ಮತ್ತೆ ಗಲ್ಲಿನಿಂದ ಪಾರಾದ ದಂಡುಪಾಳ್ಯ

Team Udayavani, Oct 28, 2017, 4:15 PM IST

highcourt3.jpg

ಬೆಂಗಳೂರು: ಕಳೆದ 17 ವರ್ಷಗಳ ಹಿಂದೆ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಮಹಿಳೆಯೊಬ್ಬರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ತಂಡದ ಮೂವರು ಆರೋಪಿಗಳಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಮರಣದಂಡನೆಯನ್ನು ಹೈಕೋರ್ಟ್‌ ರದ್ದುಪಡಿಸಿದ್ದು, ಮೂವರಿಗೂ ಹತ್ತು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ದಂಡುಪಾಳ್ಯಗ್ಯಾಂಗ್‌ನ ಮುನಿಕೃಷ್ಣ, ವೆಂಕಟೇಶ್‌, ನಲ್ಲತಿಮ್ಮನಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಮರಣದಂಡನೆ ಖಾಯಂಗೊಳಿಸುವಂತೆ ಸಲ್ಲಿಕೆಯಾಗಿದ್ದ ಕ್ರಿಮಿನಲ್‌ ಮೇಲ್ಮನವಿ ಅರ್ಜಿಗಳನ್ನು ಇತ್ಯರ್ಥಪಡಿಸಿರುವ ನ್ಯಾಯಮೂರ್ತಿ ರವೀಮಳಿಮಠ ಹಾಗೂ ನ್ಯಾಯಮೂರ್ತಿ ಜಾನ್‌  ಮೈಕೆಲ್‌  ಕುನ್ಹಾ  ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

ಆರೋಪಿಗಳೇ ಮಹಿಳೆಯನ್ನು ಕೊಲೆಗೈದಿದ್ದಾರೆ ಎಂಬುದಕ್ಕೆ ಪ್ರಬಲ ಸಾಕ್ಷ್ಯಾಧಾರಗಳನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಶನ್‌ ವಿಫ‌ಲವಾಗಿದೆ ಎಂದು ಅಭಿಪ್ರಾಯಪಟ್ಟಿರುವ  ನ್ಯಾಯಪೀಠ, ಮರಣದಂಡನೆ ಶಿಕ್ಷೆಯನ್ನು ಮಾರ್ಪಾಡುಗೊಳಿಸಿ 10 ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿದೆ. ಇದೇ ಪ್ರಕರಣದ ಮತ್ತೋರ್ವ ಆರೋಪಿ ಲಕ್ಷ್ಮಮ್ಮ ಅವರನ್ನು ದೋಷಮುಕ್ತಗೊಳಿಸಿದೆ.

ಪ್ರಕರಣವೇನು?
ಕಾಮಾಕ್ಷಿಪಾಳ್ಯದ ಸುಧಾ ಎಂಬುವವರನ್ನು 2000ನೇ ಮಾರ್ಚ್‌ 22ರಂದು ಕತ್ತುಕೊಯ್ದು ಕೊಲೆಮಾಡಿ ಚಿನ್ನಾಭರಣ ದೋಚಿ ನಾಲ್ವರು ಆರೋಪಿಗಳು ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿ ಸಿಟಿ ಸಿವಿಲ್‌ ಸೆಷನ್ಸ್‌ ಕೋರ್ಟ್‌ಗೆ  ದೋಷಾರೋಪ  ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ನಾಲ್ವರು ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ 2010ರ ಸೆಪ್ಟೆಂಬರ್‌ನಲ್ಲಿ ತೀರ್ಪು ನೀಡಿತ್ತು.

ಕಡಿಮೆ ಅವಧಿಯಲ್ಲಿ 38 ಅರ್ಜಿಗಳ ಇತ್ಯರ್ಥ
ಕೊಲೆ, ಸುಲಿಗೆ ಪ್ರಕರಣಗಳ ಸಂಬಂಧ ದಂಡುಪಾಳ್ಯ ಗ್ಯಾಂಗ್‌ನ ವಿರುದ್ಧದ  38 ಕ್ರಿಮಿನಲ್‌ ಮೇಲ್ಮನವಿಗಳನ್ನು  ಹೈಕೋರ್ಟ್‌ ವಿಭಾಗೀಯ ಪೀಠ ಇತ್ಯರ್ಥಪಡಿಸಿದೆ. ಕಳೆದ ಜುಲೈ 9ರಿಂದ ದಂಡುಪಾಳ್ಯಗ್ಯಾಂಗ್‌ನ ವಿರುದ್ಧದ ಅರ್ಜಿಗಳನ್ನು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ರವೀಮಳಿಮs… ಹಾಗೂ ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ವಿಭಾಗೀಯ ಪೀಠ ಅರ್ಜಿಗಳನ್ನು ಇತ್ಯರ್ಥಪಡಿಸಿದೆ.

ದಂಡುಪಾಳ್ಯಗ್ಯಾಂಗ್‌ಗೆ ಮರಣದಂಡನೆ ಖಾಯಂಗೊಳಿಸುವಂತೆ 13 ಅರ್ಜಿಗಳು ಹಾಗೂ  25 ಮೇಲ್ಮನವಿಗಳನ್ನು ವಿಭಾಗೀಯಪೀಠ  ಇತ್ಯರ್ಥಪಡಿಸಿದ್ದು, ಅತ್ಯಂತ ಕಡಿಮೆ ಅವಧಿಯಲ್ಲಿಯೇ ವಿಭಾಗೀಯ ಪೀಠ ತ್ವರಿತವಾಗಿ  ಇತ್ಯರ್ಥಪಡಿಸಿದ್ದು ಇದೇ ಮೊದಲು ಎಂದು ಅರ್ಜಿದಾರರ ಪರ ವಕೀಲರು ಅಭಿಪ್ರಾಯಟ್ಟರು. ಅರ್ಜಿದಾರರ  ಪರ ವಕೀಲ ಹಸ್ಮತ್‌ಪಾಷಾ ಹಾಗೂ ಪ್ರಾಸಿಕ್ಯೂಶನ್‌ ಪರ ಎಚ್‌.ಎನ್‌ ನಿಲಗೋಳ್‌ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

156

Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.