜ್ಯದಲ್ಲಿ ಹೆಚ್ಚು. ದಲಿತ ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲಿ ಶಿವಮೊಗ್ಗ ಜಿಲ್ಲೆ ಅಗ್ರಸ್ಥಾನದಲ್ಲಿದ್ದು, 16 ಪ್ರಕರಣಗಳು ದಾಖಲಾಗಿವೆ ಎಂಬುದನ್ನು ಉಲ್ಲೇಖೀಸಿದೆ.

2016ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ 1,912 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 1,526 ಪ್ರಕರಣ ಎಸ್‌ಸಿ ಹಾಗೂ 386 ಪ್ರಕರಣ ಎಸ್‌ಟಿಗಳ ಮೇಲೆ ನಡೆದಿದೆ. ಒಂದು ವರ್ಷದಲ್ಲಿ 164 ಅತ್ಯಾಚಾರ ಪ್ರಕರಣ ದಾಖಲಾಗಿದೆ. ಜಾತಿ ವಿಚಾರವಾಗಿ 78 ಮಂದಿ ಸಾವನ್ನಪ್ಪಿರುವಿದಾಗಿ ತಿಳಿಸಿದ್ದಾರೆ. ದಲಿತರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ 1,096 ಪ್ರಕರಣಗಳ 53 ಪ್ರಕರಣದಲ್ಲಿ ಮಾತ್ರ ಆರೋಪಿಗಳಿಗೆ ಶಿಕ್ಷೆಯಾಗಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ 955 ಪ್ರಕರಣಗಳು ಖುಲಾಸೆಗೊಂಡಿವೆ. 1,912 ಪ್ರಕರಣಗಳಲ್ಲಿ 199 ಪ್ರಕರಣ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ಶೇ. 81.40 ವ್ಯಾಜ್ಯಗಳು ಇತ್ಯರ್ಥಗೊಂಡಿಲ್ಲ ಎಂಬುದು ವರದಿಯಲ್ಲಿದೆ. 

ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾ ಗಲು ಜಿಲ್ಲಾ ಪೊಲೀಸ್‌ ಮತ್ತು ಜಿಲ್ಲಾಧಿಕಾರಿಗಳ ವೈಫ‌ಲ್ಯವೇ ಕಾರಣ. ದಲಿತರಿಗೆ ಸೂಕ್ತ ರಕ್ಷಣೆ ಕೊಡುವಲ್ಲ ಜಿಲ್ಲಾಡಳಿತ ವಿಫ‌ಲವಾಗುತ್ತಿದೆ. ಅಂತಹ ಜಿಲ್ಲೆಯ ಸಂಬಂಧಪಟ್ಟ ಅಧಿಕಾರಿಗಳನ್ನು ವಜಾಗೊಳಿಸಬೇಕು. ಈ ಪ್ರಕರಣಗಳ ಇತ್ಯರ್ಥಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು. ಅಸ್ಪೃಶ್ಯತೆಯ ಆಚರಣೆ ಕುರಿತು ಸಮೀಕ್ಷೆ ನಡೆಸುವ ಹಾಗೂ ಇತರೆ ಪ್ರಮುಖ ಅಂಶಗಳ ಕುರಿತು ಕೂಡಲೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಂದು ಸಮಿತಿ ಸಂಚಾಲಕಿ ಪಿ.ಯಶೋಧಾ ಆಗ್ರಹಿಸಿದರು.

ರಾಜಕೀಯ ಪಕ್ಷಗಳು ದಲಿತರನ್ನು ವೋಟ್‌ ಬ್ಯಾಂಕ್‌ಗಾಗಿಯೇ ಬಳಸಿಕೊಳ್ಳುತ್ತಿದ್ದಾರೆ ವಿನಃ ಯಾರೂ ಕೂಡ ಅವರ ಉದ್ಧಾರಕ್ಕಾಗಿ ನೈಜ ಹೋರಾಟ ಮಾಡುತ್ತಿಲ್ಲ. ಚುನಾವಣೆ ವೇಳೆ ದಲಿತರು ಇದನ್ನು ಅರ್ಥಮಾಡಿಕೊಳ್ಳಬೇಕು.
 ●ಡಾ.ಆರ್‌.ಕಾವಲಮ್ಮ, ಸಹ ಪ್ರಾಧ್ಯಾಪಕಿ

ನಮ್ಮಲ್ಲಿನ ಪ್ರಯತ್ನ ಹಾಗೂ ದಿಟ್ಟತನದಿಂದ ಮಾತ್ರ ದೌರ್ಜನ್ಯದ ವಿರುದ್ಧ ಹೋರಾಟ ಮಾಡಲು ಸಾಧ್ಯ. ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು.
 ●ಭಾವನಾ, ನಟಿ

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.