ಪ್ರಾಮಾಣಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪರಿಸ್ಥಿತಿಯೇನು?
Team Udayavani, Oct 28, 2017, 8:31 AM IST
ಬೆಂಗಳೂರು: 2011ನೇ ಸಾಲಿನ ಕೆಪಿಎಸ್‌ಸಿ ನೇಮಕಾತಿಯಲ್ಲಿ ಪ್ರಾಮಾಣಿಕವಾಗಿ ಆಯ್ಕೆಗೊಂಡ ಅಭ್ಯರ್ಥಿಗಳೂ ಇರಬಹುದು. ಇದೀಗ ನೇಮಕಾತಿ ರದ್ದುಕೋರಿರುವುದರಿಂದ ಅಂತಹ ಅಭ್ಯರ್ಥಿಗಳಿಗೆ ಅನ್ಯಾಯವಾಗಬಹುದಲ್ಲವೇ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಕುರಿತ ಸಲ್ಲಿಕೆಯಾಗಿರುವ ಪಿಐಎಲ್ ಹಾಗೂ ತಕರಾರು ಅರ್ಜಿಗಳನ್ನು ಶುಕ್ರವಾರ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಚ್.ಜಿ ರಮೇಶ್ ಹಾಗೂ ನ್ಯಾ. ಪಿ.ಎಸ್ ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ನೇಮಕಾತಿ
ಪಟ್ಟಿಯಲ್ಲಿರುವ ಎಷ್ಟು ಅಭ್ಯರ್ಥಿಗಳು ಅಕ್ರಮದಲ್ಲಿ ಭಾಗಿಯಾಗಿದ್ದಾರೆಂಬ ಮಾಹಿತಿಯಿದ್ದರೆ ನೀಡಿ ಎಂದು ಅರ್ಜಿದಾರರ ಪರ ವಕೀಲರಿಗೆ ತಿಳಿಸಿತು. ಪ್ರಕರಣದ ತನಿಖಾ ವರದಿ ಸಲ್ಲಿಸಿರುವ ಸಿಐಡಿ ಕೂಡ ಈ ಅಂಶ ಉಲ್ಲೇಖೀಸಿಲ್ಲ. ಇದೀಗ ನೇಮಕಾತಿ ಅಧಿಸೂಚನೆ ರದ್ದುಕೋರಲಾಗಿದೆ. ಹೀಗಿದ್ದಾಗ, ಅಕ್ರಮ ಎಸಗದೇ ಆಯ್ಕೆ ಆಗಿರುವ ಅಭ್ಯರ್ಥಿಗಳಿಗೆ ಅನ್ಯಾಯವಾಗುವುದಿಲ್ಲವೇ? ಅವರ ಮುಂದಿನ ಪರಿಸ್ಥಿತಿಯೇನು ಎಂದು ಹೇಳಿತು. ಕೆಪಿಎಸ್‌ಸಿ ನೇಮಕಾತಿಯಲ್ಲಿ ರಾಜ್ಯಸರ್ಕಾರದ ಪಾತ್ರವೇನು
ಎಂಬುದರ ಬಗ್ಗೆಯೂ ಕೋರ್ಟ್ ವಿವರಣೆ ಪಡೆಯಿತು. ಸರ್ಕಾರಿ ಸೇವೆಗೆ ಸಂಬಂಧಿಸಿದ ಅರ್ಜಿಗಳು ಪಿಐಎಲ್ ಮಾನ್ಯತೆ ಹೊಂದಲಿವೆಯೇ ಎಂಬುದರ ಬಗ್ಗೆ ಅರ್ಜಿದಾರರ ಪರ ವಕೀಲರ ವಾದ ಆಲಿಸಿ ಅ.30ಕ್ಕೆ ವಿಚಾರಣೆ ಮುಂದೂಡಿತು.
ಮೈತ್ರಿಯಾಗೆ ಹುದ್ದೆ ನೀಡಲಾಗಿದೆಯೇ?
ಅರ್ಜಿದಾರರಾಗಿರುವ ಡಾ. ಮೈತ್ರಿಯಾ ಅವರ ನೇಮಕಾತಿ ಬಗ್ಗೆಯೂ ಮಾಹಿತಿ ಪಡೆದ ನ್ಯಾಯಪೀಠ, ಅವರಿಗೆ ಹುದ್ದೆ ಸಿಕ್ಕಿದೆಯೇ ಎಂದು ವಕೀಲರನ್ನು ಪ್ರಶ್ನಿಸಿತು. ಈ ವೇಳೆ ಇತರೆ ಅಭ್ಯರ್ಥಿಗಳ ಪರ ವಕೀಲರು, ಅವರೂ ಗ್ರೂಪ್ ಎ ಹುದ್ದೆಗೆ ಆಯ್ಕೆಗೊಂಡಿದ್ದಾರೆ. ಸಂದರ್ಶನದಲ್ಲಿಯೂ ಅಂಕ ನೀಡಲಾಗಿದೆ. 75 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂಬ ಆರೋಪ ಮಾಡಿದ್ದಾರೆ. ಇಷ್ಟಕ್ಕೂ ಕೆಪಿಎಸ್‌ಸಿ ಸದಸ್ಯರ ಕೊಠಡಿಗೆ ಅವರು ತೆರಳುವ ಅಗತ್ಯವೇನಿತ್ತು ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ನಿಮ್ಮ ವಾದ ಮಂಡನೆಗೆ ಅವಕಾಶ ಬಂದಾಗ ವಿವರಣೆ ನೀಡಿ ಎಂದು ತಾಕೀತು ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.