ಮಿನಿವಿಧಾನ ಸೌಧದ ಅವ್ಯವಸ್ಥೆ ವಿರುದ್ಧ ಬಿಜೆಪಿ ಪ್ರತಿಭಟನೆ
Team Udayavani, Oct 27, 2017, 1:43 PM IST
ಮಹಾನಗರ: ಮಿನಿವಿಧಾನ ಸೌಧದಲ್ಲಿ ಸಾರ್ವಜನಿಕರಿಗೆ ಸಮರ್ಪಕವಾಗಿ ಸೇವೆ ಲಭಿಸುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಸಮಿತಿ ವತಿಯಿಂದ ಗುರುವಾರ ಸಂಜೆ ಮಿನಿವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಮಂಗಳೂರು ನಗರ ದಕ್ಷಿಣ ಅಧ್ಯಕ್ಷ ವೇದವ್ಯಾಸ ಕಾಮತ್ ಮಾತನಾಡಿ, ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆಯಲ್ಲಿ ಇಂದು ಮೆಸ್ಕಾಂ ಸಿಬಂದಿಗಳು ಫ್ಯೂಸ್ ತೆಗೆದುಕೊಂಡು ಹೋಗಿದ್ದರು. ಇದರಿಂದ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ಇಲ್ಲದೆ ಬಹುತೇಕ ಕೆಲಸಗಳು ಸ್ಥಗಿತಗೊಂಡಿದ್ದವು. ಕೆಲಸಗಳಿಗಾಗಿ ಸಾಲುಗಟ್ಟಿ ನಿಂತಿದ್ದ ಜನರ ಸ್ಥಿತಿಯ ಬಗ್ಗೆ ಅಧಿಕಾರಿಗಳು ಚಿಂತಿಸುತ್ತಿಲ್ಲ. ಈವರೆಗೆ ಮಿನಿ ವಿಧಾನಸೌಧದಲ್ಲಿ ಜನರೇಟರ್ ವ್ಯವಸ್ಥೆಯೇ ಇಲ್ಲ ಎಂದರೆ ಅಚ್ಚರಿಯಾಗುತ್ತದೆ. ಸಿಬಂದಿಗಳ ಕೊರತೆಯಿಂದಾಗಿ ಸರಕಾರಿ ದಾಖಲೆಗಳನ್ನು ಸಾರ್ವಜನಿಕರೇ ಹುಡುಕಿ ತೆಗೆದುಕೊಳ್ಳುವ ವ್ಯವಸ್ಥೆ ಇಲ್ಲಿ ಮಾತ್ರ ಇದೆ ಎಂದರು.
ಜಿಲ್ಲಾ ವಕ್ತಾರ ಜೀತೇಂದ್ರ ಕೊಟ್ಟಾರಿ, ಭಾಸ್ಕರ್ ಚಂದ್ರ ಶೆಟ್ಟಿ, ದೀಪಕ್ ಪೈ, ಸಂಜಯ್ ಪ್ರಭು, ಕಿರಣ್ ರೈ, ಅನಿಲ್ ಕುಮಾರ್ ಅತ್ತಾವರ, ಪುರುಷೋತ್ತಮ್ ಭಟ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ತಿಂಗಳುಗಟ್ಟಲೆ ಕಾಯಬೇಕಾದ ಸ್ಥಿತಿ
ನೋಡಲು ಅಂದವಾಗಿರುವ ಮಿನಿವಿಧಾನಸೌಧದಲ್ಲಿ ಸರಕಾರಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ. ಸಾರ್ವಜನಿಕರು ತಮ್ಮ ದಾಖಲೆ ಪಡೆದುಕೊಳ್ಳಲು ತಿಂಗಳುಗಟ್ಟಲೆ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ.ಒಂದು ದಾಖಲೆಗಾಗಿ ಹಲವು ಬಾರಿ ಓಡಾಡಬೇಕಾಗಿದೆ. ಇಲ್ಲಿಗೆ ಬರುವ ಸಾರ್ವಜನಿಕರ ವಾಹನ ನಿಲುಗಡೆಗಾಗಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲ. ಇಬ್ಬರು ಸಚಿವರ ಜಿಲ್ಲೆಯಲ್ಲಿಯೇ ಇಷ್ಟು ಅವ್ಯವಸ್ಥೆಗಳಿದ್ದರೂ ಈ ಬಗ್ಗೆ ಸಚಿವರುಗಳು ಗಮನಕೊಡದೆ ಪಕ್ಷದ ಕೆಲಸದಲ್ಲಿಯೇ ತಲ್ಲೀನರಾಗಿದ್ದಾರೆ. ಮುಂದಿನ ದಿನಗಳಲ್ಲಿ ಇಲ್ಲಿನ ಅವ್ಯವಸ್ಥೆ ಸರಿಪಡಿಸದೆ ಇದ್ದಲ್ಲಿ ತಾಲೂಕು ಪಂಚಾಯತ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು.
– ಮೋನಪ್ಪ ಭಂಡಾರಿ , ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.