ತಾ| ಮಟ್ಟದ ಕಲಾಶ್ರೀ ಪ್ರಶಸ್ತಿ ಶಿಬಿರ
Team Udayavani, Oct 28, 2017, 3:35 PM IST
ಬಂಟ್ವಾಳ: ಮಕ್ಕಳ ಪ್ರತಿಭೆ ಪ್ರದರ್ಶಿಸಲು ಪ್ರಶಸ್ತಿ ಪುರಸ್ಕಾರದಂತಹ ವೇದಿಕೆಗಳು ಸಹಕಾರಿ. ವಿದ್ಯಾರ್ಥಿಗಳು ಶಿಸ್ತಿನಿಂದ ಜೀವನ ನಡೆಸಿ ಶೈಕ್ಷಣಿಕವಾಗಿ ಮುಂದೆ ಬನ್ನಿ ಎಂದು ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಕರೆ ನೀಡಿದರು.
ಅವರು ಬಿ.ಸಿ.ರೋಡ್‌ನ ಸ್ತ್ರೀಶಕ್ತಿ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಮತ್ತು ತಾ| ಬಾಲಭವನ ಸಮಿತಿ ಬಂಟ್ವಾಳ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ 2017ನೇ ಸಾಲಿನ ತಾಲೂಕು ಮಟ್ಟದ ಕಲಾಶ್ರೀ ಪ್ರಶಸ್ತಿ ಶಿಬಿರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾ.ಪಂ. ಉಪಾಧ್ಯಕ್ಷ ಅಬ್ಟಾಸ್ ಅಲಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳು ಕೇವಲ ಪ್ರಶಸ್ತಿಯ ಹಿಂದೆ ಹೋಗದೆ ಸ್ಪರ್ಧೆಯಲ್ಲಿ ಭಾಗವಹಿಸಿ ಬದುಕಿನಲ್ಲಿ ಯಶಸ್ಸು ಗಳಿಸಿ ಎಂದರು. ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ. ಶಿಕ್ಷಕರಾದ ರಾಮಚಂದ್ರ ರಾವ್, ಚೆನ್ನಕೇಶವ, ಜಯಂತಿ , ವಿಟ್ಠಲ ನಾಯ್ಕ , ಗೋಪಾಲ ಅಂಚನ್, ಸಂದೀಪ್
ಸಾಲ್ಯಾನ್ ಮತ್ತಿತರ ಉಪಸ್ಥಿತರಿದ್ದರು.
ಶಿಶು ಅಭಿವೃದ್ದಿ ಯೋಜನಾಧಿಕಾರಿ ಸುಧಾ ಜೋಶಿ ಪ್ರಸ್ತಾವನೆ ನೀಡಿ ಸ್ವಾಗತಿಸಿದರು. ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ವಂದಿಸಿದರು. ಹಿರಿಯ ಮೇಲ್ವಿಚಾರಕಿ ಬಿ.ಭಾರತಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಅರ್ಜಿ ತಿರಸ್ಕೃತ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.