ಆಗುಂಬೆ ಘಾಟಿಯಲ್ಲಿ 20ಕ್ಕೂ ಅಧಿಕ ಮಂಗಗಳಿಗೆ ವಿಷಪ್ರಾಶನ
Team Udayavani, Oct 28, 2017, 11:40 AM IST
ಹೆಬ್ರಿ: ನಾಡಾ³ಲು ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯ ಆಗುಂಬೆ ಘಾಟಿ ಎರಡನೇ ಹೇರ್‌ಪಿನ್ ತಿರುವಿನ ರಸ್ತೆ ಬದಿಯಲ್ಲಿ ಇಪ್ಪತ್ತಕ್ಕೂ ಅಧಿಕ ಕಾಡು ಮಂಗಗಳು ವಿಷ ಪದಾರ್ಥ ತಿಂದು ಸಾವನ್ನಪ್ಪಿದ ಘಟನೆ ಅ.26ರಂದು ರಾತ್ರಿ ನಡೆದಿದೆ.
ಕಾಡು ಪ್ರಾಣಿಗಳಿಗಿಂತ ಕಡೆಯಾದ ಕಟುಕ ಹೃದಯಿಗಳು ಆಹಾರವನ್ನು ಹುಡುಕಿಕೊಂಡು ನಾಡಿಗೆ ಬಂದ ಮಂಗಗಳಿಗೆ ಯಾರೋ ಕಿಡಿಗೇಡಿಗಳು ಅವುಗಳಿಗೆ ಆಹಾರದಲ್ಲಿ ವಿಷ ಉಣಿಸಿ ಚೀಲದಲ್ಲಿ ಕಟ್ಟಿ ರಾತ್ರೋ ರಾತ್ರಿ ಘಾಟಿಯ ರಸ್ತೆ ಬದಿಯಲ್ಲಿ ಎಸೆದು ಹೋಗಿದ್ದಾರೆ ಎನ್ನಲಾಗಿದೆ. ಜೀವನ್ಮರಣ ಸ್ಥಿತಿಯಲ್ಲಿ ಹೊರಳಾಡುತ್ತಿದ್ದ ಮಂಗಗಳ ರಾಶಿಯನ್ನು ಗಮನಿಸಿದ ಸ್ಥಳೀಯರು ಹಾಗೂ ಕೆಲವು ಪ್ರಯಾಣಿಕರು ಮಂಗಗಳಿಗೆ ನೀರು ಕುಡಿಸಿ ಬದುಕಿಸಲು ಬಹಳ ಪ್ರಯತ್ನಪಟ್ಟರೂ ವಿಫಲವಾಗಿವೆ.
ಇತ್ತೀಚೆಗೆ ಇಂತಹ ಮೂಕ ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಸಾಯಿಸುತ್ತಿರುವುದು ಹೆಚ್ಚಾಗುತ್ತಿದ್ದು ತಪ್ಪಿತಸ್ಥರಿಗೆ ಕಠಿನ ಶಿಕ್ಷೆಯಾಗಬೇಕು ಹಾಗೂ ಅರಣ್ಯ ಇಲಾಖೆ ಈ ಬಗ್ಗೆ ಗಮನಹರಿಸಬೇಕು ಎಂದು ಸ್ಥಳೀಯರೊಬ್ಬರು ಪತ್ರಿಕೆಗೆ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಹೆಬ್ರಿ ವಲಯ ವನ್ಯಜೀವಿ ಇಲಾಖೆಯವರು ಆಗಮಿಸಿ ಮೃತ ಮಂಗಗಳ ದಫನದ ವಿಲೇವಾರಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.