ಶೆಟ್ಟರ್, ಈಶ್ವರಪ್ಪ ರಾಷ್ಟ್ರಪತಿ ಕ್ಷಮೆ ಕೋರಲಿ: ಉಗ್ರಪ್ಪ
Team Udayavani, Oct 27, 2017, 7:00 AM IST
ಬೆಂಗಳೂರು: ಟಿಪ್ಪು ಸುಲ್ತಾನ್ ವಿಚಾರ ಮುಂದಿಟ್ಟುಕೊಂಡು ದೇಶದ ಪ್ರಥಮ ಪ್ರಜೆಯ ಬಗ್ಗೆ ಕೊಂಕು ಮಾತುಗಳನ್ನಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಕೂಡಲೇ ರಾಷ್ಟ್ರಪತಿಗಳ ಕ್ಷಮೆ ಕೇಳಬೇಕು ಎಂದು ವಿಧಾನಪರಿಷತ್ತಿನ ಕಾಂಗ್ರೆಸ್ ಸದಸ್ಯ ವಿ.ಎಸ್. ಉಗ್ರಪ್ಪ ಆಗ್ರಹಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ರಾಜ್ಯದ ಇತಿಹಾಸದ ಬಗ್ಗೆ ಸ್ಪಷ್ಟ ಸಂಗತಿಗಳನ್ನು ಜನತೆಯ ಮುಂದಿಟ್ಟಿದ್ದಾರೆ.
ಆದರೆ, ಅವರ ಬಗ್ಗೆ ಕೊಂಕು ಮಾತನಾಡುವ ಮೂಲಕ ಬಿಜೆಪಿ ಮುಖಂಡರು ತಮ್ಮ ಬೌದಿಟಛಿಕ ದಿವಾಳಿತನ ತೋರಿಸಿದ್ದಾರೆ. ಅಲ್ಲದೆ, ಬಿಜೆಪಿ ಮುಖಂಡರು ರಾಷ್ಟ್ರಪತಿಗೆ ಅವಮಾನ ಮಾಡಿದ್ದಾರೆ ಎಂದರು. ವಜ್ರ ಮಹೋತ್ಸವ ಸಂದರ್ಭದಲ್ಲಿ ನಡೆದದ್ದು ಜಂಟಿ ಅಧಿವೇಶನ ಅಲ್ಲ. ಜಂಟಿ ಸಭೆಯಷ್ಟೇ. ಏಕೆಂದರೆ ಜಂಟಿ ಅಧಿವೇಶನ ನಡೆಯಬೇಕಾದರೆ ಸಚಿವ ಸಂಪುಟದ ಅನುಮೋದನೆ ಸಿಗಬೇಕು. ಆದರೆ, ಬುಧವಾರ ನಡೆದ ಅಧಿವೇಶನಕ್ಕೆ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿರಲಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್ಖಾನ್ಗೆ ಲೋಕಾಯುಕ್ತದಿಂದ ನೋಟಿಸ್
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.