ಮಾಯಾವತಿಗೆ ಜಾದೂ ಕೀ ಝಪ್ಪಿ: ಸಂಜಯ್ ದತ್‌ಗೆ ಸಮನ್ಸ್
Team Udayavani, Oct 26, 2017, 5:02 PM IST
ಬಾರಾಬಂಕಿ : ಬಾಲಿವುಡ್ ನಟ ಸಂಜಯ್ ದತ್‌ಗೆ ಹೊಸ ಸಂಕಷ್ಟವೊಂದು ಎದುರಾಗಿದೆ. 2009ರ ಲೋಕಸಭಾ ಚುನಾವಣೆಯ ಪ್ರಚಾರಾಭಿಯಾನದಲ್ಲಿ ಬಿಎಸ್‌ಪಿ ನಾಯಕಿ ಮಾಯಾವತಿಗೆ “ಜಾದೂ ಕೀ ಝಪ್ಪಿ’ ನೀಡಿದ್ದ ಸಂಜಯ್ ದತ್‌ಗೆ ಇದೀಗ ಉತ್ತರ ಪ್ರದೇಶದ ನ್ಯಾಯಾಲಯವೊಂದು ಸಮನ್ಸ್ ಜಾರಿ ಮಾಡಿದೆ.
ಸಮಾಜವಾದಿ ಪಕ್ಷದ ಅಭ್ಯರ್ಥಿಯ ಪರವಾಗಿ ಸಾರ್ವಜನಿಕ ಭಾಷಣದಲ್ಲಿ ಮಾಯಾವತಿ ಅವರನ್ನು ಹೀಗಳೆಯುತ್ತಾ ತನ್ನ ಜನಪ್ರಿಯ “ಜಾದೂ ಕೀ ಝಪ್ಪಿ’ ಡಯಲಾಗ್ ಉಚ್ಚರಿಸುವ ಮೂಲಕ ಮುನ್ನಾ ಭಾಯಿ ಎಂಬಿಬಿಎಸ್ ನಟ ಸಂಜಯ್ ದತ್, ಭಾರೀ ದೊಡ್ಡ ಜನಸ್ತೋಮವನ್ನು ನಗೆಗಡಲಲ್ಲಿ ಮುಳುಗಿಸಿದ್ದರು. ‘ಬಿಜೆಪಿ ಮುಖ್ಯಸ್ಥೆ ಮಾಯಾವತಿಗೂ ನಾನು ಜಾದೂ ಕೀ ಝಪ್ಪಿ ನೀಡಬಯಸುತ್ತೇನೆ’ ಎಂದು ದತ್ ಹೇಳಿದ್ದರು.
ಈ ಭಾಷಣ ಕಾರ್ಯಕ್ರಮದ ವಿಡಿಯೋವನ್ನು ಜಿಲ್ಲಾಡಳಿತ ಚಿತ್ರೀಕರಿಸಿಕೊಂಡಿತ್ತು. ಇದರ ಆಧಾರದಲ್ಲಿ ದೂರು ದಾಖಲಿಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟರರು ಆದೇಶಿಸಿದ್ದರು. ಮಾಸೋಲಿ ಪೊಲೀಸ್ ಠಾಣೆಯ ಪ್ರಭಾರಾಧಿಕಾರಿ ವಿನಯ್ ಮಿಶ್ರಾ ಅವರು ಸಂಜಯ್ ದತ್ ವಿರುದ್ಧ ದೂರು ದಾಖಲಿಸಿದ್ದರು.
ಅಂತೆಯೇ ಇದೀಗ ಈ ಪ್ರಕರಣದಲ್ಲಿ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಸಂಜಯ್ ಯಾದವ್ ಅವರು ದತ್‌ಗೆ ಸಮನ್ಸ್ ಜಾರಿ ಮಾಡಿದ್ದಾರೆ. ಈ ಸಮನ್ಸನ್ನು ದತ್‌ಗೆ ತಲುಪಿಸುವಂತೆ ಮುಂಬಯಿ ಕಮಿಷನರ್‌ಗೆ ಆದೇಶಿಸಿದ್ದಾರೆ. ಜತೆಗೆ ನವೆಂಬರ್ 16ರಂದು ತನ್ನ ಮುಂದೆ ಹಾಜರಾಗುವಂತೆಯೂ ಅವರು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.