ಗಾಂಜಾ ಮಾರುತ್ತಿದ್ದ ಉಗಾಂಡ ಪ್ರಜೆಯ ಸೆರೆ
Team Udayavani, Oct 27, 2017, 11:01 AM IST
ಬೆಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಉಗಾಂಡ ಮೂಲದ ಯುವಕನನ್ನು ಯಲಹಂಕ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಗೋಲಾ ಜಾನ್ (25) ಬಂಧಿತ ಆರೋಪಿ. ಆರೋಪಿ ಇತ್ತೀಚೆಗೆ ಯಲಹಂಕದ ಬಿಬಿಎಂಪಿ ಪಾರ್ಕ್ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.
ವೇಳೆ ಆರೋಪಿಯಿಂದ 300 ಗ್ರಾಂ. ಗಾಂಜಾ, 95 ಸಾವಿರ ರೂ. ನಗದು, ಒಂದು ಸ್ಯಾಮ್‌ಸಂಗ್ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು. ಆರೋಪಿ ಮಂಗೋಲಾ ಕೆಲ ವರ್ಷಗಳ ಹಿಂದೆ ವಿಧ್ಯಾಭ್ಯಾಸದ ವೀಸಾದ ಅಡಿಯಲ್ಲಿ ನಗರಕ್ಕೆ ಬಂದಿದ್ದು, ಕಟ್ಟಿಗೆಹಳ್ಳಿಯಲ್ಲಿ ಸ್ನೇಹಿತರ ಜತೆ ವಾಸವಿದ್ದಾನೆ.
ಆರೋಪಿ ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿರುವ ಮಾಹಿತಿಯಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೂಂದು ಪ್ರಕರಣದಲ್ಲಿ ರೈಲು ನಿಲ್ದಾಣದ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಯಲಹಂಕ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಕೋಗಿಲು ಲೇಔಟ್ ನಿವಾಸಿಗಳಾದ ಮುಜಾಯಿಲ್ ಪಾಷ (27), ಬಾಬು (27) ಬಂಧಿತರು. ಗುರುವಾರ ರೈಲು ನಿಲ್ದಾಣದ ಬಳಿ ಸಾರ್ವಜನಿಕರಿಗೆ ಚಿಕ್ಕ ಚಿಕ್ಕ ಗಾಂಜಾ ಪ್ಯಾಕೇಟ್‌ಗಳನ್ನು ಮಾರಾಟ ಮಾಡುತ್ತಿದ್ದ ಮಾಹಿತಿ ಆಧರಿಸಿ ಇಬ್ಬರನ್ನೂ ಬಂಧಿಸಲಾಗಿದೆ. ಆರೋಪಿಗಳಿಂದ 400 ಗ್ರಾಂ. ಗಾಂಜಾ ಜಪ್ತಿ ಮಾಡಿಕೊಂಡಳ್ಳಲಾಗಿದೆ. ಅರೋಪಿಗಳು ಈ ಹಿಂದೆಯೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.