ವೈಟಿಪಿಎಸ್‌ ಭೂಸಂತ್ರಸ್ತರ ಅರೆಬೆತ್ತಲೆ ಪ್ರತಿಭಟನೆ


Team Udayavani, Oct 27, 2017, 11:12 AM IST

ray-2.jpg

ರಾಯಚೂರು: ಯರಮರಸ್‌ ಶಾಖೋತ್ಪನ್ನ ಕೇಂದ್ರಕ್ಕೆ ಭೂಮಿ ನೀಡಿದ ಭೂ ಸಂತ್ರಸ್ತರ ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟರೂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸ್ಪಂದಿಸದ್ದಕ್ಕೆ ಪ್ರತಿಭಟನಾಕಾರರು ಗುರುವಾರ ಅರೆಬೆತ್ತಲೆ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಅ.23ರಂದು ವೈಟಿಪಿಎಸ್‌ ಕೇಂದ್ರಕ್ಕೆ ಬೀಗ ಜಡಿದು ಹೋರಾಟ ಆರಂಭಿಸಿದ ಪ್ರತಿಭಟನಾಕಾರರು ಕೇಂದ್ರದ ಎದುರೇ ಧರಣಿ ಕುಳಿತರು. ಹೋರಾಟಕ್ಕಿಳಿದು ನಾಲ್ಕು ದಿನವಾದರೂ ಸಂಬಂಧಿಸಿದ ಅಧಿಕಾರಿಗಳಾಗಲಿ, ಆಡಳಿತ ಪಕ್ಷದ ಯಾವುದೇ ಜನಪ್ರತಿನಿಧಿ ಗಳಾಗಲಿ ಕೇಂದ್ರಕ್ಕೆ ಭೇಟಿ ನೀಡಿ ನಮ್ಮ ಬೇಡಿಕೆಗೆ ಸ್ಪಂದಿಸುತ್ತಿಲ್ಲ. ಭೂಮಿ ಪಡೆಯುವಾಗ ಇದ್ದ ವರ್ತನೆ ಈಗ ಇಲ್ಲದಾಗಿದೆ. ಹತ್ತಾರು ಎಕರೆ ಭೂಮಿ ಕಳೆದುಕೊಂಡು ನಾವು ನಿತ್ಯ ಯಾತನೆ ಅನುಭವಿಸುವಂತಾಗಿದೆ ಎಂದು ದೂರಿದರು. 1100 ಎಕರೆ ಭೂಮಿ ವಶಪಡಿಸಿಕೊಂಡಿದ್ದು, ಸುತ್ತಲಿನ ಗ್ರಾಮಗಳಲ್ಲಿ ಕೇವಲ 100 ಜನರಿಗೆ ಮಾತ್ರ ಉದ್ಯೋಗ ನೀಡಲಾಗಿದೆ. ಭೂ ಸಂತ್ರಸ್ತರು ಬಿಟ್ಟು ಬೇರೆಯವರಿಗೆ ಉದ್ಯೋಗ ನೀಡುತ್ತಿದ್ದು, ನಮಗೆ ಆತ್ಮಹತ್ಯೆಯೊಂದೇ ದಾರಿ ಎನ್ನುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅರೆಬೆತ್ತಲೆ ಧರಣಿ ನಡೆಸಿದ ಪ್ರತಿಭಟನಾಕಾರರು ಅಧಿಕಾರಿಗಳು ನಮ್ಮ ಬೇಡಿಕೆಗೆಳಿಗೆ ಮನ್ನಣೆ ನೀಡದಿದ್ದ ಪಕ್ಷದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಎಚ್ಚರಿಸಿದರು.  ಈ ಬಗ್ಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರೂ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ. ವಿದ್ಯಾಭ್ಯಾಸಕ್ಕೆ ತಕ್ಕ ಹುದ್ದೆ ನೀಡಿದರೂ ನಮ್ಮ ತಕರಾರಿಲ್ಲ. ಆದರೆ, ಭೂಮಿ ಕಳೆದುಕೊಂಡವರನ್ನು ಬಿಟ್ಟು ಬೇರೆಯವರನ್ನು ನೇಮಿಸಿಕೊಳ್ಳುತ್ತಿದ್ದಾರೆ. ಸರ್ಕಾರದ ಅವೈಜ್ಞಾನಿಕ ನಿಯಮಗಳಿಂದ ಹುದ್ದೆ ಪಡೆಯಲಾಗದೆ ಸಮಸ್ಯೆ ಎದುರಿಸುತ್ತಿದ್ದು, ಶೀಘ್ರವೇ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು. ಏಗನೂರು, ವಡ್ಮೂರು, ಸಂಕನೂರು, ಕುಕನೂರು ಸೇರಿ ವಿವಿಧ ಗ್ರಾಮಗಳ ಭೂಸಂತ್ರಸ್ತರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.