ಪಡಿತರ ನಿರಾಕರಣೆ ಬೇಡ: ಕೇಂದ್ರ ಸೂಚನೆ
Team Udayavani, Oct 27, 2017, 6:00 AM IST
ಹೊಸದಿಲ್ಲಿ: ಝಾರ್ಖಂಡ್ನಲ್ಲಿ ಆಧಾರ್ ಇಲ್ಲದ್ದಕ್ಕಾಗಿ ಕುಟುಂಬವೊಂದಕ್ಕೆ ಪಡಿತರ ನಿರಾಕರಿಸಿದ್ದರಿಂದ 11 ವರ್ಷದ ಮಗು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಎಚ್ಚೆತ್ತ ಕೇಂದ್ರ ಸರಕಾರ, ಆಧಾರ್ ಸಂಖ್ಯೆಯನ್ನು ಪಡಿತರ ಚೀಟಿಗೆ ಜೋಡಿಸಿಲ್ಲ ಅಥವಾ ಆಧಾರ್ ಕಾರ್ಡ್ ಹೊಂದಿಲ್ಲ ಎಂಬ ಕಾರಣಕ್ಕೆ ಆಹಾರ ಧಾನ್ಯ ನಿರಾಕರಿಸಬೇಡಿ ಎಂದು ರಾಜ್ಯ ಸರಕಾರಗಳಿಗೆ ಸೂಚಿಸಿದೆ. ಆಧಾರ್ ಇಲ್ಲದ ಕಾರಣಕ್ಕೆ ಫಲಾನುಭವಿಗಳ ಪಟ್ಟಿಯಿಂದ ಅರ್ಹ ಕುಟುಂಬದ ಹೆಸರನ್ನು ಅಳಿಸಬಾರದು
ಎಂದೂ ಕೇಂದ್ರ ಸರಕಾರ ಸೂಚಿಸಿದೆ. ಹೀಗೆ ಮಾಡಿದಲ್ಲಿ ಕಠಿನ ಕ್ರಮ ಎಚ್ಚರಿಕೆಯನ್ನೂ ಕೇಂದ್ರ ನೀಡಿದೆ.
ಪಡಿತರ ಚೀಟಿಗೆ ಅರ್ಹತೆ ಹೊಂದಿಲ್ಲ ಎಂಬುದು ಖಚಿತವಾದ ಅನಂತರ ಮಾತ್ರವೇ ಪಡಿತರ ಫಲಾನುಭವಿಗಳ ಪಟ್ಟಿಯಿಂದ ವ್ಯಕ್ತಿಯ ಹೆಸರನ್ನು ಅಳಿಸಬೇಕು. ಫಲಾನುಭವಿ ಅರ್ಹವಾಗಿದ್ದಲ್ಲಿ ಯಾವುದೇ ಕಾರಣಕ್ಕೂ ಪಡಿತರ ನಿರಾಕರಿಸಬಾರದು ಎಂದು ರಾಜ್ಯಗಳಿಗೆ ಸೂಚಿಸಲಾಗಿದೆ. ಪಡಿತರ ಚೀಟಿಯೊಂದಿಗೆ ಆಧಾರ್ ಜೋಡಿಸಲು ಡಿಸೆಂಬರ್ವರೆಗೆ ಅವಕಾಶ ನೀಡಲಾಗಿದ್ದು, ಆಧಾರ್ ಹೊಂದಿಲ್ಲದವರಿಗಾಗಿ ಈ ಗಡುವನ್ನು ಮುಂದಿನ ಮಾ. 31ರವರೆಗೆ ವಿಸ್ತರಿಸಲಾಗಿದೆ. ಈವರೆಗೆ ಶೇ.82ರಷ್ಟು ಪಡಿತರ ಚೀಟಿಗಳಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.