ಚಿಣ್ಣರಬಿಂಬ ಪೊವಾಯಿ ವಲಯದ ಪಾಲಕರಿಗೆ ಚರ್ಚಾ ಕಾರ್ಯಕ್ರಮ


Team Udayavani, Oct 27, 2017, 11:12 AM IST

25-Mum02b.jpg

ಮುಂಬಯಿ: ಚಿಣ್ಣರ ಬಿಂಬ ಮುಂಬಯಿ ಇದರ ಪೊವಾಯಿ ವಲಯದ ಶಿಬಿರಗಳ ಮಕ್ಕಳ ಪ್ರತಿಭಾ ಸ್ಪರ್ಧೆಯು ಅ. 22ರಂದು ಅಪರಾಹ್ನ ಪೊವಾಯಿ ಎಸ್‌ಎಂ ಶೆಟ್ಟಿ ಶಿಕ್ಷಣ ಸಂಕುಲದ ಸಭಾಗೃಹದಲ್ಲಿ ನಡೆಯಿತು.

ಎಸ್‌ಎಂ ಶೆಟ್ಟಿ ಶಿಕ್ಷಣ ಸಂಕುಲದಲ್ಲಿ ಉಮಾಮಹೇಶ್ವರಿ, ಗೀತಾಂಬಿಕಾ ಹಾಗೂ ಎಸ್‌ಎಂ ಶೆಟ್ಟಿ ಪೊವಾಯಿ ವಲಯದ ಪಾಲಕರ ಚರ್ಚೆಯು ನೆರೆದ ಸಭಿಕರ ಮೆಚ್ಚುಗೆಯನ್ನು ಪಡೆಯಿತು. ಮನೆಕೆಲಸದಲ್ಲಿ ಪುರುಷರು ಮಹಿಳೆಗೆ ಸಹಕರಿಸಬೇಕು ಹಾಗೂ ಸಹಕರಿಸಬಾರದು ಎಂಬ ವಿಷಯದಲ್ಲಿ ಚರ್ಚೆ  ಏರ್ಪಟ್ಟಿತ್ತು. ಇಲ್ಲಿ ಪುರುಷರು ಮತ್ತು ಮಹಿಳೆಯರ  ತಂಡವನ್ನು ಚಿಣ್ಣರ ಬಿಂಬದ ರೂವಾರಿ ಪ್ರಕಾಶ್‌  ಭಂಡಾರಿಯವರು ರೂಪಿಸಿ ವಿಷಯದ ಪರವಾಗಿ ಸ್ತ್ರೀಯರು ಹಾಗೂ ವಿಷಯದ ವಿರುದ್ಧವಾಗಿ ಪುರುಷರ ನಡುವೆ ಚರ್ಚೆ ನಡೆಯಿತು.

ಪುರುಷರ ತಂಡದಲ್ಲಿ ಕವಿ, ಕತೆಗಾರ ಪೇತ್ರಿ ವಿಶ್ವನಾಥ ಶೆಟ್ಟಿ,  ರಮೇಶ ರೈ ಕೈಯಾರುಗುತ್ತು,  ಸಂಜೀವ ಪೂಜಾರಿ ತೋನ್ಸೆ, ಭಾಸ್ಕರ ಸುವರ್ಣ ಸಸಿಹಿತ್ಲು,  ಪ್ರಕಾಶ್‌  ರೈ, ಪ್ರಭಾಕರ ಶೆಟ್ಟಿ ಪಣಿಯೂರು ಅವರು ಪಾಲ್ಗೊಂಡಿದ್ದರು. ಮಹಿಳಾ ತಂಡದಲ್ಲಿ ಪ್ರಶಾಂತಿ ಡಿ. ಶೆಟ್ಟಿ, ಸವಿತಾ ಕೆ. ಶೆಟ್ಟಿ, ಶೋಭಾ ಶೆಟ್ಟಿ, ಪುಷ್ಪಾ ಶೆಟ್ಟಿ, ಅನಿತಾ ಎಸ್‌. ಶೆಟ್ಟಿ ಹಾಗೂ ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಭಾಗವಹಿಸಿದ್ದರು. ಸತೀಶ್‌ ಸಾಲ್ಯಾನ್‌ ಅವರು ಸಮನ್ವಯಕರಾಗಿ ಚರ್ಚೆಯನ್ನು ನಡೆಸಿಕೊಟ್ಟರು.

ಚಿಣ್ಣರ ಬಿಂಬದ ರೂವಾರಿಗಳಾದ ಪ್ರಕಾಶ್‌ ಭಂಡಾರಿ, ಸುರೇಂದ್ರ ಕುಮಾರ ಹೆಗ್ಡೆ, ರೇಣುಕಾ ಭಂಡಾರಿ, ಮುದ್ರಾಡಿ ದಿವಾಕರ ಶೆಟ್ಟಿ, ಸತೀಶ್‌ ಶೆಟ್ಟಿ ಪೆನಿನ್ಸುಲಾ, ಚಂದ್ರಹಾಸ ರೈ ಬೊಳ್ನಾಡುಗುತ್ತು, ಡಾ| ಕರುಣಾಕರ ಶೆಟ್ಟಿ ಪಣಿಯೂರು, ನಾಗರಾಜ ಗುರುಪುರ ಮೊದಲಾದ ಗಣ್ಯರು ಹಾಗೂ  ಚಿಣ್ಣರ ಬಿಂಬದ ಥಾಣೆ,  ಕಲ್ವಾ, ಘೋಡ್‌ಬಂದರ್‌, ಪೇಜಾವರ ಹೀಗೆ ವಿವಿಧ ಶಿಬಿರಗಳ ಕಾರ್ಯಕರ್ತರು, ಪಾಲಕರು, ಚಿಣ್ಣರು ಉಪಸ್ಥಿತರಿದ್ದರು.

ಪ್ರತಿವರ್ಷ ಪಾಲಕರಿಗಾಗಿ ಭಾವಗೀತೆ, ಜಾನಪದ ಗೀತೆಗಳ ಸ್ಪರ್ಧೆಯನ್ನು ಆಯೋಜಿಸುತ್ತಿದ್ದು, ಈ ವರ್ಷ ಪ್ರತಿ ವಲಯದಲ್ಲಿ ಪಾಲಕರಿಗಾಗಿ ಚರ್ಚಾ ಗೋಷ್ಠಿಯನ್ನು ಏರ್ಪಡಿಸಿದ್ದು ವಿಶೇಷವಾಗಿದೆ. ಇದರ ಮೂಲಕ  ಪಾಲಕರ ವಾಕ್ಚಾತುರ್ಯಕ್ಕೆ ವಿಶೇಷವಾದ ಅವಕಾಶವನ್ನು ಕಲ್ಪಿಸಲಾಗಿದೆ. ಈಗಾಗಲೇ ಭಾಯಂದರ್‌, ಮೀರಾರೋಡ್‌ ವಲಯ, ವಿಕ್ರೋಲಿ, ಮುಲುಂಡ್‌ ಥಾಣೆ ವಲಯ ಹಾಗೂ ಕಲ್ವಾ, ಘೋಡ್‌ಬಂದರ್‌ ವಲಯಗಳ ಪಾಲಕರ ಚರ್ಚೆ ಯಶಸ್ವಿಯಾಗಿದ್ದು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.